Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 19:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 “‘ನೀವು ಆ ದೇಶದಲ್ಲಿ ಸೇರಿದಾಗ ಆಹಾರಕ್ಕಾಗಿ ಯಾವ ಜಾತಿಯ ಹಣ್ಣಿನ ಸಸಿಯನ್ನು ನೆಟ್ಟರೂ, ಅದರ ಫಲವನ್ನು ಮೂರು ವರ್ಷದ ತನಕ ಅಶುದ್ಧವೆಂದೆಣಿಸಿ ತಿನ್ನದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 “ನೀವು ಆ ಕಾನಾನ್ ನಾಡನ್ನು ಸೇರಿದಾಗ ಆಹಾರಕ್ಕಾಗಿ ಯಾವ ಜಾತಿಯ ಹಣ್ಣಿನ ಸಸಿಯನ್ನು ನೆಟ್ಟರೂ ಅದರ ಫಲವನ್ನು ಮೂರು ವರ್ಷದ ತನಕ ಅಶುದ್ಧವೆಂದೆಣಿಸಿ ಅದನ್ನು ತಿನ್ನದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನೀವು ಆ ದೇಶದಲ್ಲಿ ಸೇರಿದಾಗ ಆಹಾರಕ್ಕಾಗಿ ಯಾವ ಜಾತಿಯ ಹಣ್ಣಿನ ಸಸಿಯನ್ನು ನೆಟ್ಟರೂ ಅದರ ಫಲವನ್ನು ಮೂರು ವರುಷದ ತನಕ ಅಶುದ್ಧವೆಂದೆಣಿಸಿ ತಿನ್ನದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ಮುಂದೆ ನೀವು ನಿಮ್ಮ ದೇಶವನ್ನು ಪ್ರವೇಶಿಸುವಿರಿ. ಆ ಸಮಯದ ಆಹಾರಕ್ಕಾಗಿ ಅನೇಕ ವಿಧಗಳ ಮರಗಳನ್ನು ನೆಡುವಿರಿ. ಸಸಿಯನ್ನು ನೆಟ್ಟನಂತರ, ನೀವು ಆ ಮರದಿಂದ ಹಣ್ಣನ್ನು ಉಪಯೋಗಿಸುವುದಕ್ಕೆ ಮೂರು ವರ್ಷಗಳು ಕಾಯಬೇಕು. ನೀವು ಆ ಹಣ್ಣನ್ನು ಉಪಯೋಗಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ ‘ನೀವು ದೇಶದೊಳಗೆ ಬಂದು ಎಲ್ಲಾ ತರಹದ ಮರಗಳನ್ನು ಆಹಾರಕ್ಕೋಸ್ಕರ ನೆಟ್ಟಾಗ, ಅದರ ಫಲವನ್ನು ಮೂರು ವರುಷಗಳವರೆಗೆ ಅಶುದ್ಧವೆಂದೆಣಿಸಿ ಅದನ್ನು ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 19:23
12 ತಿಳಿವುಗಳ ಹೋಲಿಕೆ  

“ಹಠಮಾರಿಗಳೇ, ಮನಶುದ್ಧಿಯೂ, ಕರ್ಣಶುದ್ಧಿಯೂ ಇಲ್ಲದವರೇ, ನಿಮ್ಮ ಪೂರ್ವಿಕರು ಹೇಗೋ ಹಾಗೆಯೇ ನೀವೂ ಯಾವಾಗಲೂ ಪವಿತ್ರಾತ್ಮನಿಗೆ ಎದುರಾಗಿ ನಡೆಯುವವರಾಗಿದ್ದೀರಿ.


“ಕರುವಾಗಲಿ, ಕುರಿಮರಿಯಾಗಲಿ ಅಥವಾ ಆಡುಮರಿಯಾಗಲಿ ಹುಟ್ಟಿದಾಗ ಅದು ಏಳು ದಿನಗಳ ವರೆಗೆ ತಾಯಿಯ ಬಳಿಯಲ್ಲಿ ಇರಬೇಕು. ಎಂಟನೆಯ ದಿನದಿಂದ ಅದನ್ನು ಯೆಹೋವನಿಗೆ ಹೋಮವಾಗಿ ಸಮರ್ಪಿಸಿದರೆ ಅದು ಅಂಗೀಕಾರವಾಗುವುದು.


ನಾನು, ಯಾರ ಸಂಗಡ ಮಾತನಾಡಿ ಅವರು ಗಮನಿಸುವಂತೆ ಸಾಕ್ಷಿಕೊಡಲಿ? ಇಗೋ, ಅವರ ಕಿವಿ ಮುಚ್ಚಲ್ಪಟ್ಟಿವೆ. ಅಯ್ಯೋ, ಯೆಹೋವನ ಮಾತು ಅವರಿಗೆ ತಿರಸ್ಕಾರ, ಅದರಲ್ಲಿ ಅವರಿಗೆ ಆನಂದವೇ ಇಲ್ಲ.


“ನಾನು ನಿಮಗೆ ಸ್ವದೇಶವಾಗಿ ಕೊಡುವ ಕಾನಾನ್ ದೇಶಕ್ಕೆ ನೀವು ಬಂದ ನಂತರ ಆ ದೇಶದ ಯಾವ ಮನೆಯ ಗೋಡೆಗಳಲ್ಲಿ ನಾನು ಕುಷ್ಠದ ಗುರುತನ್ನು ಉಂಟುಮಾಡುವೆನೋ,


ಎಂಟನೆಯ ದಿನದಲ್ಲಿ ಆ ಮಗುವಿಗೆ ಸುನ್ನತಿಮಾಡಿಸಬೇಕು.


ಅದಕ್ಕೆ ಮೋಶೆ ಯೆಹೋವನ ಸನ್ನಿಧಿಯಲ್ಲಿ, “ಇಗೋ, ಇಸ್ರಾಯೇಲರೇ ನನ್ನ ಮಾತುಗಳನ್ನು ಕೇಳುತ್ತಿಲ್ಲ; ಹೀಗಿರುವಾಗ ತೊದಲು ಮಾತನಾಡುವ ನನ್ನ ಮಾತುಗಳಿಗೆ ಫರೋಹನು ಕಿವಿಗೊಟ್ಟಾನೇ?” ಅಂದನು.


ಆದರೆ ಮೋಶೆಯು ಯೆಹೋವನಿಗೆ, “ಇಗೋ, ಸ್ವಾಮಿ ನಾನು ಮಾತನಾಡುವುದರಲ್ಲಿ ಜಾಣನಲ್ಲ, ಫರೋಹನು ನನ್ನ ಮಾತನ್ನು ಹೇಗೆ ಕೇಳಾನು” ಅಂದನು.


ಅವನ ದೋಷಪರಿಹಾರಕ್ಕಾಗಿ ಯಾಜಕನು ಆ ಟಗರನ್ನು ಪ್ರಾಯಶ್ಚಿತ್ತಯಜ್ಞವಾಗಿ ಯೆಹೋವನಿಗೆ ಸಮರ್ಪಿಸಿ, ಅವನಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.


ನಾಲ್ಕನೆಯ ವರ್ಷದಲ್ಲಿ ಅದರ ಎಲ್ಲಾ ಹಣ್ಣುಗಳೂ ದೇವರದಾಗಿರಬೇಕು; ಅವುಗಳನ್ನು ಯೆಹೋವನಿಗೆ ಕೃತಜ್ಞತೆಯ ಕಾಣಿಕೆಯನ್ನಾಗಿ ಸಮರ್ಪಿಸಬೇಕು.


ನೀವು ನಿಮ್ಮ ದೇವರಿಗೆ ಸಲ್ಲಿಸಬೇಕಾದದ್ದನ್ನು ತಂದು ಕೊಡುವವರೆಗೂ ಆ ವರ್ಷದ ಬೆಳೆಯ ರೊಟ್ಟಿಯನ್ನಾಗಲಿ, ಸುಟ್ಟ ತೆನೆಗಳನ್ನಾಗಲಿ ಅಥವಾ ಹಸಿತೆನೆಗಳನ್ನಾಗಲಿ ತಿನ್ನಲೇಬಾರದು. ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ವಾಸಸ್ಥಾನಗಳಲ್ಲಿಯೂ ಇದು ಶಾಶ್ವತನಿಯಮ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು