ಯಾಜಕಕಾಂಡ 2:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 “‘ನೀವು ಯೆಹೋವನಿಗೆ ಧಾನ್ಯ ನೈವೇದ್ಯವಾಗಿ ಸಮರ್ಪಿಸುವ ಯಾವ ಪದಾರ್ಥವನ್ನು ಹುಳಿಹಿಟ್ಟಿನಿಂದ ಮಾಡಬಾರದು. ಯಾವ ಹುಳಿಪದಾರ್ಥವನ್ನಾಗಲಿ ಅಥವಾ ಜೇನುತುಪ್ಪವನ್ನಾಗಲಿ ಯೆಹೋವನಿಗೆ ಹೋಮಮಾಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 “ನೀವು ಸರ್ವೇಶ್ವರನಿಗೆ ಕಾಣಿಕೆಯಾಗಿ ಸಮರ್ಪಿಸುವ ಯಾವ ಧಾನ್ಯದ ಪದಾರ್ಥವನ್ನಾಗಲಿ ಹುಳಿಹಿಟ್ಟಿನಿಂದ ಮಾಡಬಾರದು. ಯಾವ ಹುಳಿಪದಾರ್ಥವನ್ನಾಗಲಿ ಸಿಹಿಪದಾರ್ಥವನ್ನಾಗಲಿ ಸರ್ವೇಶ್ವರನಿಗೆ ಹೋಮಮಾಡಕೂಡದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನೀವು ಯೆಹೋವನಿಗೆ ನೈವೇದ್ಯವಾಗಿ ಸಮರ್ಪಿಸುವ ಯಾವ ಪದಾರ್ಥವನ್ನಾಗಲಿ ಹುಳಿಹಿಟ್ಟಿನಿಂದ ಮಾಡಬಾರದು. ಯಾವ ಹುಳಿಪದಾರ್ಥವನ್ನಾಗಲಿ ಸಿಹಿಪದಾರ್ಥವನ್ನಾಗಲಿ ಯೆಹೋವನಿಗೆ ಹೋಮ ಮಾಡಕೂಡದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 “ನೀವು ಹುಳಿಹಿಟ್ಟಿನಿಂದ ಮಾಡಿದ ಯಾವದನ್ನೂ ಯೆಹೋವನಿಗೆ ಧಾನ್ಯಸಮರ್ಪಣೆಯಾಗಿ ಕೊಡಬಾರದು. ನೀವು ಹುಳಿಯನ್ನಾಗಲಿ ಜೇನುತುಪ್ಪವನ್ನಾಗಲಿ ಯೆಹೋವನಿಗೆ ಅಗ್ನಿಯ ಮೂಲಕ ಹೋಮಮಾಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 “ ‘ಯೆಹೋವ ದೇವರಿಗೆ ನೀನು ತರುವ ಧಾನ್ಯ ಸಮರ್ಪಣೆಯು ಯಾವುದೂ ಹುಳಿಯಿಂದ ಮಾಡಿದ್ದಾಗಿರಬಾರದು. ಏಕೆಂದರೆ ಯೆಹೋವ ದೇವರಿಗೆ ನೀವು ಬೆಂಕಿಯಿಂದ ಮಾಡುವ ಯಾವ ಸಮರ್ಪಣೆಯಲ್ಲಿ ಹುಳಿಯನ್ನಾಗಲಿ, ಜೇನನ್ನಾಗಲಿ ಬೆರೆಸಬಾರದು. ಅಧ್ಯಾಯವನ್ನು ನೋಡಿ |