ಯಾಜಕಕಾಂಡ 22:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅನ್ಯದೇಶದವನಿಂದ ತೆಗೆದುಕೊಂಡ ಅಂತಹ ಪಶುವನ್ನು ನಿಮ್ಮ ದೇವರಿಗೆ ಆಹಾರವಾಗಿ ಒಪ್ಪಿಸಬಾರದು; ಅದು ಕುಂದುಳ್ಳದ್ದು, ಪೂರ್ಣಾಂಗವಾದುದಲ್ಲ; ಆದಕಾರಣ ಸಮರ್ಪಣೆ ಆಗುವುದಿಲ್ಲ’” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಅನ್ಯದೇಶದವನಿಂದ ತೆಗೆದುಕೊಂಡ ಅಂಥ ಪ್ರಾಣಿಯನ್ನು ನಿಮ್ಮ ದೇವರಿಗೆ ಆಹಾರವಾಗಿ ಒಪ್ಪಿಸಬಾರದು. ಅದು ಕುಂದುಳ್ಳದ್ದು, ಕಳಂಕಿತವಾದದ್ದು. ಆದಕಾರಣ ಸ್ವೀಕೃತವಾಗದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅನ್ಯದೇಶದವನಿಂದ ತೆಗೆದುಕೊಂಡು ಅಂಥ ಪಶುವನ್ನು ನಿಮ್ಮ ದೇವರಿಗೆ ಆಹಾರವಾಗಿ ಒಪ್ಪಿಸಬಾರದು; ಅದು ಕುಂದುಳ್ಳದ್ದು, ಪೂರ್ಣಾಂಗವಾದದ್ದಲ್ಲ; ಆದಕಾರಣ ಸಮರ್ಪಕವಾಗುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 “ಪರದೇಶಸ್ಥರಿಂದ ಯೆಹೋವನಿಗೆ ಬಲಿಪಶುಗಳನ್ನು ತೆಗೆದುಕೊಳ್ಳಬಾರದು. ಯಾಕೆಂದರೆ ಆ ಪಶುಗಳಿಗೆ ಒಂದುವೇಳೆ ಪೆಟ್ಟಾಗಿರಬಹುದು. ಅವುಗಳಲ್ಲಿ ಏನಾದರೂ ದೋಷವಿರಬಹುದು. ಅವುಗಳು ಸಮರ್ಪಕವಾಗುವುದಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಇದಲ್ಲದೆ ಪರಕೀಯನಿಂದ ತೆಗೆದುಕೊಂಡ ಅಂತಹ ಯಾವ ಪಶುವನ್ನೂ ನಿಮ್ಮ ದೇವರಿಗೆ ಆಹಾರವಾಗಿ ಅರ್ಪಿಸಬಾರದು. ಏಕೆಂದರೆ ಅವರ ಕುಂದುಳ್ಳದ್ದು ಮತ್ತು ದೋಷಗಳೂ ಅವುಗಳಲ್ಲಿ ಇರುತ್ತವೆ. ಅವು ನಿಮಗೋಸ್ಕರವಾಗಿ ಅಂಗೀಕಾರವಾಗುವುದಿಲ್ಲ.’ ” ಅಧ್ಯಾಯವನ್ನು ನೋಡಿ |