ಯಾಜಕಕಾಂಡ 2:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯಾಜಕನು ನೈವೇದ್ಯವನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಅದರಲ್ಲಿ ಸ್ವಲ್ಪಭಾಗವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಯಾಜಕನು ಅದು ಸಮರ್ಪಿತವಾದುದೆಂದು ಸೂಚಿಸುವುದಕ್ಕಾಗಿ ಅದರಲ್ಲಿ ಸ್ವಲ್ಪ ಭಾಗವನ್ನು ಪ್ರತ್ಯೇಕಿಸಿ ಬಲಿಪೀಠದ ಮೇಲೆ ಹೋಮಮಾಡಲಿ. ಅದು ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ದಹನ ಬಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಯಾಜಕನು ನೈವೇದ್ಯವನ್ನು ಸೂಚಿಸುವದಕ್ಕಾಗಿ ಅದರಲ್ಲಿ ಸ್ವಲ್ಪಭಾಗವನ್ನು ಪ್ರತ್ಯೇಕಿಸಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಬಳಿಕ ಯಾಜಕನು ಧಾನ್ಯನೈವೇದ್ಯದ ಸ್ವಲ್ಪ ಭಾಗವನ್ನು ತೆಗೆದುಕೊಂಡು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ವೇದಿಕೆಯ ಮೇಲೆ ಹೋಮಮಾಡುವನು. ಅದು ಅಗ್ನಿಯ ಮೂಲಕ ಮಾಡಿದ ಸಮರ್ಪಣೆಯಾಗಿದೆ. ಅದರ ಸುವಾಸನೆಯು ಯೆಹೋವನಿಗೆ ಪ್ರಿಯವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಗ ಯಾಜಕನು ಅದರಿಂದ ಜ್ಞಾಪಕಾರ್ಥವಾಗಿ ಧಾನ್ಯ ಸಮರ್ಪಣೆಯನ್ನಾಗಿ ತೆಗೆದುಕೊಂಡು ಅದನ್ನು ಬಲಿಪೀಠದ ಮೇಲೆ ಸುಡಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು, ಯೆಹೋವ ದೇವರಿಗೆ ಸುವಾಸನೆಯ ಸಮರ್ಪಣೆಯಾಗಿರುವುದು. ಅಧ್ಯಾಯವನ್ನು ನೋಡಿ |