Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 19:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಆದುದರಿಂದ ನನ್ನ ಆಜ್ಞಾವಿಧಿಗಳನ್ನೆಲ್ಲಾ ನೀವು ಅನುಸರಿಸಿ ನಡೆಯಬೇಕು. ನಾನು ಯೆಹೋವನು’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಆದುದರಿಂದ ನನ್ನ ಆಜ್ಞಾವಿಧಿಗಳನ್ನೆಲ್ಲಾ ನೀವು ಅನುಸರಿಸಿ ನಡೆಯಬೇಕು. ನಾನು ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಆದದರಿಂದ ನನ್ನ ಆಜ್ಞಾವಿಧಿಗಳನ್ನೆಲ್ಲಾ ನೀವು ಅನುಸರಿಸಿ ನಡೆಯಬೇಕು. ನಾನು ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 “ನೀವು ನನ್ನ ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ಜ್ಞಾಪಕಮಾಡಿಕೊಳ್ಳಬೇಕು; ಅವುಗಳಿಗೆ ವಿಧೇಯರಾಗಬೇಕು. ನಾನೇ ಯೆಹೋವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 “ ‘ಆದ್ದರಿಂದ ನನ್ನ ಎಲ್ಲಾ ಆಜ್ಞೆಗಳನ್ನೂ, ನನ್ನ ಎಲ್ಲಾ ನ್ಯಾಯಗಳನ್ನೂ ನೀವು ಅನುಸರಿಸಿ ನಡೆಯಬೇಕು. ನಾನೇ ಯೆಹೋವ ದೇವರು,’ ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 19:37
14 ತಿಳಿವುಗಳ ಹೋಲಿಕೆ  

ನಾನು ಈಗ ನಿಮಗೆ ಬೋಧಿಸುವ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. ಅನುಸರಿಸಿದರೆ ನೀವು ಬದುಕಿ ಅಭಿವೃದ್ಧಿಹೊಂದುವಿರಿ, ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.


ಮೋಶೆ ಎಲ್ಲಾ ಇಸ್ರಾಯೇಲರನ್ನು ಕರೆದು, “ಇಸ್ರಾಯೇಲರೇ, ನಾನು ಈಗ ನಿಮಗೆ ತಿಳಿಸುವ ಆಜ್ಞಾವಿಧಿಗಳನ್ನು ಕೇಳಿರಿ; ಇವುಗಳನ್ನು ಗ್ರಹಿಸಿಕೊಂಡು ಅನುಸರಿಸಿ ನಡೆಯಬೇಕು.


ನನಗೆ ತಿಳಿವಳಿಕೆಯನ್ನು ದಯಪಾಲಿಸು, ಆಗ ನಿನ್ನ ಧರ್ಮಶಾಸ್ತ್ರವನ್ನು ಪೂರ್ಣಮನಸ್ಸಿನಿಂದ ಕೈಕೊಂಡು ನಡೆಯುವೆನು.


ನಿನ್ನ ನಿಯಮಗಳನ್ನು ಜಾಗರೂಕತೆಯಿಂದ ಕೈಕೊಂಡು ನಡೆಸಬೇಕೆಂದು, ನೀನೇ ಆಜ್ಞಾಪಿಸಿರುತ್ತಿ.


ತಕ್ಕಡಿ, ತೂಕದ ಕಲ್ಲು, ಕೊಳಗ ಮತ್ತು ಸೇರು ಇವುಗಳೆಲ್ಲಾ ನ್ಯಾಯವಾಗಿಯೇ ಇರಬೇಕು. ನಾನು ನಿಮ್ಮನ್ನು ಐಗುಪ್ತದೇಶದಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ.


ಯೆಹೋವನು ಮೋಶೆಯೊಂದಿಗೆ ಮಾತನಾಡಿ,


“ಈ ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು; ನಾನು ಯೆಹೋವನು.


“‘ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು. “‘ನಿಮ್ಮ ಪಶುಗಳನ್ನು ಬೇರೆ ಜಾತಿಯ ಪಶುಗಳೊಂದಿಗೆ ಕೂಡಿಸಿ ತಳಿಪಡಿಯಬಾರದು; “‘ನಿಮ್ಮ ಹೊಲಗಳಲ್ಲಿ ಮಿಶ್ರಬೀಜಗಳನ್ನು ಬಿತ್ತಬಾರದು; “‘ನಾರು ಮತ್ತು ಉಣ್ಣೆ ಕೂಡಿರುವ ಬಟ್ಟೆಯನ್ನು ಹಾಕಿಕೊಳ್ಳಬಾರದು.


ಯೆಹೋವನಾದ ನಾನು ನಿಮಗೆ ಬರೆಯಿಸಿ ಕೊಟ್ಟ ಆಜ್ಞಾವಿಧಿಗಳನ್ನು ಧರ್ಮನಿಯಮಗಳನ್ನು ತಪ್ಪದೇ ಕೈಕೊಳ್ಳಬೇಕು. ನೀವು ಅನ್ಯ ದೇವತೆಗಳಿಗೆ ಭಯಪಡಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು