Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 21:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯಾಜಕನ ಮಗಳು ವೇಶ್ಯೆ ಎಂಬ ನಿಂದೆಗೆ ಒಳಗಾದರೆ ತನ್ನ ತಂದೆಯನ್ನು ನಿಂದೆಗೆ ಒಳಪಡಿಸಿದವಳಾದಳು, ಅವಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಯಾಜಕನ ಮಗಳು ಸೂಳೆತನದಿಂದ ನಿಂದೆಗೆ ಒಳಗಾದರೆ ತನ್ನ ತಂದೆಯನ್ನೂ ನಿಂದೆಗೆ ಒಳಪಡಿಸಿದವಳಾದಳು; ಅವಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯಾಜಕನ ಮಗಳು ಸೂಳೆತನದಿಂದ ನಿಂದೆಗೆ ಒಳಗಾದರೆ ತನ್ನ ತಂದೆಯನ್ನೂ ನಿಂದೆಗೆ ಒಳಪಡಿಸಿದವಳಾದಳು; ಅವಳನ್ನು ಬೆಂಕಿಯಿಂದ ಸುಟ್ಟು ಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಯಾಜಕನ ಮಗಳು ವೇಶ್ಯೆಯಾಗಿದ್ದರೆ, ಅವಳು ತನ್ನ ಗೌರವವನ್ನು ಹಾಳುಮಾಡಿಕೊಂಡವಳೂ ತನ್ನ ತಂದೆಗೆ ಅವಮಾನವನ್ನು ಉಂಟುಮಾಡಿದವಳೂ ಆಗಿದ್ದಾಳೆ. ಅವಳನ್ನು ಸುಟ್ಟುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ ‘ಯಾವುದೇ ಯಾಜಕನ ಮಗಳು ವ್ಯಭಿಚಾರ ಕೃತ್ಯದಿಂದ ತನ್ನನ್ನು ಅಪವಿತ್ರ ಮಾಡಿಕೊಂಡರೆ, ಅವಳು ತನ್ನ ತಂದೆಯನ್ನು ಅಗೌರವಿಸಿದ್ದಾಳೆ. ಅವಳನ್ನು ಬೆಂಕಿಯಿಂದ ಸುಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 21:9
16 ತಿಳಿವುಗಳ ಹೋಲಿಕೆ  

ಸುಮಾರು ಮೂರು ತಿಂಗಳಾದ ಮೇಲೆ ಯೆಹೂದನಿಗೆ, “ನಿನ್ನ ಸೊಸೆಯಾದ ತಾಮಾರಳು ವ್ಯಭಿಚಾರದಿಂದ ಬಸುರಾಗಿದ್ದಾಳೆ” ಎಂಬ ವರ್ತಮಾನವನ್ನು ತಿಳಿಸಿದರು. ಆಗ ಯೆಹೂದನು, “ಆಕೆಯನ್ನು ಹೊರಗೆ ಕರತನ್ನಿರಿ, ಆಕೆಯನ್ನು ಸುಡಬೇಕು” ಎಂದು ಹೇಳಿದನು.


“‘ಮಗಳನ್ನು ವೇಶ್ಯೆಯನ್ನಾಗಿ ಮಾಡಬಾರದು. ಹಾಗೆ ಮಾಡಿದರೆ ವೇಶ್ಯಾವಾಟಿಕೆ ಪ್ರಬಲವಾಗಿ ದೇಶದಲ್ಲೆಲ್ಲಾ ತುಂಬಿಹೋಗುವುದು.


ಸಭೆಯ ಹಿರಿಯನು ದೋಷರಹಿತನೂ, ಏಕಪತ್ನಿಯುಳ್ಳವನೂ ಆಗಿರಬೇಕು; ಆತನ ಮಕ್ಕಳು ಕರ್ತನನ್ನು ನಂಬಿದವರಾಗಿರಬೇಕು; ಅವರ ಮಕ್ಕಳು ದುರ್ಮಾರ್ಗಿಗಳೂ ಮತ್ತು ಅವಿಧೇಯತೆಯ ಆರೋಪವಿಲ್ಲದವರು ಆಗಿರಬೇಕು.


ಗಮನವಿಟ್ಟು ಕೇಳಿ, ನಿಮ್ಮ ಸಂತಾನ ಬೆಳೆಯದಂತೆ ಶಪಿಸುವೆ; ನಿಮ್ಮ ಮೇಲೆ ಯಜ್ಞಪಶುಗಳ ಸಗಣಿಯನ್ನು ಎರಚುವೆನು. ಈ ಅವಮಾನದಿಂದ ನೀವು ತಿಪ್ಪೆಯ ಪಾಲಾಗುವಿರಿ.


ಆಗ ಅವರು ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು.


“ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಆ ಭ್ರಷ್ಟರು ನಡುಕಕ್ಕೆ ಒಳಗಾಗಿ, ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗುವರು” ಎಂದುಕೊಳ್ಳುತ್ತಾರೆ.


ಇದೆಲ್ಲಾ ನೆರವೇರುವುದೆಂಬುದಕ್ಕೆ ನಿನ್ನ ಮಕ್ಕಳಾದ ಹೊಫ್ನಿ ಹಾಗೂ ಫೀನೆಹಾಸರು ಒಂದೇ ದಿನದಲ್ಲಿ ಸಾಯುವುದೇ ಗುರುತಾಗಿರುವುದು.


ಹೀಗೆ ಆ ಯೌವನಸ್ಥರು ಯೆಹೋವನ ನೈವೇದ್ಯವನ್ನು ತುಚ್ಛೀಕರಿಸಿದ್ದರಿಂದ ಅವರ ಪಾಪವು ಯೆಹೋವನ ದೃಷ್ಟಿಯಲ್ಲಿ ಆಧಿಕವಾಯಿತು.


ಆಗ ಯೆಹೋಶುವನು ಆಕಾನನಿಗೆ “ನೀನು ನಮ್ಮನ್ನು ಆಪತ್ತಿಗೆ ಗುರಿಮಾಡಿದ್ದೇಕೆ? ಈ ಹೊತ್ತು ಯೆಹೋವನು ನಿನ್ನ ಮೇಲೆ ಆಪತ್ತನ್ನು ಬರಮಾಡುವನು” ಎಂದು ಹೇಳಿದ ಕೂಡಲೆ ಇಸ್ರಾಯೇಲ್ಯರೆಲ್ಲರೂ ಅವನನ್ನು ಕಲ್ಲೆಸೆದು ಕೊಂದರು. ಅವನಿಗಿದ್ದದ್ದೆಲ್ಲವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.


ಯಾವನು ಮೀಸಲಾದ ವಸ್ತುಗಳನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುತ್ತಾನೋ ಅವನು ಯೆಹೋವನ ನಿಬಂಧನೆಯನ್ನು ಮೀರಿ ಇಸ್ರಾಯೇಲರಲ್ಲಿ ಬುದ್ಧಿಹೀನಕಾರ್ಯ ನಡಿಸಿದ್ದರಿಂದ ತನ್ನ ಎಲ್ಲಾ ಆಸ್ತಿ ಸಹಿತವಾಗಿ ಸುಡಲ್ಪಡಬೇಕು’” ಎಂದು ಹೇಳು ಎಂಬುದೇ.


ಯಾವನಾದರೂ ಒಬ್ಬ ಸ್ತ್ರೀಯನ್ನು ಹಾಗೂ ಅವಳ ತಾಯಿಯನ್ನು ಸಂಗಮಿಸಿದರೆ ಅದು ಅತಿದುಷ್ಟಕಾರ್ಯವಾದುದರಿಂದ ಆ ಮೂರು ಜನರನ್ನು ಬೆಂಕಿಯಿಂದ ಸುಡಿಸಿಬಿಡಬೇಕು; ಅಂತಹ ದುರಾಚಾರವು ನಿಮ್ಮಲ್ಲಿ ಎಷ್ಟು ಮಾತ್ರವೂ ನಡೆಯಬಾರದು.


ಆದಕಾರಣ ನೀವು ಸಬ್ಬತ್ ದಿನವನ್ನು ಪರಿಶುದ್ಧವಾದ ದಿನವೆಂದು ಎಣಿಸಿ ಆಚರಿಸಬೇಕು. ಅದನ್ನು ಅಶುದ್ಧಪಡಿಸುವ ಪ್ರತಿಯೊಬ್ಬನಿಗೆ ಮರಣಶಿಕ್ಷೆಯಾಗಬೇಕು. ಆ ದಿನದಲ್ಲಿ ಯಾವನಾದರೂ ಕೆಲಸವನ್ನು ಮಾಡಿದರೆ ಅವನನ್ನು ಕುಲದಿಂದ ತೆಗೆದುಹಾಕಬೇಕು.


ಅವಳು ತಂದೆಯ ಅಧೀನದಲ್ಲಿರುವಾಗಲ್ಲೇ ಪರಪುರುಷನೊಡನೆ ಸಂಪರ್ಕಮಾಡಿ ಇಸ್ರಾಯೇಲರೊಳಗೆ ದುರಾಚಾರವನ್ನು ನಡಿಸಿದ್ದರಿಂದ, ಅವರು ಅವಳನ್ನು ತಂದೆಯ ಮನೆಯ ಬಾಗಿಲಿಗೆ ಕರೆಯಿಸಬೇಕು; ಊರಿನವರೆಲ್ಲರು ಅವಳನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ನಿವಾರಿಸಿಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು