Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 22:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಹಾಗೆ ಎಣಿಸಿದರೆ ತಾವು ಆ ನೈವೇದ್ಯಪದಾರ್ಥಗಳನ್ನು ಊಟಮಾಡುವುದರಿಂದ ಪಾಪಕ್ಕೆ ಒಳಗಾಗಿ ಶಿಕ್ಷೆಹೊಂದುವರು. ನನ್ನ ಸೇವೆಗೆ ಅವರನ್ನು ಪ್ರತಿಷ್ಠಿಸಿಕೊಂಡ ಯೆಹೋವನು ನಾನು’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಹಾಗೆ ಮಾಡಿದರೆ ತಾವು ಆ ನೈವೇದ್ಯಗಳನ್ನು ಊಟ ಮಾಡುವುದರಿಂದ ಪಾಪಕ್ಕೆ ಒಳಗಾಗಿ ಶಿಕ್ಷೆಗೆ ಗುರಿಯಾಗುವರು, ನನ್ನ ಸೇವೆಗೆ ಯಾಜಕರನ್ನು ಪ್ರತಿಷ್ಠಿಸಿಕೊಂಡ ಸರ್ವೇಶ್ವರ ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಹಾಗೆ ಎಣಿಸಿದರೆ ತಾವು ಆ ನೈವೇದ್ಯಪದಾರ್ಥಗಳನ್ನು ಊಟಮಾಡುವದರಿಂದ ಪಾಪಕ್ಕೆ ಒಳಗಾಗಿ ಶಿಕ್ಷೆಹೊಂದಾರು. ನನ್ನ ಸೇವೆಗೆ ಅವರನ್ನು ಪ್ರತಿಷ್ಠಿಸಿಕೊಂಡ ಯೆಹೋವನು ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯಾಜಕರು ಅವುಗಳನ್ನು ಪರಿಶುದ್ಧವಾದವುಗಳೆಂದು ಪರಿಗಣಿಸದೆ ನೈವೇದ್ಯ ಪದಾರ್ಥಗಳನ್ನು ತಿಂದರೆ ಪಾಪಕ್ಕೆ ಒಳಗಾಗುವರು. ಯೆಹೋವನಾದ ನಾನೇ ಅವುಗಳನ್ನು ಪವಿತ್ರಗೊಳಿಸಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇಲ್ಲವೆ ಅವರು ಪರಿಶುದ್ಧವಾದವುಗಳನ್ನು ತಿನ್ನುವುದರಿಂದ ತಮ್ಮ ಮೇಲೆ ಅತಿಕ್ರಮದ ಅಪರಾಧವನ್ನು ಹೊತ್ತುಕೊಳ್ಳದಿರಲಿ. ಏಕೆಂದರೆ ಅವರನ್ನು ಶುದ್ಧೀಕರಿಸುವ ಯೆಹೋವ ದೇವರು ನಾನೇ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 22:16
15 ತಿಳಿವುಗಳ ಹೋಲಿಕೆ  

ಯಾಜಕರು ಈ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯಬೇಕು. ಇವುಗಳನ್ನು ಮೀರಿ ನನ್ನ ನೈವೇದ್ಯವನ್ನು ಅಪವಿತ್ರಪಡಿಸಿದರೆ ಆ ದೋಷದ ಫಲವನ್ನು ಅನುಭವಿಸಿ ಸತ್ತಾರು. ಅವರನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು.


ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.


ನನ್ನ ಅಪರಾಧಗಳು ನನ್ನನ್ನು ಮುಳುಗಿಸಿಬಿಟ್ಟಿವೆ; ಅವು ಹೊರಲಾರದಷ್ಟು ಭಾರವಾದ ಹೊರೆಯಂತಿವೆ.


ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯಬೇಕು. ನಾನು ನಿಮ್ಮನ್ನು ಪರಿಶುದ್ಧಜನವಾಗುವಂತೆ ಮಾಡುವ ಯೆಹೋವನು.


ಆ ಯಜ್ಞಪಶುವಿನ ಮಾಂಸದಲ್ಲಿ ಸ್ವಲ್ಪವನ್ನಾದರೂ ಮೂರನೆಯ ದಿನದಲ್ಲಿ ಊಟಮಾಡಿದರೆ ಆ ಯಜ್ಞವು ಸಮರ್ಪಕವಾದದ್ದಲ್ಲ; ಅರ್ಪಿಸಿದವನಿಗೆ ಅದರಿಂದ ಫಲವೇನೂ ದೊರೆಯುವುದಿಲ್ಲ. ಅದು ಅಸಹ್ಯವಾದುದರಿಂದ ಅದನ್ನು ತಿಂದವನು ಆ ಪಾಪದ ಫಲವನ್ನು ಅನುಭವಿಸಬೇಕು.


ಕುರುಡರೇ, ಮೂರ್ಖರೇ, ಯಾವುದು ಹೆಚ್ಚಿನದು? ಚಿನ್ನವೋ, ಚಿನ್ನವನ್ನು ಪ್ರತಿಷ್ಠೆ ಮಾಡುವ ದೇವಾಲಯವೋ?


ಇಸ್ರಾಯೇಲ್ಯರು ಕಾಣಿಕೆಯಾಗಿ ಸಮರ್ಪಿಸುವ ದೇವರ ಎಲ್ಲಾ ಪವಿತ್ರವಸ್ತುಗಳ ವಿಷಯದಲ್ಲಿ ದೋಷವೇನಾದರೂ ಇದ್ದರೆ ಆರೋನನು ಆ ಪಟ್ಟವನ್ನು ಯಾವಾಗಲೂ ಹಣೆಯ ಮೇಲೆ ಧರಿಸಿ ಆ ದೋಷ ಫಲವನ್ನು ವಹಿಸಿಕೊಳ್ಳುವುದರಿಂದ ಅವರು ಯೆಹೋವನಿಗೆ ಮೆಚ್ಚಿಕೆಯುಳ್ಳವರಾಗಿರುವರು.


“ಆ ದೋಷಪರಿಹಾರಕ ಯಜ್ಞದ್ರವ್ಯವು ಮಹಾಪರಿಶುದ್ಧವಾದದ್ದಲ್ಲವೇ? ನೀವು ಜನಸಮೂಹದ ಪಾಪಗಳನ್ನು ಪರಿಹಾರಮಾಡುವಂತೆಯೂ, ಅವರಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವಂತೆಯೂ ಅದು ನಿಮ್ಮ ಭಾಗವಾಗಿ ನೇಮಕವಾಗಿದೆಯಲ್ಲಾ. ನೀವು ಯಾಕೆ ಅದನ್ನು ಪವಿತ್ರಸ್ಥಳದೊಳಗೆ ಊಟಮಾಡಲಿಲ್ಲ?


ಯೆಹೋವನು ಮೋಶೆಯೊಂದಿಗೆ ಮಾತನಾಡಿ,


ಆಗ ಯೆಹೋವನು ಆರೋನನಿಗೆ, “ದೇವದರ್ಶನದ ಗುಡಾರದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ, ನಿನ್ನ ಸಂತತಿಯವರೂ, ನಿನ್ನ ಕುಲದವರೆಲ್ಲರೂ ಆ ದೋಷದ ಫಲವನ್ನು ಅನುಭವಿಸಬೇಕು. ಯಾಜಕತ್ವದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ, ನಿನ್ನ ಸಂತತಿಯವರು ಮಾತ್ರವೇ ಆ ದೋಷದ ಫಲವನ್ನು ಅನುಭವಿಸಬೇಕು.


ಅದರಲ್ಲಿ ಉತ್ತಮ ಭಾಗವನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಿದ ನಂತರ ನೀವು ಉಳಿದ ವಿಷಯದಲ್ಲಿ ಯಾವ ದೋಷಕ್ಕೂ ಗುರಿಯಾಗುವುದಿಲ್ಲ. ಇಸ್ರಾಯೇಲರು ಸಮರ್ಪಿಸುವ ದೇವರ ವಸ್ತುಗಳನ್ನು ಅಪವಿತ್ರಮಾಡಿದರೆ ನೀವು ಸಾಯುವಿರಿ’” ಎಂದನು.


ಅವರು ನಿಮ್ಮ ದೇವರ ಆಹಾರವನ್ನು ಸಮರ್ಪಿಸುವವರಾದ ಕಾರಣ ಅವರನ್ನು ದೇವರ ಸೇವಕರೆಂದು ಭಾವಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಯೆಹೋವನೆಂಬ ನಾನು ಪರಿಶುದ್ಧನಾಗಿರುವುದರಿಂದ ಅವರನ್ನು ಪರಿಶುದ್ಧರೆಂದು ನೀವು ಭಾವಿಸಬೇಕು.


ಇಲ್ಲವಾದರೆ ಅವನ ಸಂತತಿಯ ಸ್ವಜನರೊಳಗೆ ಅವನು ಅಪವಾದಕ್ಕೆ ಗುರಿಯಾಗುವನು. ಅವನನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು’” ಎಂದು ಹೇಳಿದನು.


ಅವನಿಗೆ ಕಳಂಕವಿರುವುದರಿಂದ ತೆರೆಯನ್ನು ದಾಟಿ ಒಳಗೆ ಬರಬಾರದು; ಯಜ್ಞವೇದಿಯ ಬಳಿಗೆ ಬರಬಾರದು; ನನ್ನ ಪವಿತ್ರಸ್ಥಾನಗಳ ಗೌರವಕ್ಕೆ ಅವನಿಂದ ಕುಂದು ಉಂಟಾಗಬಾರದು; ಆ ಸ್ಥಾನಗಳನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು’” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು