Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 19:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅದರಲ್ಲಿ ಏನಾದರೂ ತಿಂದವನು ಯೆಹೋವನ ಪವಿತ್ರ ದ್ರವ್ಯವನ್ನು ಹೊಲೆಮಾಡಿದವನಾದುದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು; ಅವನನ್ನು ಕುಲದಿಂದ ಹೊರಗೆ ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅದರಲ್ಲಿ ಏನನ್ನಾದರೂ ತಿಂದವನು ಸರ್ವೇಶ್ವರನ ದ್ರವ್ಯವಾದ ಪರಿಶುದ್ಧತೆಯನ್ನು ಹೊಲೆಮಾಡುತ್ತಾನೆ. ಆದುದರಿಂದ ತನ್ನ ಪಾಪದ ಫಲವನ್ನು ಅನುಭವಿಸಲೇಬೇಕು. ಅವನು ಕುಲದಿಂದ ಬಹಿಷ್ಕೃತನಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅದರಲ್ಲಿ ಏನಾದರೂ ತಿಂದವನು ಯೆಹೋವನ ದ್ರವ್ಯವನ್ನು ಹೊಲೆಮಾಡಿದವನಾದದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು; ಅವನು ಕುಲದಿಂದ ತೆಗೆದುಹಾಕಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಒಬ್ಬನು ಅದನ್ನು ಮೂರನೆಯ ದಿನದಲ್ಲಿ ತಿಂದರೆ ಅವನು ಪಾಪಮಾಡಿದ ದೋಷಿಯಾಗಿರುವನು. ಯಾಕೆಂದರೆ ಯೆಹೋವನಿಗೆ ಮೀಸಲಾದ ಪವಿತ್ರ ವಸ್ತುಗಳ ವಿಷಯದಲ್ಲಿ ಅವನಿಗೆ ಗೌರವವಿಲ್ಲ; ಆ ವ್ಯಕ್ತಿಯನ್ನು ಅವನ ಜನರಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದ್ದರಿಂದ ಅದನ್ನು ತಿನ್ನುವ ಪ್ರತಿಯೊಬ್ಬರೂ ತಮ್ಮ ಅಪರಾಧವನ್ನು ಹೊತ್ತುಕೊಳ್ಳಬೇಕು. ಏಕೆಂದರೆ ಯೆಹೋವ ದೇವರಿಗೆ ಪವಿತ್ರವಾದದ್ದನ್ನು ಅವರು ಅಶುದ್ಧಮಾಡಿದ್ದಾನೆ. ಅಂಥವರನ್ನು ತಮ್ಮ ಜನರ ಮಧ್ಯದೊಳಗಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 19:8
7 ತಿಳಿವುಗಳ ಹೋಲಿಕೆ  

ಇಸ್ರಾಯೇಲರು ಯೆಹೋವನಿಗೆ ಮೀಸಲೆಂದು ಇಟ್ಟ ನೈವೇದ್ಯದ ಪದಾರ್ಥಗಳನ್ನು ಯಾಜಕರು ಸಾಧಾರಣವೆಂದು ಎಣಿಸಬಾರದು.


“‘ನ್ಯಾಯಾಧಿಕಾರಿಯು ತಿಳಿಸಬೇಕೆಂದು ಆಣೆ ಇಟ್ಟರೂ, ಯಾವನಾದರೂ ತಾನು ಕಂಡು ಕೇಳಿದ್ದನ್ನು ತಿಳಿಸದೆಹೋದರೆ ಅವನು ಪಾಪಕ್ಕೆ ಗುರಿಯಾಗುವನು.


ಮೂರನೆಯ ದಿನದ ತನಕ ಉಳಿದದ್ದು ಹೇಯವಾದುದರಿಂದ ಅದರಲ್ಲಿ ಏನಾದರೂ ತಿಂದರೆ ಆ ಯಜ್ಞವು ಯೆಹೋವನಿಗೆ ಅಂಗೀಕಾರವಾಗುವುದೇ ಇಲ್ಲ.


“‘ನೀವು ಪೈರುಗಳನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿ ಇರುವುದನ್ನೆಲ್ಲಾ ಕೊಯ್ಯಬಾರದು ಮತ್ತು ಕೊಯ್ದಾಗ ಹಕ್ಕಲಾಯಬಾರದು.


ಇದರಂತೆ ತೈಲವನ್ನು ಮಾಡುವವನಾಗಲಿ ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನಾಗಲಿ ತನ್ನ ಕುಲದಿಂದ ಬಹಿಷ್ಕೃತನಾಗುವನು.”


ಯಾವನಾದರೂ ಅಶುದ್ಧನಾಗಿದ್ದು, ಯೆಹೋವನಿಗೆ ಸಮರ್ಪಿತವಾದ ಸಮಾಧಾನ ಯಜ್ಞಪಶುವಿನ ಮಾಂಸವನ್ನು ತಿಂದರೆ ಅವನು ತನ್ನ ಕುಲದಿಂದ ಬಹಿಷ್ಕರಿಸಲ್ಪಡಬೇಕು.


ಯಾವನಿಗಾದರೂ ಮನುಷ್ಯದೇಹದಿಂದ ಉಂಟಾದ ಅಶುದ್ಧವಸ್ತು ಅಥವಾ ಅಶುದ್ಧ ಮೃಗ ಮತ್ತು ನಿಷಿದ್ಧವಸ್ತು ಇವುಗಳಲ್ಲಿ ಯಾವುದಾದರೂ ಸೋಂಕಿದರೆ ಮತ್ತು ಅವನು ಯೆಹೋವನಿಗೆ ಸಮರ್ಪಿತವಾದ ಯಜ್ಞಪಶುವಿನ ಮಾಂಸವನ್ನು ತಿಂದರೆ ತನ್ನ ಕುಲದಿಂದ ಬಹಿಷ್ಕರಿಸಲ್ಪಡಬೇಕು’” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು