Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 19:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀನು ಇಸ್ರಾಯೇಲರ ಸಮೂಹದವರಿಗೆ ಹೀಗೆ ಆಜ್ಞಾಪಿಸಬೇಕು, ‘ನಿಮ್ಮ ದೇವರಾದ ಯೆಹೋವನೆಂಬ ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನಿಮ್ಮ ದೇವರಾದ ಸರ್ವೇಶ್ವರನೆಂಬ ನಾನು ಪರಿಶುದ್ಧ ನಾಗಿರುವಂತೆ ನೀವು ಕೂಡ ಪರಿಶುದ್ಧ ರಾಗಿರಬೇಕು .

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀನು ಇಸ್ರಾಯೇಲ್ಯರ ಸಮೂಹದವರಿಗೆ ಹೀಗೆ ಆಜ್ಞಾಪಿಸಬೇಕು - ನಿಮ್ಮ ದೇವರಾದ ಯೆಹೋವನೆಂಬ ನಾನು ಪರಿಶುದ್ಧನಾಗಿರುವದರಿಂದ ನೀವೂ ಪರಿಶುದ್ಧರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಇಸ್ರೇಲರಿಗೆ ಹೀಗೆ ಹೇಳು: ನಾನೇ ನಿಮ್ಮ ದೇವರಾದ ಯೆಹೋವನು ನಾನು ಪರಿಶುದ್ಧನಾಗಿರುವಂತೆಯೇ ನೀವೂ ಪರಿಶುದ್ಧರಾಗಿರಬೇಕು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಇಸ್ರಾಯೇಲರ ಸಭೆಯವರೆಲ್ಲರ ಸಂಗಡ ಮಾತನಾಡಿ, ಅವರಿಗೆ ಹೀಗೆ ಹೇಳಬೇಕು: ‘ನೀವು ಪರಿಶುದ್ಧರಾಗಿರಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರಾದ ನಾನು ಪರಿಶುದ್ಧನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 19:2
20 ತಿಳಿವುಗಳ ಹೋಲಿಕೆ  

ನಾನು ನಿಮ್ಮ ದೇವರಾದ ಯೆಹೋವನಾಗಿರುವುದರಿಂದ ನೀವು ನನ್ನವರಾಗಿ ಪರಿಶುದ್ಧರಾಗಿರಬೇಕು.


ಆದುದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣನಾಗಿರುವ ಹಾಗೆಯೇ ನೀವೂ ಪರಿಪೂರ್ಣರಾಗಿರಿ.


ಯೆಹೋವನೆಂಬ ನಾನು ಪರಿಶುದ್ಧನಾಗಿದ್ದೇನೆ, ಮತ್ತು ನೀವು ನನ್ನ ಜನರಾಗುವಂತೆ ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ್ದೇನೆ; ಆದುದರಿಂದ ನೀವು ನನಗೆ ಮೀಸಲಾಗಿರಬೇಕು.


ನೀವು ನನಗೆ ಶ್ರೇಷ್ಠ ಯಾಜಕರೂ, ಪರಿಶುದ್ಧ ಜನರೂ ಆಗಿರುವಿರಿ’ ನೀನು ಇಸ್ರಾಯೇಲರಿಗೆ ಹೇಳಬೇಕಾದ ಮಾತುಗಳು ಇವೇ” ಅಂದನು.


ಅವರು ನಿಮ್ಮ ದೇವರ ಆಹಾರವನ್ನು ಸಮರ್ಪಿಸುವವರಾದ ಕಾರಣ ಅವರನ್ನು ದೇವರ ಸೇವಕರೆಂದು ಭಾವಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಯೆಹೋವನೆಂಬ ನಾನು ಪರಿಶುದ್ಧನಾಗಿರುವುದರಿಂದ ಅವರನ್ನು ಪರಿಶುದ್ಧರೆಂದು ನೀವು ಭಾವಿಸಬೇಕು.


ಪ್ರಿಯರೇ, ಈ ವಾಗ್ದಾನಗಳು ನಮಗಿರುವುದರಿಂದ, ನಾವು ದೇಹಾತ್ಮಗಳ ಕಲ್ಮಷವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತೆಯ ಸಂಪೂರ್ಣತೆಗೆ ಪ್ರಯತ್ನಿಸೋಣ.


ಗೊತ್ತುಮಾಡಿಕೊಳ್ಳದೆ ಯಾರಾದರಿಬ್ಬರು ಜೊತೆಯಾಗಿ ನಡೆಯುವುದುಂಟೆ?


ನಾವು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ದೋಷವಿಲ್ಲದವರೂ ಆಗಿರಬೇಕೆಂದು, ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ದೇವರು ಕ್ರಿಸ್ತನಲ್ಲಿ ನಮ್ಮನ್ನು ಆರಿಸಿಕೊಂಡನು.


ನೀವು ನನಗೆ ಪರಿಶುದ್ಧ ಜನರಾಗಿರಬೇಕು. ಆದುದರಿಂದ ಕಾಡುಮೃಗ ಕೊಂದದ್ದನ್ನು ನೀವು ತಿನ್ನಬಾರದು, ಅದನ್ನು ನಾಯಿಗಳಿಗೆ ಬಿಡಬೇಕು.


ಯೆಹೋವನು ಮೋಶೆಯೊಂದಿಗೆ ಮಾತನಾಡಿ,


ಆಗ ಯೆಹೋಶುವನು ಅವರಿಗೆ, “ನೀವು ಯೆಹೋವನನ್ನು ಸೇವಿಸಲು ಶಕ್ತರಲ್ಲ. ಯೆಹೋವನು ಪರಿಶುದ್ಧನು; ತನಗೆ ಸಲ್ಲಿಸಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ದೇವರು; ಆತನು ನಿಮ್ಮ ಪಾಪ, ಅಪರಾಧಗಳನ್ನೂ, ಕ್ಷಮಿಸುವುದಿಲ್ಲ.


“ಯೆಹೋವನಂಥ ಪರಿಶುದ್ಧನು ಇಲ್ಲವೇ ಇಲ್ಲ; ನಿನ್ನ ಹೊರತು ದೇವರು ಯಾರೂ ಇಲ್ಲ ನಮ್ಮ ದೇವರಂತಹ ಸಮಾನವಾದ ಆಶ್ರಯವಿಲ್ಲ.


ಅವರು ಯೆಹೋವನ ಭಯಂಕರವಾದ ಮಹಾನಾಮವನ್ನು ಕೊಂಡಾಡಲಿ; ಆತನು ಪರಿಶುದ್ಧನು.


ಇಲ್ಲವಾದರೆ ಅವನ ಸಂತತಿಯ ಸ್ವಜನರೊಳಗೆ ಅವನು ಅಪವಾದಕ್ಕೆ ಗುರಿಯಾಗುವನು. ಅವನನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು’” ಎಂದು ಹೇಳಿದನು.


ಅವನಿಗೆ ಕಳಂಕವಿರುವುದರಿಂದ ತೆರೆಯನ್ನು ದಾಟಿ ಒಳಗೆ ಬರಬಾರದು; ಯಜ್ಞವೇದಿಯ ಬಳಿಗೆ ಬರಬಾರದು; ನನ್ನ ಪವಿತ್ರಸ್ಥಾನಗಳ ಗೌರವಕ್ಕೆ ಅವನಿಂದ ಕುಂದು ಉಂಟಾಗಬಾರದು; ಆ ಸ್ಥಾನಗಳನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು’” ಎಂದು ಹೇಳಿದನು.


ಆದುದರಿಂದ ಈಗ ನಾನು ನಿಮಗೆ ಹೇಳುವ ನಿಮ್ಮ ದೇವರಾದ ಯೆಹೋವನ ಮಾತುಗಳಿಗೆ ಕಿವಿಗೊಟ್ಟು ಆತನ ಆಜ್ಞಾವಿಧಿಗಳನ್ನು ಅನುಸರಿಸಬೇಕು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು