“ಯಾವನಾದರೂ ಯೆಹೋವನಿಗೆ ಸಲ್ಲಿಸಬೇಕಾದ ದೇವರ ವಸ್ತುಗಳನ್ನು ಸಮರ್ಪಿಸುವುದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ ಅವನು ಆ ಅಪರಾಧದ ಪ್ರಾಯಶ್ಚಿತ್ತಕ್ಕಾಗಿ ಪೂರ್ಣಾಂಗವಾದ ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಯೆಹೋವನಿಗೆ ಸಮರ್ಪಿಸಬೇಕು ಅಥವಾ ದೇವರ ಸೇವೆಗೆ ನೇಮಕವಾದ ಎರಡು ಬೆಳ್ಳಿ ನಾಣ್ಯ ಅಥವಾ ಹೆಚ್ಚು ಬೆಲೆ ಬಾಳುವ ಟಗರನ್ನು ಹಿಂಡಿನಿಂದ ತಂದು ಅರ್ಪಿಸಬೇಕು.
“‘ಕುರಿಯನ್ನು ಕೊಡುವುದಕ್ಕೆ ಅವನಿಗೆ ಗತಿಯಿಲ್ಲದ ಪಕ್ಷದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಬಂದು, ಒಂದನ್ನು ದೋಷಪರಿಹಾರಕ ಯಜ್ಞವಾಗಿ ಮತ್ತೊಂದನ್ನು ಸರ್ವಾಂಗಹೋಮವಾಗಿ ಯೆಹೋವನಿಗೆ ಸಮರ್ಪಿಸಬೇಕು.