ಯಾಜಕಕಾಂಡ 19:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ತಕ್ಕಡಿ, ತೂಕದ ಕಲ್ಲು, ಕೊಳಗ ಮತ್ತು ಸೇರು ಇವುಗಳೆಲ್ಲಾ ನ್ಯಾಯವಾಗಿಯೇ ಇರಬೇಕು. ನಾನು ನಿಮ್ಮನ್ನು ಐಗುಪ್ತದೇಶದಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ತಕ್ಕಡಿ, ತೂಕದಕಲ್ಲು, ಕೊಳಗ, ಸೇರು ಇವುಗಳೆಲ್ಲವು ನ್ಯಾಯಬದ್ಧವಾಗಿಯೇ ಇರಬೇಕು. ಈಜಿಪ್ಟಿನಿಂದ ನಿಮ್ಮನ್ನು ಬರಮಾಡಿದ ನಿಮ್ಮ ದೇವರಾದ ಸರ್ವೇಶ್ವರ ನಾನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ತಕ್ಕಡಿ, ತೂಕದ ಕಲ್ಲು, ಕೊಳಗ, ಸೇರು ಇವುಗಳೆಲ್ಲಾ ನ್ಯಾಯವಾಗಿಯೇ ಇರಬೇಕು. ನಾನು ನಿಮ್ಮನ್ನು ಐಗುಪ್ತದೇಶದಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ನಿಮ್ಮ ಪುಟ್ಟಿಗಳು ಸರಿಯಾದ ಪ್ರಮಾಣದ್ದಾಗಿರಬೇಕು. ನಿಮ್ಮ ಕೊಳಗಗಳು ದ್ರವಪದಾರ್ಥಗಳನ್ನು ಸರಿಯಾದ ಪ್ರಮಾಣದಲ್ಲಿ ಹಿಡಿಸಿಕೊಳ್ಳುವಂತವುಗಳಾಗಿರಬೇಕು. ನಿಮ್ಮ ತೂಕದ ಕಲ್ಲುಗಳು ಮತ್ತು ತಕ್ಕಡಿಗಳು ವಸ್ತುಗಳನ್ನು ಸರಿಯಾಗಿ ತೂಕ ಮಾಡುವಂಥವುಗಳಾಗಿರಬೇಕು. ನಾನೇ ನಿಮ್ಮ ದೇವರಾದ ಯೆಹೋವನು! ನಾನು ನಿಮ್ಮನ್ನು ಈಜಿಪ್ಟಿನಿಂದ ಹೊರತಂದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ತಕ್ಕಡಿ, ತೂಕದ ಕಲ್ಲುಗಳು, ಕಿಲೋಗ್ರಾಂ ಮತ್ತು ಲೀಟರ್ ನ್ಯಾಯಯುತವಾಗಿರಲಿ. ಈಜಿಪ್ಟ್ ದೇಶದೊಳಗಿಂದ ನಿಮ್ಮನ್ನು ಹೊರಗೆ ತಂದ ನಿಮ್ಮ ದೇವರಾದ ಯೆಹೋವ ದೇವರು ನಾನೇ. ಅಧ್ಯಾಯವನ್ನು ನೋಡಿ |