ಯಾಜಕಕಾಂಡ 22:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯಾಜಕನ ಮಗಳು ವಿಧವೆಯಾಗಲಿ ಅಥವಾ ಗಂಡನಿಂದ ಬಿಡಲ್ಪಟ್ಟವಳಾಗಲಿ, ಮಕ್ಕಳಿಲ್ಲದೆ ಇದ್ದರೆ ಬಾಲ್ಯದಲ್ಲಿ ತಂದೆಯ ಬಳಿಯಲ್ಲಿ ಇದ್ದಂತೆಯೇ ಕನ್ಯೆಯಾಗಿಯೇ ತಂದೆಯ ಮನೆಯನ್ನು ಸೇರಿ ತಂದೆಯ ಆಹಾರದಲ್ಲಿ ಭಾಗಿಯಾಗಬಹುದು. ಯಾಜಕರಲ್ಲದ ಇತರರು ಅದನ್ನು ಊಟಮಾಡಲೇಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಯಾಜಕನ ಮಗಳು ವಿಧವೆಯಾಗಿದ್ದರೆ, ಗಂಡಬಿಟ್ಟವಳಾಗಿದ್ದರೆ, ಮಕ್ಕಳಿಲ್ಲದೆ ಇದ್ದರೆ, ಬಾಲ್ಯದಲ್ಲಿ ತಂದೆಯ ಬಳಿ ಇದ್ದಂತೆಯೇ ಮತ್ತೆ ತಂದೆಯ ಮನೆ ಸೇರಿದ್ದರೆ ಆಕೆ ತಂದೆಯ ಆಹಾರದಲ್ಲಿ ಭಾಗಿಯಾಗಬಹುದು. ಯಾಜಕರಲ್ಲದ ಇತರರು ಅದನ್ನು ಊಟಮಾಡಲೇಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಯಾಜಕನ ಮಗಳು ವಿಧವೆಯಾಗಿಯಾಗಲಿ ಗಂಡನಿಂದ ಬಿಡಲ್ಪಟ್ಟವಳಾಗಿಯಾಗಲಿ ಮಕ್ಕಳಿಲ್ಲದ ಪಕ್ಷಕ್ಕೆ ಬಾಲ್ಯದಲ್ಲಿ ತಂದೆಯ ಬಳಿಯಲ್ಲಿ ಇದ್ದಂತೆಯೇ ತಿರಿಗಿ ತಂದೆಯ ಮನೆ ಸೇರಿ ತಂದೆಯ ಆಹಾರದಲ್ಲಿ ಭಾಗಿಯಾಗಬಹುದು. ಯಾಜಕರಲ್ಲದ ಇತರರು ಅದನ್ನು ಉಣ್ಣಲೇಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಯಾಜಕನ ಮಗಳು ವಿಧವೆಯಾಗಿದ್ದರೆ ಅಥವಾ ಗಂಡ ಬಿಟ್ಟವಳಾಗಿದ್ದರೆ ಅಲ್ಲದೆ ಅವಳಿಗೆ ಆಧಾರ ನೀಡುವಂಥ ಮಕ್ಕಳೂ ಇಲ್ಲದಿದ್ದರೆ ಮತ್ತು ಅವಳು ತನ್ನ ತಂದೆಯ ಮನೆಗೆ ಹಿಂತಿರುಗಿ ಹೋದರೆ, ಆಗ ಅವಳು ತಂದೆಯ ಆಹಾರದಲ್ಲಿ ಸ್ವಲ್ಪ ತಿನ್ನಬಹುದು. ಆದರೆ ಯಾಜಕನ ಕುಟುಂಬದವರು ಮಾತ್ರವೇ ಈ ಆಹಾರವನ್ನು ತಿನ್ನಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಯಾಜಕನ ಮಗಳು ವಿಧವೆಯಾಗಿದ್ದರೆ ಇಲ್ಲವೆ ಗಂಡಬಿಟ್ಟವಳಾಗಿದ್ದರೆ ಮತ್ತು ಮಕ್ಕಳಿಲ್ಲದವಳಾಗಿ ತನ್ನ ಯೌವನದಲ್ಲಿದ್ದಂತೆಯೇ ತನ್ನ ತಂದೆಯ ಮನೆಗೆ ಹಿಂದಿರುಗಿದವಳಾಗಿದ್ದರೆ, ಅವಳು ತನ್ನ ತಂದೆಯ ಆಹಾರದಲ್ಲಿ ತಿನ್ನಲಿ. ಆದರೆ ಯಾಜಕರಲ್ಲದ ಕುಟುಂಬದವರು ಅದರಲ್ಲಿ ತಿನ್ನಬಾರದು. ಅಧ್ಯಾಯವನ್ನು ನೋಡಿ |