Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 19:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಐದನೆಯ ವರ್ಷದಲ್ಲಿ ಅದರಿಂದ ಉಂಟಾಗುವ ಆದಾಯವು ನಿಮ್ಮದೇ ಆಗಿರುವುದು; ಅದರ ಫಲಗಳನ್ನು ನೀವು ತಿನ್ನಬಹುದು. ನಾನು ನಿಮ್ಮ ದೇವರಾದ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಐದನೆಯ ವರ್ಷದಲ್ಲಿ ಅಂದು ಮೊದಲ್ಗೊಂಡು ಅದರ ಫಲಗಳನ್ನು ನೀವು ತಿನ್ನಬಹುದು. ನಿಮಗೆ ಹೆಚ್ಚು ಫಲ ದೊರಕುವುದು. ನಿಮ್ಮ ದೇವರಾದ ಸರ್ವೇಶ್ವರ ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಐದನೆಯ ವರುಷದಲ್ಲಿ ಅದರಿಂದುಂಟಾಗುವ ಆದಾಯವು ನಿಮ್ಮದೇ ಆಗಿರುವದು; ಅದರ ಫಲಗಳನ್ನು ನೀವು ತಿನ್ನಬಹುದು. ನಾನು ನಿಮ್ಮ ದೇವರಾದ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಬಳಿಕ ಐದನೆಯ ವರ್ಷದಲ್ಲಿ, ನೀವು ಆ ಮರದ ಹಣ್ಣುಗಳನ್ನು ತಿನ್ನಬಹುದು ಮತ್ತು ಮರವು ನಿಮಗೆ ಹೆಚ್ಚೆಚ್ಚಾಗಿ ಹಣ್ಣುಗಳನ್ನು ನೀಡುವುದು. ನಾನೇ ನಿಮ್ಮ ದೇವರಾದ ಯೆಹೋವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಐದನೆಯ ವರುಷದಲ್ಲಿ ಅದರ ಫಲವನ್ನು ನೀವು ತಿನ್ನಬೇಕು. ಆಗ ಅದು ನಿಮಗೆ ಇನ್ನೂ ಸಮೃದ್ಧಿಯಾಗಿ ಫಲಿಸುವುದು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 19:25
13 ತಿಳಿವುಗಳ ಹೋಲಿಕೆ  

ನಾಲ್ಕನೆಯ ವರ್ಷದಲ್ಲಿ ಅದರ ಎಲ್ಲಾ ಹಣ್ಣುಗಳೂ ದೇವರದಾಗಿರಬೇಕು; ಅವುಗಳನ್ನು ಯೆಹೋವನಿಗೆ ಕೃತಜ್ಞತೆಯ ಕಾಣಿಕೆಯನ್ನಾಗಿ ಸಮರ್ಪಿಸಬೇಕು.


“‘ರಕ್ತಸಹಿತವಾದ ಯಾವ ಮಾಂಸವನ್ನು ತಿನ್ನಬಾರದು. “‘ಯಂತ್ರಮಂತ್ರಗಳನ್ನು ಮಾಡಬಾರದು, ಶಕುನಗಳನ್ನು ನೋಡಬಾರದು.


“‘ಪ್ರತಿಯೊಬ್ಬನು ತನ್ನ ತಾಯಿತಂದೆಗಳ ವಿಷಯದಲ್ಲಿ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ಆಚರಿಸಬೇಕು. ನಾನು ನಿಮ್ಮ ದೇವರಾದ ಯೆಹೋವನು.


“‘ಸುಳ್ಳುದೇವರುಗಳ ಕಡೆಗೆ ತಿರುಗಿಕೊಳ್ಳಬಾರದು; ದೇವರೆಂದು ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬಾರದು. ನಾನು ನಿಮ್ಮ ದೇವರಾದ ಯೆಹೋವನು.


ದ್ರಾಕ್ಷಿಯ ತೋಟಗಳಲ್ಲಿಯೂ ಹಕ್ಕಲಾಯಬಾರದು; ಉದುರಿದ ಹಣ್ಣುಗಳನ್ನು ಆರಿಸಿಕೊಳ್ಳದೆ ಬಡವರಿಗೂ ಮತ್ತು ಪರದೇಶಿಗಳಿಗೂ ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾದ ಯೆಹೋವನು.


ನೀವು ನಿಮ್ಮ ದೇವರಿಗೆ ಸಲ್ಲಿಸಬೇಕಾದದ್ದನ್ನು ತಂದು ಕೊಡುವವರೆಗೂ ಆ ವರ್ಷದ ಬೆಳೆಯ ರೊಟ್ಟಿಯನ್ನಾಗಲಿ, ಸುಟ್ಟ ತೆನೆಗಳನ್ನಾಗಲಿ ಅಥವಾ ಹಸಿತೆನೆಗಳನ್ನಾಗಲಿ ತಿನ್ನಲೇಬಾರದು. ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ವಾಸಸ್ಥಾನಗಳಲ್ಲಿಯೂ ಇದು ಶಾಶ್ವತನಿಯಮ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು