Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 21:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇಲ್ಲವಾದರೆ ಅವನ ಸಂತತಿಯ ಸ್ವಜನರೊಳಗೆ ಅವನು ಅಪವಾದಕ್ಕೆ ಗುರಿಯಾಗುವನು. ಅವನನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇಲ್ಲವಾದರೆ ಅವನ ಸಂತತಿ ಸ್ವಜನರೊಳಗೆ ಅಪವಾದಕ್ಕೆ ಗುರಿಯಾಗುವುದು. ಅವನನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಸರ್ವೇಶ್ವರ ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇಲ್ಲವಾದರೆ ಅವನ ಸಂತತಿಯು ಸ್ವಜನರೊಳಗೆ ಅಪವಾದಕ್ಕೆ ಗುರಿಯಾದೀತು. ಅವನನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಹೀಗಾಗಿ ಜನರು ಅವನ ಮಕ್ಕಳಿಗೆ ಗೌರವ ತೋರಿಸುವರು. ಯೆಹೋವನಾಗಿರುವ ನಾನು ಪ್ರಧಾನಯಾಜಕನನ್ನು ಅವನ ವಿಶೇಷ ಕೆಲಸಕ್ಕಾಗಿ ಪ್ರತ್ಯೇಕಿಸಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇದಲ್ಲದೆ ಅವನು ತನ್ನ ಜನರೊಳಗೆ ತನ್ನ ಸಂತತಿಯನ್ನು ಅಪವಿತ್ರ ಮಾಡಬಾರದು. ಏಕೆಂದರೆ ಯೆಹೋವ ದೇವರಾದ ನಾನು ಅವನನ್ನು ಶುದ್ಧೀಕರಿಸುತ್ತೇನೆ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 21:15
16 ತಿಳಿವುಗಳ ಹೋಲಿಕೆ  

ಯಾಕೆಂದರೆ ಕ್ರಿಸ್ತ ನಂಬಿಕೆಯಿಲ್ಲದ ಗಂಡನು ತನ್ನ ಹೆಂಡತಿಯ ನಿಮಿತ್ತ ಪವಿತ್ರನಾದನು ಮತ್ತು ಕ್ರಿಸ್ತ ನಂಬಿಕೆಯಿಲ್ಲದ ಹೆಂಡತಿಯು ತನ್ನ ಗಂಡನ ನಿಮಿತ್ತ ಪವಿತ್ರಳಾದಳು. ಹಾಗಲ್ಲದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು. ಈಗಲಾದರೋ ಅವರು ಪವಿತ್ರರೇ ಆಗಿದ್ದಾರೆ.


ಕಣಕದಲ್ಲಿ ಪ್ರಥಮಫಲವನ್ನು ದೇವರಿಗರ್ಪಿಸಿದ ಮೇಲೆ ಕಣಕವೆಲ್ಲಾ ಪವಿತ್ರವಾಯಿತು. ಬೇರು ಶುದ್ಧವಾಗಿದ್ದ ಮೇಲೆ ಕೊಂಬೆಗಳೂ ಹಾಗೆಯೇ.


ದೇವರು ನಿನ್ನ ಮತ್ತು ನಿನ್ನ ಪತ್ನಿಯ ತನುಮನಗಳನ್ನು ಒಂದು ಮಾಡಿ ಒಡಂಬಡಿಸಲಿಲ್ಲವೇ? ದೇವರ ಉದ್ದೇಶವೇನು? ದೇವರ ಮಕ್ಕಳಾಗಿ ಬಾಳುವ ಸಂತಾನ ದಯಪಾಲಿಸುವ ಉದ್ದೇಶ ಆತನದಾಗಿತ್ತು. ಆದುದರಿಂದ ಮದುವೆಯಾದ ಪತ್ನಿಗೆ ದ್ರೋಹಮಾಡದೆ ಪ್ರತಿಯೊಬ್ಬನೂ ಎಚ್ಚರಿಕೆಯಿಂದಿರಲಿ.”


ಯೆಹೂದವು ದ್ರೋಹಮಾಡಿದೆ, ಇಸ್ರಾಯೇಲಿನಲ್ಲಿಯೂ, ಯೆರೂಸಲೇಮಿನಲ್ಲಿಯೂ ಒಂದು ದುರಾಚಾರವು ನಡೆಯುತ್ತಿದೆ; ಯೆಹೂದವು ಅನ್ಯದೇವತೆಯನ್ನು ಆರಾಧಿಸುವ ಮಹಿಳೆಯರನ್ನು ಮದುವೆಯಾಗಿ ಯೆಹೋವನ ಪ್ರಿಯ ದೇವಾಲಯವನ್ನು ಹೊಲೆಗೆಡಿಸಿದೆ.


ಅವರು ತಮಗೂ ತಮ್ಮ ಗಂಡುಮಕ್ಕಳಿಗೂ ಅವರಿಂದ ಹೆಣ್ಣುಮಕ್ಕಳನ್ನು ತೆಗೆದುಕೊಂಡದ್ದರಿಂದ ದೇವಕುಲವು ಅನ್ಯದೇಶಗಳವರೊಡನೆ ಮಿಶ್ರವಾಯಿತು. ಪ್ರಭುಗಳೂ ಮತ್ತು ಪ್ರಧಾನರೂ ಈ ದ್ರೋಹಕ್ಕೆ ಮುಂದಾಳುಗಳಾದರು” ಎಂದು ತಿಳಿಸಿದರು.


ಇವರು ತಮ್ಮ ವಂಶಾವಳಿಯ ಪತ್ರಗಳನ್ನು ಹುಡುಕಿದರೂ ಅವು ಸಿಕ್ಕದ ಕಾರಣ ಅಶುದ್ಧರೆಂದು ಯಾಜಕೋದ್ಯೋಗದಿಂದ ತಿರಸ್ಕರಿಸಲ್ಪಟ್ಟರು.


ಅವರು ನಿಮ್ಮ ದೇವರ ಆಹಾರವನ್ನು ಸಮರ್ಪಿಸುವವರಾದ ಕಾರಣ ಅವರನ್ನು ದೇವರ ಸೇವಕರೆಂದು ಭಾವಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಯೆಹೋವನೆಂಬ ನಾನು ಪರಿಶುದ್ಧನಾಗಿರುವುದರಿಂದ ಅವರನ್ನು ಪರಿಶುದ್ಧರೆಂದು ನೀವು ಭಾವಿಸಬೇಕು.


ಅವನು ತನ್ನ ಮಕ್ಕಳಿಗೂ ಮನೆಯವರಿಗೂ ನ್ಯಾಯ ನೀತಿಗಳನ್ನು ತಿಳಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆರಿಸಿಕೊಂಡೆನಲ್ಲಾ; ಅವನು ಹೀಗೆ ಮಾಡುವುದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವುದು” ಅಂದುಕೊಂಡನು.


ಕುರುಡರೇ, ಮೂರ್ಖರೇ, ಯಾವುದು ಹೆಚ್ಚಿನದು? ಚಿನ್ನವೋ, ಚಿನ್ನವನ್ನು ಪ್ರತಿಷ್ಠೆ ಮಾಡುವ ದೇವಾಲಯವೋ?


ಅವನು ವಿಧವೆಯನ್ನಾಗಲಿ, ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ, ಮಾನವನ್ನು ಭಂಗಪಡಿಸಿಕೊಂಡ ಸ್ತ್ರೀಯನ್ನಾಗಲಿ ಅಥವಾ ವೇಶ್ಯ ಸ್ತ್ರೀಯನ್ನಾಗಲಿ ಹೆಂಡತಿಯನ್ನಾಗಿ ಮಾಡಿಕೊಳ್ಳಬಾರದು. ಸ್ವದೇಶದವರಲ್ಲಿಯ ಕನ್ನಿಕೆಯನ್ನೇ ಮದುವೆ ಮಾಡಿಕೊಳ್ಳಬೇಕು.


ಯೆಹೋವನು ಮೋಶೆಯೊಂದಿಗೆ ಮಾತನಾಡಿ,


ಅದಲ್ಲದೆ ನೀವು ನಿಮ್ಮ ಪುತ್ರರಿಗಾಗಿ ಅವರಲ್ಲಿ ಪುತ್ರಿಯರನ್ನು ತೆಗೆದುಕೊಳ್ಳುವುದಕ್ಕೆ ಅದು ಮಾರ್ಗವಾಗುವುದು; ತರುವಾಯ ಆ ಸೊಸೆಯರು ತವರುಮನೆಯ ದೇವತೆಗಳನ್ನು ಪೂಜಿಸುವವರಾಗಿ ನಿಮ್ಮ ಮಕ್ಕಳನ್ನೂ ಅನ್ಯದೇವರುಗಳ ಪೂಜೆ ಎಂಬ ವ್ಯಭಿಚಾರಕ್ಕೆ ಎಳೆದಾರು, ಎಚ್ಚರ.


“ನೀನು ಇಸ್ರಾಯೇಲರ ಸಮೂಹದವರಿಗೆ ಹೀಗೆ ಆಜ್ಞಾಪಿಸಬೇಕು, ‘ನಿಮ್ಮ ದೇವರಾದ ಯೆಹೋವನೆಂಬ ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು.


ನಾನು ನಿಮ್ಮ ದೇವರಾದ ಯೆಹೋವನಾಗಿರುವುದರಿಂದ ನೀವು ನನ್ನವರಾಗಿ ಪರಿಶುದ್ಧರಾಗಿರಬೇಕು.


ಹಾಗೆ ಎಣಿಸಿದರೆ ತಾವು ಆ ನೈವೇದ್ಯಪದಾರ್ಥಗಳನ್ನು ಊಟಮಾಡುವುದರಿಂದ ಪಾಪಕ್ಕೆ ಒಳಗಾಗಿ ಶಿಕ್ಷೆಹೊಂದುವರು. ನನ್ನ ಸೇವೆಗೆ ಅವರನ್ನು ಪ್ರತಿಷ್ಠಿಸಿಕೊಂಡ ಯೆಹೋವನು ನಾನು’” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು