Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 21:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವನಿಗೆ ಕಳಂಕವಿರುವುದರಿಂದ ತೆರೆಯನ್ನು ದಾಟಿ ಒಳಗೆ ಬರಬಾರದು; ಯಜ್ಞವೇದಿಯ ಬಳಿಗೆ ಬರಬಾರದು; ನನ್ನ ಪವಿತ್ರಸ್ಥಾನಗಳ ಗೌರವಕ್ಕೆ ಅವನಿಂದ ಕುಂದು ಉಂಟಾಗಬಾರದು; ಆ ಸ್ಥಾನಗಳನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆದರೆ ಅವನಿಗೆ ಕಳಂಕವಿರುವುದರಿಂದ ತೆರೆಯನ್ನು ದಾಟಿ ಒಳಗೆ ಬರಬಾರದು; ಬಲಿಪೀಠದ ಬಳಿಗೆ ಬರಬಾರದು; ನನ್ನ ಪವಿತ್ರಸ್ಥಾನಗಳ ಗೌರವಕ್ಕೆ ಅವನಿಂದ ಕುಂದು ಉಂಟಾಗಬಾರದು; ಆ ಸ್ಥಾನಗಳನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಸರ್ವೇಶ್ವರ ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವನಿಗೆ ಕಳಂಕವಿರುವದರಿಂದ ತೆರೆಯನ್ನು ದಾಟಿ ಒಳಗೆ ಬರಬಾರದು; ಯಜ್ಞವೇದಿಯ ಬಳಿಗೆ ಬರಬಾರದು; ನನ್ನ ಪವಿತ್ರಸ್ಥಾನಗಳ ಗೌರವಕ್ಕೆ ಅವನಿಂದ ಕುಂದು ಉಂಟಾಗಬಾರದು; ಆ ಸ್ಥಾನಗಳನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದರೆ ಅವನು ತೆರೆಯ ಬಳಿಗೆ ಹೋಗಬಾರದು; ಅವನು ಯಜ್ಞವೇದಿಕೆಯ ಬಳಿಗೆ ಹೋಗಬಾರದು. ಯಾಕೆಂದರೆ ಅವನು ಅಂಗವಿಕಲನಾಗಿದ್ದಾನೆ. ಅವನು ನನ್ನ ಪರಿಶುದ್ಧ ಸ್ಥಳಗಳನ್ನು ಅಶುದ್ಧಗೊಳಿಸಬಾರದು. ಯೆಹೋವನಾದ ನಾನೇ ಆ ಸ್ಥಳಗಳನ್ನು ಪರಿಶುದ್ಧಗೊಳಿಸಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆದರೆ ಅವನು ನ್ಯೂನತೆವುಳ್ಳವನಾದ್ದರಿಂದ ತೆರೆಯ ಒಳಗೆ ಹೋಗಬಾರದು ಹಾಗು ಯಜ್ಞವೇದಿಯ ಬಳಿಗೆ ಬರಬಾರದು. ಹೀಗೆ ಅವನು ನನ್ನ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು. ಏಕೆಂದರೆ ಅವರನ್ನು ಶುದ್ಧೀಕರಿಸುವ ಯೆಹೋವ ದೇವರು ನಾನೇ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 21:23
13 ತಿಳಿವುಗಳ ಹೋಲಿಕೆ  

ಇದಕ್ಕಾಗಿ ಅವನು ದೇವಸ್ಥಾನವನ್ನು ಬಿಡಲೇ ಬಾರದು; ಬಿಟ್ಟುಹೋದರೆ ತಾನು ಸೇವೆಮಾಡುವ ದೇವರ ಮಂದಿರದ ಗೌರವಕ್ಕೆ ಕುಂದು ಬರುವುದು. ತನ್ನ ದೇವರ ಅಭಿಷೇಕತೈಲವನ್ನು ತಲೆಯ ಮೇಲೆ ಹೊಯ್ಯಿಸಿಕೊಂಡು ಪ್ರತಿಷ್ಠಿತನಾಗಿದ್ದಾನಲ್ಲಾ, ನಾನು ಯೆಹೋವನು.


“‘ಇಸ್ರಾಯೇಲರು ಅಶುದ್ಧತೆಗೆ ದೂರವಾಗಿರುವಂತೆ ನೀವು ಅವರನ್ನು ಈ ರೀತಿಯಾಗಿ ಕಾಪಾಡಬೇಕು. ಅವರು ಅಪವಿತ್ರರಾಗಿದ್ದು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡಿದರೆ ನಾಶವಾಗುವರು.


ಕುರುಡರೇ, ಮೂರ್ಖರೇ, ಯಾವುದು ಹೆಚ್ಚಿನದು? ಚಿನ್ನವೋ, ಚಿನ್ನವನ್ನು ಪ್ರತಿಷ್ಠೆ ಮಾಡುವ ದೇವಾಲಯವೋ?


ದೇವರಿಗೆ ನೈವೇದ್ಯವಾದ ಆಹಾರದಲ್ಲಿ ಪರಿಶುದ್ಧವಾದದ್ದನ್ನು ಮತ್ತು ಮಹಾಪರಿಶುದ್ಧವಾದುದನ್ನು ಅವನು ಊಟಮಾಡಬಹುದು.


ಮೋಶೆಯು ಆರೋನನಿಗೂ, ಅವನ ಮಕ್ಕಳಿಗೂ ಮತ್ತು ಇಸ್ರಾಯೇಲರೆಲ್ಲರಿಗೂ ಈ ಆಜ್ಞೆಗಳನ್ನು ತಿಳಿಸಿದನು.


“ನೀನು ಇಸ್ರಾಯೇಲರ ಸಮೂಹದವರಿಗೆ ಹೀಗೆ ಆಜ್ಞಾಪಿಸಬೇಕು, ‘ನಿಮ್ಮ ದೇವರಾದ ಯೆಹೋವನೆಂಬ ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು.


ನಾನು ನಿಮ್ಮ ದೇವರಾದ ಯೆಹೋವನಾಗಿರುವುದರಿಂದ ನೀವು ನನ್ನವರಾಗಿ ಪರಿಶುದ್ಧರಾಗಿರಬೇಕು.


ಅವರು ದೇವರಿಗೆ ಮೀಸಲಾಗಿರಬೇಕು; ತಾವು ಸೇವಿಸುವ ದೇವರ ಹೆಸರನ್ನು ಅಪಕೀರ್ತಿಗೆ ಗುರಿಪಡಿಸಬಾರದು. ತಮ್ಮ ದೇವರ ಆಹಾರವನ್ನು ಅಂದರೆ ಯೆಹೋವನ ಹೋಮದ್ರವ್ಯಗಳನ್ನು ಅವರು ಸಮರ್ಪಿಸುವವರು ಆಗಿರುವುದರಿಂದ ಪವಿತ್ರರಾಗಿರಬೇಕು.


ಹಾಗೆ ಎಣಿಸಿದರೆ ತಾವು ಆ ನೈವೇದ್ಯಪದಾರ್ಥಗಳನ್ನು ಊಟಮಾಡುವುದರಿಂದ ಪಾಪಕ್ಕೆ ಒಳಗಾಗಿ ಶಿಕ್ಷೆಹೊಂದುವರು. ನನ್ನ ಸೇವೆಗೆ ಅವರನ್ನು ಪ್ರತಿಷ್ಠಿಸಿಕೊಂಡ ಯೆಹೋವನು ನಾನು’” ಎಂದು ಹೇಳಿದನು.


ನನ್ನ ದೇವರೇ, ಅವರು ಯಾಜಕತ್ವವನ್ನೂ, ಯಾಜಕರ ಮತ್ತು ಲೇವಿಯರ ಪ್ರತಿಜ್ಞೆಯನ್ನೂ ಹೊಲೆಮಾಡಿದ್ದಾರಲ್ಲಾ. ಅವರ ಕೃತ್ಯಗಳನ್ನೂ ನೆನಪುಮಾಡಿಕೋ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು