Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 22:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 “ಕರುವಾಗಲಿ, ಕುರಿಮರಿಯಾಗಲಿ ಅಥವಾ ಆಡುಮರಿಯಾಗಲಿ ಹುಟ್ಟಿದಾಗ ಅದು ಏಳು ದಿನಗಳ ವರೆಗೆ ತಾಯಿಯ ಬಳಿಯಲ್ಲಿ ಇರಬೇಕು. ಎಂಟನೆಯ ದಿನದಿಂದ ಅದನ್ನು ಯೆಹೋವನಿಗೆ ಹೋಮವಾಗಿ ಸಮರ್ಪಿಸಿದರೆ ಅದು ಅಂಗೀಕಾರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 “ಕರುವಾಗಲಿ, ಕುರಿಮರಿಯಾಗಲಿ, ಆಡುಮರಿಯಾಗಲಿ ಹುಟ್ಟಿ ಏಳು ದಿವಸ ಆದ ಬಳಿಕ ಅದನ್ನು ಸರ್ವೇಶ್ವರನಿಗೆ ಹೋಮವಾಗಿ ಸಮರ್ಪಿಸಿದರೆ ಅಂಗೀಕೃತವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಕರುವಾಗಲಿ ಕುರಿಮರಿಯಾಗಲಿ ಆಡುಮರಿಯಾಗಲಿ ಹುಟ್ಟಿದಾಗ ಅದು ಏಳು ದಿವಸ ತಾಯಿಯ ಬಳಿಯಲ್ಲಿ ಇರಬೇಕು. ಎಂಟನೆಯ ದಿವಸ ಮೊದಲುಗೊಂಡು ಅದನ್ನು ಯೆಹೋವನಿಗೆ ಹೋಮವಾಗಿ ಸಮರ್ಪಿಸಿದರೆ ಅಂಗೀಕಾರವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 “ಕರುವಾಗಲಿ ಕುರಿಮರಿಯಾಗಲಿ ಅಥವಾ ಆಡಾಗಲಿ ಹುಟ್ಟಿದ ಬಳಿಕ ತನ್ನ ತಾಯಿಯೊಂದಿಗೆ ಏಳು ದಿನಗಳವರೆಗೆ ಇರಲೇಬೇಕು. ಎಂಟನೆಯ ದಿನದಲ್ಲಿ ಮತ್ತು ಅದರ ನಂತರ, ಆ ಪಶುವು ಸರ್ವಾಂಗಹೋಮಕ್ಕೆ ಯೋಗ್ಯವಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 “ಹೋರಿಯನ್ನಾಗಲಿ ಇಲ್ಲವೆ ಕುರಿಯನ್ನಾಗಲಿ ಇಲ್ಲವೆ ಆಡನ್ನಾಗಲಿ ತಂದಾಗ, ಏಳು ದಿವಸಗಳವರೆಗೆ ಅದು ತನ್ನ ತಾಯಿಯ ಬಳಿಯಲ್ಲಿ ಇರಲಿ. ಎಂಟನೆಯ ದಿನದಿಂದ ಅದು ಯೆಹೋವ ದೇವರಿಗೆ ದಹನಬಲಿಯಾಗಿ ಸಮರ್ಪಿಸಿದರೆ ಅಂಗೀಕಾರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 22:27
8 ತಿಳಿವುಗಳ ಹೋಲಿಕೆ  

ಅದರಂತೆಯೇ ನಿಮ್ಮ ಕುರಿ, ದನಗಳ ಚೊಚ್ಚಲು ಮರಿಗಳನ್ನು ನನಗೆ ಸಮರ್ಪಿಸಬೇಕು. ಏಳು ದಿನಗಳ ಕಾಲ ಆ ಮರಿ ತನ್ನ ತಾಯಿಯೊಂದಿಗಿರಲಿ. ಎಂಟನೆಯ ದಿನದಲ್ಲಿ ಅದನ್ನು ನನಗೆ ಸಮರ್ಪಿಸಬೇಕು.


ಅನ್ಯದೇಶದವನಿಂದ ತೆಗೆದುಕೊಂಡ ಅಂತಹ ಪಶುವನ್ನು ನಿಮ್ಮ ದೇವರಿಗೆ ಆಹಾರವಾಗಿ ಒಪ್ಪಿಸಬಾರದು; ಅದು ಕುಂದುಳ್ಳದ್ದು, ಪೂರ್ಣಾಂಗವಾದುದಲ್ಲ; ಆದಕಾರಣ ಸಮರ್ಪಣೆ ಆಗುವುದಿಲ್ಲ’” ಅಂದನು.


ಇಸ್ರಾಯೇಲ್ಯರು ಕಾಣಿಕೆಯಾಗಿ ಸಮರ್ಪಿಸುವ ದೇವರ ಎಲ್ಲಾ ಪವಿತ್ರವಸ್ತುಗಳ ವಿಷಯದಲ್ಲಿ ದೋಷವೇನಾದರೂ ಇದ್ದರೆ ಆರೋನನು ಆ ಪಟ್ಟವನ್ನು ಯಾವಾಗಲೂ ಹಣೆಯ ಮೇಲೆ ಧರಿಸಿ ಆ ದೋಷ ಫಲವನ್ನು ವಹಿಸಿಕೊಳ್ಳುವುದರಿಂದ ಅವರು ಯೆಹೋವನಿಗೆ ಮೆಚ್ಚಿಕೆಯುಳ್ಳವರಾಗಿರುವರು.


ಯೆಹೋವನು ಮೋಶೆಯೊಂದಿಗೆ ಮಾತನಾಡಿ,


ಆಗ ಸಮುವೇಲನು ಹಾಲುಕುಡಿಯುವ ಕುರಿಮರಿಯನ್ನು ತಂದು ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಿ ಇಸ್ರಾಯೇಲ್ಯರಿಗೋಸ್ಕರ ಮೊರೆಯಿಡಲು ಆತನು ಸದುತ್ತರವನ್ನು ದಯಪಾಲಿಸಿದನು.


ನಿಮ್ಮ ಕಣದಿಂದ ಹಾಗೂ ದ್ರಾಕ್ಷಾಲತೆಯಿಂದ ನನಗೆ ಸಲ್ಲಿಸತಕ್ಕದ್ದನ್ನು ಸಮರ್ಪಿಸುವುದಕ್ಕೆ ತಡಮಾಡಬಾರದು. ನಿಮ್ಮ ಚೊಚ್ಚಲು ಗಂಡು ಮಕ್ಕಳನ್ನು ನನಗೆ ಸಮರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು