Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 21:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಮೋಶೆಯೊಂದಿಗೆ ಮಾತನಾಡಿ, “ನೀನು ಆರೋನನ ಮಕ್ಕಳಾದ ಯಾಜಕರಿಗೆ ಹೀಗೆ ಆಜ್ಞಾಪಿಸಬೇಕು, ‘ಕುಲದಲ್ಲಿ ಸತ್ತವರಿಗೋಸ್ಕರ ಯಾವ ಯಾಜಕನೂ ತನ್ನನ್ನು ಅಪವಿತ್ರ ಮಾಡಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆರೋನನ ಮಕ್ಕಳಾದ ಯಾಜಕರಿಗೆ ಈ ಕೆಳಕಂಡಂತೆ ಆಜ್ಞಾಪಿಸಬೇಕೆಂದು ಸರ್ವೇಶ್ವರ ಸ್ವಾಮಿ ಮೋಶೆಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಮೋಶೆಗೆ ಹೇಳಿದ್ದೇನಂದರೆ - ನೀನು ಆರೋನನ ಮಕ್ಕಳಾದ ಯಾಜಕರಿಗೆ ಹೀಗೆ ಆಜ್ಞಾಪಿಸಬೇಕು - ಕುಲದಲ್ಲಿ ಸತ್ತವರಿಗೋಸ್ಕರ ಯಾವ ಯಾಜಕನೂ ತನ್ನನ್ನು ಅಪವಿತ್ರಮಾಡಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಯಾಜಕರಾದ ಆರೋನನ ಮಕ್ಕಳಿಗೆ ಈ ಸಂಗತಿಗಳನ್ನು ಹೇಳು: ಯಾಜಕನು ಸತ್ತ ವ್ಯಕ್ತಿಯನ್ನು ಮುಟ್ಟಿ ತನ್ನನ್ನು ಅಶುದ್ಧಮಾಡಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ನೀನು ಆರೋನನ ಮಕ್ಕಳಾದ ಯಾಜಕರೊಂದಿಗೆ ಮಾತನಾಡಿ, ಅವರಿಗೆ ಹೀಗೆ ಹೇಳು: ಸತ್ತವರ ದೇಹವನ್ನು ಮುಟ್ಟುವುದರಿಂದ ಯಾವ ಯಾಜಕನೂ ಅಪವಿತ್ರನಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 21:1
12 ತಿಳಿವುಗಳ ಹೋಲಿಕೆ  

“ಸತ್ತವರ ಹೆಣವನ್ನು ಸಮೀಪಿಸಿ, ತಮ್ಮನ್ನು ಅಪವಿತ್ರ ಮಾಡಿಕೊಳ್ಳಬಾರದು; ಆದರೆ ಸತ್ತ ತಂದೆ, ತಾಯಿ, ಮಗನು, ಮಗಳು, ತಮ್ಮ, ಮದುವೆಯಿಲ್ಲದ ತಂಗಿ, ಇವರಿಗೋಸ್ಕರ ಒಬ್ಬನು ತನ್ನನ್ನು ಅಪವಿತ್ರ ಮಾಡಿಕೊಳ್ಳಬಹುದು.


“ಯಾರಾದರೂ ಡೇರೆಯಲ್ಲಿ ಸತ್ತರೆ ಅವನ ವಿಷಯವಾದ ನಿಯಮವೇನೆಂದರೆ: ಆ ಡೇರೆಯಲ್ಲಿರುವವರೆಲ್ಲರೂ ಮತ್ತು ಅದರೊಳಗೆ ಪ್ರವೇಶಿಸುವವರು ಏಳು ದಿನಗಳವರೆಗೆ ಅಶುದ್ಧರಾಗಿರಬೇಕು.


ಅವನು ಶವವಿರುವ ಯಾವ ಸ್ಥಳಕ್ಕೂ ಹೋಗಬಾರದು. ತಂದೆತಾಯಿಗಳ ಮರಣದ ನಿಮಿತ್ತ ತನ್ನನ್ನು ಅಪವಿತ್ರ ಮಾಡಿಕೊಳ್ಳಬಾರದು.


“‘ಸತ್ತವರಿಗೋಸ್ಕರ ದುಃಖವನ್ನು ಸೂಚಿಸುವುದಕ್ಕಾಗಿ ದೇಹವನ್ನು ಗಾಯಮಾಡಿಕೊಳ್ಳಬಾರದು. ಶರೀರದ ಮೇಲೆ ಹಚ್ಚೇ ಹಾಕಿಸಿಕೊಳ್ಳಬಾರದು. ನಾನು ಯೆಹೋವನು.


ನಾನು ಲೇವಿಯರೊಂದಿಗೆ ಮಾಡಿಕೊಂಡ ಒಡಂಬಡಿಕೆಯು ನೆಲೆಗೊಳ್ಳಬೇಕೆಂದು ಈ ಅಪ್ಪಣೆಯನ್ನು ನಿಮಗೆ ಹೇಳಿಕಳುಹಿಸಿದ್ದೇನೆಂಬುದು ನಿಮಗೆ ಗೊತ್ತಾಗಬೇಕು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಯಾಜಕರೇ, ಈ ಅಪ್ಪಣೆಯು ಈಗ ನಿಮಗಾಗಿದೆ.


ಯಾಜಕರೇ, ಇದನ್ನು ಕೇಳಿರಿ, ಇಸ್ರಾಯೇಲ್ ಕುಲದವರೇ, ಆಲಿಸಿರಿ; ರಾಜವಂಶದವರೇ, ಕಿವಿಗೊಡಿರಿ; ನೀವು ಮಿಚ್ಪದಲ್ಲಿ ಉರುಲಾಗಿಯೂ, ತಾಬೋರಿನಲ್ಲಿ ಬಲೆಯಾಗಿಯೂ ಇದ್ದ ಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ.


ಬಯಲಿನಲ್ಲಿರುವ ಯಾವನಾದರೂ ಕತ್ತಿಯಿಂದ ಕೊಲ್ಲಲ್ಪಟ್ಟವನಾದರೂ, ಯಾವನಿಗಾದರೂ ಮನುಷ್ಯನ ಶವವಾಗಲಿ, ಮನುಷ್ಯನ ಎಲುಬಾಗಲಿ, ಸಮಾಧಿಯಾಗಲಿ ಸೋಂಕಿದರೆ ಅವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.


“ಕುಷ್ಠರೋಗಿಗಳನ್ನು, ಸಾಂಕ್ರಾಮಿಕವಾದ ಚರ್ಮರೋಗ ಇರುವವರನ್ನು, ಮೇಹಸ್ರಾವವುಳ್ಳವರನ್ನು ಹಾಗು ಹೆಣದ ಸೋಂಕಿನಿಂದ ಅಶುದ್ಧರಾದವರನ್ನು ಪಾಳೆಯದಿಂದ ಹೊರಡಿಸಬೇಕೆಂದು ಇಸ್ರಾಯೇಲರಿಗೆ ಆಜ್ಞಾಪಿಸು.


ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಂಡ ದಿನಗಳಲ್ಲಿ ಯಾವ ಶವವನ್ನೂ ಮುಟ್ಟಬಾರದು.


“ಮನುಷ್ಯನ ಶವ ಸೋಂಕಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು