ಯಾಜಕಕಾಂಡ 19:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 “‘ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ನೀವು ಆಚರಿಸಬೇಕು; ನನ್ನ ದೇವಸ್ಥಾನದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಯೆಹೋವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ಆಚರಿಸಬೇಕು. ನನ್ನ ಆಲಯದ ಬಗ್ಗೆ ಭಯಭಕ್ತಿಯುಳ್ಳವರಾಗಿರಬೇಕು. ನಾನು ಸರ್ವೇಶ್ವರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ನಾನು ನೇವಿುಸಿರುವ ಸಬ್ಬತ್‍ದಿನಗಳನ್ನು ಆಚರಿಸಬೇಕು; ನನ್ನ ದೇವಸ್ಥಾನದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಯೆಹೋವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 “ನೀವು ನನ್ನ ಸಬ್ಬತ್ ದಿನಗಳನ್ನು ಅನುಸರಿಸಬೇಕು. ನನ್ನ ವಿಶ್ರಾಂತಿಯ ವಿಶೇಷ ದಿನಗಳಲ್ಲಿ ನೀವು ಕೆಲಸ ಮಾಡಬಾರದು. ನೀವು ನನ್ನ ಪವಿತ್ರಸ್ಥಳವನ್ನು ಗೌರವಿಸಬೇಕು. ನಾನೇ ಯೆಹೋವನು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 “ ‘ನನ್ನ ವಿಶ್ರಾಂತಿಯ ದಿನಗಳನ್ನು ನೀವು ಆಚರಿಸಬೇಕು. ನನ್ನ ಪರಿಶುದ್ಧಸ್ಥಳದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನೇ ಯೆಹೋವ ದೇವರು. ಅಧ್ಯಾಯವನ್ನು ನೋಡಿ |
ತಾನು ಮಾಡಿಸಿದ ವಿಗ್ರಹ ಸ್ತಂಭವನ್ನು ದೇವಾಲಯದಲ್ಲಿಡಿಸಿದನು. ಯೆಹೋವನು ಆ ಆಲಯದ ವಿಷಯದಲ್ಲಿ ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ, “ಇಸ್ರಾಯೇಲರು ಮೋಶೆಯ ಮುಖಾಂತರ ತಮಗೆ ಕೊಡಲ್ಪಟ್ಟ ನನ್ನ ಎಲ್ಲಾ ಧರ್ಮಶಾಸ್ತ್ರದ ವಿಧಿವಿಧಾನಗಳನ್ನು ಅನುಸರಿಸಿ ನಡೆಯುವುದಾದರೆ ನನ್ನ ನಾಮಮಹತ್ತು ಈ ದೇವಾಲಯದಲ್ಲಿಯೂ ಇಸ್ರಾಯೇಲರ ಎಲ್ಲಾ ಊರುಗಳಲ್ಲಿಯೂ ನನಗೆ ಇಷ್ಟವಾಗಿರುವ ಯೆರೂಸಲೇಮಿನಲ್ಲಿಯೂ ಸದಾಕಾಲವಿರುವುದು.