ಯಾಜಕಕಾಂಡ 19:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 “‘ಸತ್ತವರಿಗೋಸ್ಕರ ದುಃಖವನ್ನು ಸೂಚಿಸುವುದಕ್ಕಾಗಿ ದೇಹವನ್ನು ಗಾಯಮಾಡಿಕೊಳ್ಳಬಾರದು. ಶರೀರದ ಮೇಲೆ ಹಚ್ಚೇ ಹಾಕಿಸಿಕೊಳ್ಳಬಾರದು. ನಾನು ಯೆಹೋವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಸತ್ತವರಿಗಾಗಿ ಸಂತಾಪ ಸೂಚಿಸಲು ದೇಹವನ್ನು ಗಾಯಗೊಳಿಸಿಕೊಳ್ಳಬೇಡ. ಶರೀರದ ಮೇಲೆ ಹಚ್ಚೇಚುಚ್ಚಿಸಿಕೊಳ್ಳಬೇಡ. ನಾನು ಸರ್ವೇಶ್ವರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಸತ್ತವರಿಗೋಸ್ಕರ ದುಃಖವನ್ನು ಸೂಚಿಸುವದಕ್ಕಾಗಿ ದೇಹವನ್ನು ಗಾಯಮಾಡಿಕೊಳ್ಳಬಾರದು. ಶರೀರದ ಮೇಲೆ ಹಚ್ಚೇ ಚುಚ್ಚಿಸಿಕೊಳ್ಳಬಾರದು. ನಾನು ಯೆಹೋವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಸತ್ತವರನ್ನು ಜ್ಞಾಪಕ ಮಾಡಿಕೊಳ್ಳುವುದಕ್ಕಾಗಿ ನಿಮ್ಮ ದೇಹವನ್ನು ಗಾಯಮಾಡಿಕೊಳ್ಳಬಾರದು. ಶರೀರದ ಮೇಲೆ ಹಚ್ಚೇ ಚುಚ್ಚಿಸಿಕೊಳ್ಳಬಾರದು. ನಾನೇ ಯೆಹೋವನು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 “ ‘ಸತ್ತವರಿಗಾಗಿ ನಿಮ್ಮ ಶರೀರವನ್ನು ಕೊಯ್ದುಕೊಳ್ಳಬಾರದು. ನಿಮ್ಮ ಮೇಲೆ ಯಾವ ಹಚ್ಚೆಗಳನ್ನೂ ಹಚ್ಚಿಸಿಕೊಳ್ಳಬಾರದು. ನಾನೇ ಯೆಹೋವ ದೇವರು. ಅಧ್ಯಾಯವನ್ನು ನೋಡಿ |
ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯ ತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ, ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನಗೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡದೇ ತಮ್ಮ ಹಣೆಯ ಮೇಲೆ ಮತ್ತು ಕೈಗಳ ಮೇಲೆ ಅದರ ಗುರುತು ಹಾಕಿಸಿಕೊಳ್ಳದವರನ್ನೂ ಕಂಡೆನು. ಅವರು ಪುನಃ ಜೀವಿತರಾಗಿ ಎದ್ದು ಸಾವಿರ ವರ್ಷ ಕ್ರಿಸ್ತನೊಂದಿಗೆ ಆಳಿದರು.