Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 20:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಯೆಹೋವನೆಂಬ ನಾನು ಪರಿಶುದ್ಧನಾಗಿದ್ದೇನೆ, ಮತ್ತು ನೀವು ನನ್ನ ಜನರಾಗುವಂತೆ ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ್ದೇನೆ; ಆದುದರಿಂದ ನೀವು ನನಗೆ ಮೀಸಲಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಸರ್ವೇಶ್ವರನೆಂಬ ನಾನು ಪರಿಶುದ್ಧನಾಗಿದ್ದೇನೆ, ಮತ್ತು ನೀವು ನನ್ನ ಜನರಾಗುವಂತೆ ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ್ದೇನೆ; ಆದ್ದರಿಂದ ನೀವು ನನಗೆ ಮೀಸಲಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಯೆಹೋವನೆಂಬ ನಾನು ಪರಿಶುದ್ಧನಾಗಿದ್ದೇನೆ, ಮತ್ತು ನೀವು ನನ್ನ ಜನರಾಗುವಂತೆ ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ್ದೇನೆ; ಆದದರಿಂದ ನೀವು ನನಗೆ ಮೀಸಲಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿ, ನನ್ನ ವಿಶೇಷ ಜನರನ್ನಾಗಿ ಮಾಡಿದ್ದೇನೆ. ಆದ್ದರಿಂದ ನೀವು ಪರಿಶುದ್ಧರಾಗಿರಬೇಕು. ಯಾಕೆಂದರೆ ನಾನು ಯೆಹೋವನು ಮತ್ತು ನಾನು ಪರಿಶುದ್ಧನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ನೀವು ನನ್ನವರಾಗಿರುವಂತೆ ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಿಸಿದ ಯೆಹೋವ ದೇವರಾದ ನಾನು ಪರಿಶುದ್ಧನಾಗಿರುವುದರಿಂದ, ನೀವು ನನಗೆ ಪರಿಶುದ್ಧರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 20:26
19 ತಿಳಿವುಗಳ ಹೋಲಿಕೆ  

ನಾನು ನಿಮ್ಮ ದೇವರಾದ ಯೆಹೋವನಾಗಿರುವುದರಿಂದ ನೀವು ನನ್ನವರಾಗಿ ಪರಿಶುದ್ಧರಾಗಿರಬೇಕು.


ನಿಮಗಾದರೂ, ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ, ಹಾಲೂ ಮತ್ತು ಜೇನೂ ಹರಿಯುವಂಥ ಆ ದೇಶವನ್ನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವೆನು ಎಂದು ನಾನು ಮಾತುಕೊಟ್ಟೆನಲ್ಲವೇ. ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ ನಿಮ್ಮ ದೇವರಾದ ಯೆಹೋವನು.


ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


“ನೀನು ಇಸ್ರಾಯೇಲರ ಸಮೂಹದವರಿಗೆ ಹೀಗೆ ಆಜ್ಞಾಪಿಸಬೇಕು, ‘ನಿಮ್ಮ ದೇವರಾದ ಯೆಹೋವನೆಂಬ ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು.


ಯಾಕೆಂದರೆ ನೀವು ನಿಮ್ಮ ದೇವರಾದ ಯೆಹೋವನಿಗೆ ಮೀಸಲಾದ ಪರಿಶುದ್ಧ ಜನರಾಗಿದ್ದೀರಲ್ಲವೇ; ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನವಾಗುವುದಕ್ಕೆ ಆರಿಸಿಕೊಂಡನು.


ಯಾಕೆಂದರೆ ನೀವು ಕೇವಲ ನಿಮ್ಮ ದೇವರಾದ ಯೆಹೋವನ ಪರಿಶುದ್ಧ ಜನರೇ. ಆತನು ಭೂಲೋಕದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯ ಜನರಾಗುವುದಕ್ಕೆ ಆರಿಸಿಕೊಂಡಿದ್ದಾನೆ ಎಂಬುದು ನಿಮಗೆ ತಿಳಿದಿರಬೇಕು.


ಆಗ ಒಬ್ಬನು ಮತ್ತೊಬ್ಬನಿಗೆ, “ಸೇನಾಧೀಶ್ವರನಾದ ಯೆಹೋವನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿದೆ” ಎಂದು ಕೂಗಿ ಹೇಳಿದನು.


ಆ ನಾಲ್ಕು ಜೀವಿಗಳಿಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು. ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ, “ದೇವರಾದ ಕರ್ತನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಆತನು ಸರ್ವಶಕ್ತನು, ಇರುವಾತನು, ಇದ್ದಾತನು, ಬರುವಾತನು” ಎಂದು ಹೇಳುತ್ತಿದ್ದವು.


“ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ, ಪರಿಶುದ್ಧನೂ, ಸತ್ಯವಂತನೂ, ದಾವೀದನ ಬೀಗದಕೈಯುಳ್ಳವನೂ, ಯಾರಿಂದಲೂ ಮುಚ್ಚಲಾಗದಂತೆ ತೆರೆಯುವವನೂ, ಯಾರಿಂದಲೂ ತೆರೆಯಲಾಗದಂತೆ ಮುಚ್ಚುವವನೂ ಆಗಿರುವಾತನು ಹೇಳುವುದೇನಂದರೆ,


ನಮ್ಮ ಯೆಹೋವ ದೇವರನ್ನು ಘನಪಡಿಸಿರಿ; ಆತನ ಪರಿಶುದ್ಧಪರ್ವತದ ಕಡೆಗೆ ಅಡ್ಡಬೀಳಿರಿ. ನಮ್ಮ ಯೆಹೋವ ದೇವರು ಪರಿಶುದ್ಧನು.


ನಮ್ಮ ಯೆಹೋವ ದೇವರನ್ನು ಘನಪಡಿಸಿರಿ; ಆತನ ಪಾದಪೀಠದ ಮುಂದೆ ಅಡ್ಡಬೀಳಿರಿ. ಆತನು ಪರಿಶುದ್ಧನು.


ನೀವು ಹಿಡಿದಿರುವ ಮಾರ್ಗದಿಂದ ತೊಲಗಿರಿ; ನಿಮ್ಮ ದಾರಿಗೆ ಓರೆಯಾಗಿರಿ; ಇಸ್ರಾಯೇಲರ ಸದಮಲಸ್ವಾಮಿಯನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ” ಎಂದು ಹೇಳುತ್ತಾರೆ.


ನನಗೂ ನಿನ್ನ ಪ್ರಜೆಗಳಾದ ಇವರಿಗೂ ನಿನ್ನ ದಯೆಯು ದೊರಕಿತೆಂಬುದು ನೀನು ನಮ್ಮ ಸಂಗಡ ಬರುವುದರಿಂದಲೇ ಹೊರತು ಬೇರೆ ಯಾವುದರಿಂದ ತಿಳಿದುಬರುವುದು? ಇದರಿಂದ ನಾನೂ ಮತ್ತು ನಿನ್ನ ಪ್ರಜೆಗಳಾದ ಇವರೂ ಭೂಮಿಯಲ್ಲಿರುವ ಬೇರೆ ಎಲ್ಲಾ ಜನಗಳಿಗಿಂತಲೂ ವಿಶೇಷತೆಯುಳ್ಳವರೆಂಬುದು ಗೊತ್ತಾಗುವುದು” ಅಂದನು.


ಆಗ ಯೆಹೋಶುವನು ಅವರಿಗೆ, “ನೀವು ಯೆಹೋವನನ್ನು ಸೇವಿಸಲು ಶಕ್ತರಲ್ಲ. ಯೆಹೋವನು ಪರಿಶುದ್ಧನು; ತನಗೆ ಸಲ್ಲಿಸಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ದೇವರು; ಆತನು ನಿಮ್ಮ ಪಾಪ, ಅಪರಾಧಗಳನ್ನೂ, ಕ್ಷಮಿಸುವುದಿಲ್ಲ.


ಏಕೆಂದರೆ ನಾನು ನಿಮ್ಮ ದೇವರಾದ ಯೆಹೋವನು; ನೀವು ದೇವಜನರಿಗೆ ತಕ್ಕಂತೆ ಇರಬೇಕು. ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು. ನೆಲದ ಮೇಲೆ ಹರಿದಾಡುವ ಯಾವ ಜಂತುವಿನಿಂದಾದರೂ ನೀವು ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು.


ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯಬೇಕು. ನಾನು ನಿಮ್ಮನ್ನು ಪರಿಶುದ್ಧಜನವಾಗುವಂತೆ ಮಾಡುವ ಯೆಹೋವನು.


ಮುಖಂಡರು ತಮ್ಮ ಸಹೋದರರೊಂದಿಗೆ ಸೇರಿಕೊಂಡು, ತಾವು ದೇವರ ಸೇವಕನಾದ ಮೋಶೆಯ ಮುಖಾಂತರ ಕೊಡಲ್ಪಟ್ಟ ದೇವರ ಧರ್ಮೋಪದೇಶವನ್ನು ಅನುಸರಿಸಿ ತಮ್ಮ ಕರ್ತನಾದ ಯೆಹೋವನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಅನುಸರಿಸಿ ನಡೆಯುವುದಾಗಿ ಆಣೆಯಿಟ್ಟು ಪ್ರಮಾಣ ಮಾಡಿದರು. ಹೇಗೆಂದರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು