ಯಾಜಕಕಾಂಡ 20:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 “‘ಯಾವನಾದರೂ ಸತ್ತವರಲ್ಲಿ ವಿಚಾರಿಸುವವರ ಅಥವಾ ಬೇತಾಳಿಕರ ಬಳಿಗೆ ಹೋಗಿ ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ, ನಾನು ಆ ಮನುಷ್ಯನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 “ಯಾರಾದರು ಭೂತ-ಪ್ರೇತಗಳನ್ನು ವಿಚಾರಿಸುವವರ ಬಳಿಗೆ ಹೋಗಿ, ಅವರ ಆಲೋಚನೆಯನ್ನು ಕೇಳಿ, ದೇವದ್ರೋಹಿಯಾದರೆ ನಾನು ಅಂಥ ವ್ಯಕ್ತಿಗೆ ವಿಮುಖನಾಗಿ ಅವನನ್ನು ತನ್ನ ಜನತೆಯಿಂದ ತೆಗೆದುಹಾಕುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯಾವನಾದರೂ ಸತ್ತವರಲ್ಲಿ ವಿಚಾರಿಸುವವರ ಅಥವಾ ಬೇತಾಳಿಕರ ಬಳಿಗೆ ಹೋಗಿ ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ ನಾನು ಆ ಮನುಷ್ಯನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 “ಸತ್ತವರಲ್ಲಿ ವಿಚಾರಿಸುವವರ ಮತ್ತು ಬೇತಾಳಿಕರ ಬಳಿಗೆ ಹೋಗುವ ಯಾವುದೇ ವ್ಯಕ್ತಿಯಾದರೂ ಸರಿಯೇ ಅವನಿಗೆ ನಾನು ವಿರುದ್ಧವಾಗಿರುವೆನು. ಆ ವ್ಯಕ್ತಿ ನನಗೆ ಅಪನಂಬಿಗಸ್ತನಾಗಿದ್ದಾನೆ. ಆದ್ದರಿಂದ ನಾನು ಅವನನ್ನು ಅವನ ಕುಲದಿಂದ ತೆಗೆದುಹಾಕುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ ‘ಇದಲ್ಲದೆ ಮಾಟಗಾರರನ್ನು ಮತ್ತು ಭೂತಪ್ರೇತಗಳನ್ನು ವಿಚಾರಿಸುವವರ ಬಳಿಗೆ ಹೋಗಿ, ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ ನಾನು ಅಂಥ ಮನುಷ್ಯನಿಗೆ ವಿಮುಖನಾಗಿರುವೆನು. ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು. ಅಧ್ಯಾಯವನ್ನು ನೋಡಿ |
ಹೀಗೆ ತಪ್ಪಿಸಿಕೊಂಡು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ನನ್ನನ್ನು ಸ್ಮರಿಸಿಕೊಳ್ಳುವರು. ನಿಮ್ಮವರು ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದು ತಮ್ಮ ಹೃದಯವನ್ನೂ, ತಮ್ಮ ವಿಗ್ರಹಗಳ ಮೇಲಣ ಕಾಮದಿಂದ ದೇವದ್ರೋಹಮಾಡಿದ ತಮ್ಮ ಕಣ್ಣುಗಳನ್ನೂ ಭಂಗಪಡಿಸಿದವನು ನಾನೇ ಎಂಬುದಾಗಿ ನನ್ನನ್ನು ಜ್ಞಾಪಕಮಾಡಿಕೊಂಡು, ತಾವು ಬಹಳ ಅಸಹ್ಯಕಾರ್ಯಗಳನ್ನು ನಡೆಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.