Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 19:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “‘ಸುಳ್ಳುದೇವರುಗಳ ಕಡೆಗೆ ತಿರುಗಿಕೊಳ್ಳಬಾರದು; ದೇವರೆಂದು ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬಾರದು. ನಾನು ನಿಮ್ಮ ದೇವರಾದ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 “ಶೂನ್ಯ ದೇವರುಗಳ ಕಡೆ ತಿರುಗಿಕೊಳ್ಳಬೇಡಿ; ದೇವರೆಂದು ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬೇಡಿ. ನಾನೇ ನಿಮ್ಮ ದೇವರಾದ ಸರ್ವೇಶ್ವರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಸುಳ್ಳುದೇವರುಗಳ ಕಡೆಗೆ ತಿರುಗಿಕೊಳ್ಳಬಾರದು; ದೇವರೆಂದು ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬಾರದು. ನಾನು ನಿಮ್ಮ ದೇವರಾದ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ವಿಗ್ರಹಾರಾಧನೆ ಮಾಡಬೇಡಿರಿ! ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬೇಡಿರಿ. ನಾನೇ ನಿಮ್ಮ ದೇವರಾದ ಯೆಹೋವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ ‘ನೀವು ವಿಗ್ರಹಗಳ ಕಡೆಗೆ ತಿರುಗಿಕೊಳ್ಳಬೇಡಿರಿ. ಇಲ್ಲವೆ ನಿಮಗೋಸ್ಕರವಾಗಿ ಎರಕದ ದೇವರುಗಳನ್ನು ಮಾಡಿಕೊಳ್ಳಬೇಡಿರಿ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 19:4
19 ತಿಳಿವುಗಳ ಹೋಲಿಕೆ  

“ನೀವು ವಿಗ್ರಹಗಳನ್ನು ಮಾಡಿಸಿಕೊಳ್ಳಬಾರದು; ಕೆತ್ತಿದ ಪ್ರತಿಮೆಯನ್ನಾಗಲಿ ಅಥವಾ ಕಲ್ಲು ಕಂಬವನ್ನಾಗಲಿ ನಿಲ್ಲಿಸಿಕೊಳ್ಳಬಾರದು; ಅಡ್ಡಬೀಳುವುದಕ್ಕಾಗಿ ವಿಚಿತ್ರವಾಗಿ ಕೆತ್ತಿದ ಕಲ್ಲುಗಳನ್ನು ನಿಮ್ಮ ದೇಶದಲ್ಲಿ ಇಡಬಾರದು; ನಾನೇ ಯೆಹೋವನೆಂಬ ನಿಮ್ಮ ದೇವರು.


ಎರಕದ ವಿಗ್ರಹಗಳನ್ನು ಮಾಡಿಸಿಕೊಳ್ಳಬಾರದು.


ನೀವು ಬೆಳ್ಳಿ ಬಂಗಾರಗಳ ದೇವರುಗಳನ್ನು ಮಾಡಿಕೊಳ್ಳಬೇಡಿರಿ.


ಪ್ರಿಯಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ.


‘ಶಿಲ್ಪಿಯ ಕೆಲಸವಾಗಿರುವ ಮರದ ವಿಗ್ರಹ ಮತ್ತು ಲೋಹವಿಗ್ರಹ ಯೆಹೋವನಿಗೆ ಅಸಹ್ಯವಾದುದರಿಂದ ಅವುಗಳನ್ನು ಮಾಡಿಸಿ ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು’ ಎಂದು ಹೇಳಲು ಜನರೆಲ್ಲರೂ, ‘ಆಮೆನ್’” ಅನ್ನಬೇಕು.


ಆದ್ದರಿಂದ ಪ್ರಿಯರೇ, ವಿಗ್ರಹಾರಾಧನೆಯನ್ನು ಬಿಟ್ಟು ದೂರವಾಗಿರಿ.


ಜನಾಂಗಗಳ ದೇವತೆಗಳೆಲ್ಲಾ ಬೊಂಬೆಗಳೇ; ಯೆಹೋವನಾದರೋ ಗಗನಮಂಡಲವನ್ನು ನಿರ್ಮಿಸಿದನು.


ಅವನು ಆ ಚಿನ್ನವನ್ನು ತನ್ನ ವಶಕ್ಕೆ ತೆಗೆದುಕೊಂಡು ಹೋರಿಕರುವಿನ ಆಕಾರವನ್ನು ಉಳಿಯಿಂದ ರೂಪಿಸಿ ಎರಕ ಹೊಯ್ಯಿಸಿದನು. ಆಗ ಅವರು “ಇಸ್ರಾಯೇಲರೇ ನೋಡಿರಿ, ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು” ಎಂದು ಹೇಳಿದರು.


“ಜ್ಞಾಪಕಮಾಡಿಕೊಳ್ಳಿರಿ, ಯೆಹೋವನ ಆಲಯಕ್ಕೆ ಅಸ್ತಿವಾರ ಹಾಕಿದ ಈ ದಿನದ ಹಿಂದಿನ ಕಾಲವನ್ನು, ಅಂದರೆ ಒಂಭತ್ತನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ಈ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ.


“‘ಸಮಾಧಾನಯಜ್ಞಗಳನ್ನು ಯೆಹೋವನಿಗೆ ಸಮರ್ಪಿಸುವಾಗ ಆತನಿಗೆ ಮೆಚ್ಚಿಕೆಯಾದ ರೀತಿಯಲ್ಲಿ ಸಮರ್ಪಿಸಬೇಕು.


ಜನಾಂಗಗಳ ದೇವತೆಗಳೆಲ್ಲಾ ಬರೀ ಬೊಂಬೆಗಳೇ. ಯೆಹೋವನಾದರೋ ಗಗನಮಂಡಲವನ್ನು ನಿರ್ಮಿಸಿದವನು.


ಏಕೆಂದರೆ ನಾನು ನಿಮ್ಮ ದೇವರಾದ ಯೆಹೋವನು; ನೀವು ದೇವಜನರಿಗೆ ತಕ್ಕಂತೆ ಇರಬೇಕು. ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು. ನೆಲದ ಮೇಲೆ ಹರಿದಾಡುವ ಯಾವ ಜಂತುವಿನಿಂದಾದರೂ ನೀವು ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು.


ಐದನೆಯ ವರ್ಷದಲ್ಲಿ ಅದರಿಂದ ಉಂಟಾಗುವ ಆದಾಯವು ನಿಮ್ಮದೇ ಆಗಿರುವುದು; ಅದರ ಫಲಗಳನ್ನು ನೀವು ತಿನ್ನಬಹುದು. ನಾನು ನಿಮ್ಮ ದೇವರಾದ ಯೆಹೋವನು.


ನೀವು ಸ್ತ್ರೀಪುರುಷರ ರೂಪವನ್ನಾಗಲಿ,


ಅವರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಆಶಿಸಬಾರದು; ಅದನ್ನು ತೆಗೆದುಕೊಂಡರೆ ಅದು ನಿಮಗೆ ಉರುಲಾಗುವುದು. ಅದು ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯವಾದುದು.


ನೀನು ನಿನ್ನ ಎಲ್ಲಾ ಪೂರ್ವಾಧಿಕಾರಿಗಳಿಗಿಂತಲೂ ದುಷ್ಟನಾದಿ. ನನ್ನನ್ನು ಉಲ್ಲಂಘಿಸಿ, ಅನ್ಯದೇವತೆಗಳನ್ನೂ ಎರಕದ ವಿಗ್ರಹಗಳನ್ನೂ ಪೂಜಿಸಿ ನನಗೆ ಕೋಪವನ್ನೆಬ್ಬಿಸಿದಿ.


ಅವನು ಇಸ್ರಾಯೇಲ್ ರಾಜರ ಮಾರ್ಗದಲ್ಲಿ ನಡೆದು, ಬಾಳ್ ದೇವರುಗಳ ಎರಕದ ವಿಗ್ರಹಗಳನ್ನು ಮಾಡಿಸಿದ್ದಲ್ಲದೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು