ಯಾಜಕಕಾಂಡ 21:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವರು ದೇವರಿಗೆ ಮೀಸಲಾಗಿರಬೇಕು; ತಾವು ಸೇವಿಸುವ ದೇವರ ಹೆಸರನ್ನು ಅಪಕೀರ್ತಿಗೆ ಗುರಿಪಡಿಸಬಾರದು. ತಮ್ಮ ದೇವರ ಆಹಾರವನ್ನು ಅಂದರೆ ಯೆಹೋವನ ಹೋಮದ್ರವ್ಯಗಳನ್ನು ಅವರು ಸಮರ್ಪಿಸುವವರು ಆಗಿರುವುದರಿಂದ ಪವಿತ್ರರಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅವರು ದೇವರಿಗೆ ಮೀಸಲಾಗಿರಬೇಕು; ತಾವು ಸೇವೆ ಮಾಡುವ ದೇವರ ಹೆಸರಿಗೆ ಅಪಕೀರ್ತಿ ತರಬಾರದು. ತಮ್ಮ ದೇವರ ಆಹಾರವನ್ನು, ಅಂದರೆ ಸರ್ವೇಶ್ವರನ ಹೋಮದ್ರವ್ಯಗಳನ್ನು ಅವರು ಸಮರ್ಪಿಸುವವರಾಗಿರುವುದರಿಂದ ಪವಿತ್ರರಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅವರು ದೇವರಿಗೆ ಮೀಸಲಾಗಿರಬೇಕು; ತಾವು ಸೇವಿಸುವ ದೇವರ ಹೆಸರನ್ನು ಅಪಕೀರ್ತಿಗೆ ಗುರಿಪಡಿಸಬಾರದು. ತಮ್ಮ ದೇವರ ಆಹಾರವನ್ನು ಅಂದರೆ ಯೆಹೋವನ ಹೋಮದ್ರವ್ಯಗಳನ್ನು ಅವರು ಸಮರ್ಪಿಸುವವರಾಗಿರುವದರಿಂದ ಪವಿತ್ರರಾಗಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅವರು ತಮ್ಮ ದೇವರಿಗೆ ಪ್ರತಿಷ್ಠಿತರಾಗಿರಬೇಕು. ಅವರು ದೇವರ ಹೆಸರಿಗೆ ಗೌರವ ತೋರಿಸಬೇಕು. ಯಾಕೆಂದರೆ ಅವರು ಅಗ್ನಿಯ ಮೂಲಕ ಅರ್ಪಿಸಿದ ರೊಟ್ಟಿಯನ್ನು ಮತ್ತು ಕಾಣಿಕೆಗಳನ್ನು ಯೆಹೋವನಿಗೆ ತೆಗೆದುಕೊಂಡು ಹೋಗುತ್ತಾರೆ. ಆದ್ದರಿಂದ ಅವರು ಪವಿತ್ರರಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅವರು ತಮ್ಮ ಯೆಹೋವ ದೇವರಿಗೆ ಅಗ್ನಿಯಿಂದ ಮಾಡಿದ ಸಮರ್ಪಣೆಗಳನ್ನು ಮತ್ತು ತನ್ನ ದೇವರ ರೊಟ್ಟಿಯನ್ನು ಸಮರ್ಪಿಸುವುದರಿಂದ, ಅವರು ತಮ್ಮ ದೇವರ ಹೆಸರನ್ನು ಅಗೌರವಪಡಿಸದೆ, ತಮ್ಮ ದೇವರಿಗೆ ಪರಿಶುದ್ಧರಾಗಿರಬೇಕು. ಆದಕಾರಣ ಅವರು ಪರಿಶುದ್ಧರಾಗಿರುವರು. ಅಧ್ಯಾಯವನ್ನು ನೋಡಿ |