Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 19:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 “‘ಮಗಳನ್ನು ವೇಶ್ಯೆಯನ್ನಾಗಿ ಮಾಡಬಾರದು. ಹಾಗೆ ಮಾಡಿದರೆ ವೇಶ್ಯಾವಾಟಿಕೆ ಪ್ರಬಲವಾಗಿ ದೇಶದಲ್ಲೆಲ್ಲಾ ತುಂಬಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 “ಮಗಳನ್ನು ಬಸವಿಬಿಟ್ಟು ವೇಶ್ಯೆಯನ್ನಾಗಿ ಮಾಡಬೇಡ. ಹಾಗೆ ಮಾಡಿದರೆ ಸೂಳೆಗಾರಿಕೆ ಪ್ರಬಲವಾಗಿ ನಾಡಿನಲ್ಲೆಲ್ಲಾ ತುಂಬಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಮಗಳನ್ನು ಬಸವಿಬಿಟ್ಟು ಸೂಳೆಯನ್ನಾಗಿ ಮಾಡಬಾರದು. ಹಾಗೆ ಮಾಡಿದರೆ ಸೂಳೆಗಾರಿಕೆ ಪ್ರಬಲವಾಗಿ ದೇಶದಲ್ಲೆಲ್ಲಾ ತುಂಬಿಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ಮಗಳನ್ನು ಸೂಳೆಯನ್ನಾಗಿ ಮಾಡಬಾರದು. ಇದರಿಂದ ಸೂಳೆಗಾರಿಕೆ ಹೆಚ್ಚಾಗುತ್ತದೆ. ನಿಮ್ಮ ದೇಶದಲ್ಲಿ ಸೂಳೆಗಾರಿಕೆ ಇರದಂತೆ ನೋಡಿಕೊಳ್ಳಿರಿ. ಇಂಥ ಪಾಪದಿಂದ ನಿಮ್ಮ ದೇಶವು ತುಂಬಿಹೋಗಲು ಬಿಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ ‘ನಿನ್ನ ಮಗಳು ವೇಶ್ಯೆಯಾಗುವಂತೆ ವ್ಯಭಿಚಾರಕ್ಕೆ ಬಿಡಬಾರದು. ಹಾಗೆ ಮಾಡಿದರೆ, ದೇಶವು ವೇಶ್ಯೆತನಕ್ಕೆ ಒಳಪಡುವುದು ಮತ್ತು ಕೆಟ್ಟತನದಿಂದ ತುಂಬಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 19:29
7 ತಿಳಿವುಗಳ ಹೋಲಿಕೆ  

ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬುದು ನಿಮಗೆ ತಿಳಿಯದೋ? ಹೀಗಿರಲಾಗಿ ಕ್ರಿಸ್ತನ ಅಂಗಗಳಾಗಿರುವಂಥವುಗಳನ್ನು ತೆಗೆದು ವೇಶ್ಯೆಯ ಅಂಗಗಳೊಡನೆ ಸೇರಿಸುವುದು ಸರಿಯೋ? ಎಂದಿಗೂ ಹಾಗೆ ಮಾಡಬಾರದು


ಯಾಜಕರು ತಮ್ಮ ದೇವರಿಗೆ ಮೀಸಲಾದವರು ಆಗಿರುವುದರಿಂದ ವೇಶ್ಯ ಸ್ತ್ರೀಯನ್ನಾಗಲಿ, ಮಾನವನ್ನು ಭಂಗಪಡಿಸಿಕೊಂಡ ಸ್ತ್ರೀಯನ್ನಾಗಲಿ ಅಥವಾ ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು.


“‘ಸತ್ತವರಿಗೋಸ್ಕರ ದುಃಖವನ್ನು ಸೂಚಿಸುವುದಕ್ಕಾಗಿ ದೇಹವನ್ನು ಗಾಯಮಾಡಿಕೊಳ್ಳಬಾರದು. ಶರೀರದ ಮೇಲೆ ಹಚ್ಚೇ ಹಾಕಿಸಿಕೊಳ್ಳಬಾರದು. ನಾನು ಯೆಹೋವನು.


ಯಾಜಕನ ಮಗಳು ವೇಶ್ಯೆ ಎಂಬ ನಿಂದೆಗೆ ಒಳಗಾದರೆ ತನ್ನ ತಂದೆಯನ್ನು ನಿಂದೆಗೆ ಒಳಪಡಿಸಿದವಳಾದಳು, ಅವಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು.


ಅವಳು ತಂದೆಯ ಅಧೀನದಲ್ಲಿರುವಾಗಲ್ಲೇ ಪರಪುರುಷನೊಡನೆ ಸಂಪರ್ಕಮಾಡಿ ಇಸ್ರಾಯೇಲರೊಳಗೆ ದುರಾಚಾರವನ್ನು ನಡಿಸಿದ್ದರಿಂದ, ಅವರು ಅವಳನ್ನು ತಂದೆಯ ಮನೆಯ ಬಾಗಿಲಿಗೆ ಕರೆಯಿಸಬೇಕು; ಊರಿನವರೆಲ್ಲರು ಅವಳನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ನಿವಾರಿಸಿಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು