ಯಾಜಕಕಾಂಡ 22:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವರಿಗೆ ನೀನು ಹೀಗೆ ಆಜ್ಞಾಪಿಸಬೇಕು, ‘ನಿಮ್ಮಲ್ಲಿಯಾಗಲಿ ಅಥವಾ ನಿಮ್ಮ ಸಂತತಿಯವರಲ್ಲಾಗಲಿ ಯಾವನಾದರೂ ಅಶುದ್ಧನಾಗಿರುವಾಗ ಇಸ್ರಾಯೇಲರು ಯೆಹೋವನಿಗೆ ಮೀಸಲೆಂದು ಸಮರ್ಪಿಸುವ ದ್ರವ್ಯಗಳ ಬಳಿಗೆ ಬಂದರೆ, ಅವನು ನನ್ನ ಸಾನ್ನಿಧ್ಯಸೇವೆಯಿಂದ ತೆಗೆದು ಹಾಕಬೇಕು; ನಾನು ಯೆಹೋವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅವರಿಗೆ ಹೀಗೆಂದು ವಿಧಿಸು: ನಿಮ್ಮಲ್ಲಿಯಾಗಲಿ, ನಿಮ್ಮ ಸಂತತಿಯವರಲ್ಲಿಯಾಗಲಿ ಯಾವನಾದರು ಅಶುದ್ಧನಾಗಿರುವಾಗ ಇಸ್ರಯೇಲರು ಸರ್ವೇಶ್ವರ ಸ್ವಾಮಿಗೆ ಮೀಸಲೆಂದು ಸಮರ್ಪಿಸುವ ಕಾಣಿಕೆಗಳ ಬಳಿಗೆ ಬಂದರೆ ಅವನನ್ನು ನನ್ನ ಸಾನ್ನಿಧ್ಯ ಸೇವೆಯಿಂದ ತೆಗೆದುಹಾಕಬೇಕು. ನಾನು ಸರ್ವೇಶ್ವರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅವರಿಗೆ ನೀನು ಹೀಗೆ ಆಜ್ಞಾಪಿಸಬೇಕು - ನಿಮ್ಮಲ್ಲಿಯಾಗಲಿ ನಿಮ್ಮ ಸಂತತಿಯವರಲ್ಲಿಯಾಗಲಿ ಯಾವನಾದರೂ ಅಶುದ್ಧನಾಗಿರುವಾಗ ಇಸ್ರಾಯೇಲ್ಯರು ಯೆಹೋವನಿಗೆ ಮೀಸಲೆಂದು ಸಮರ್ಪಿಸುವ ದ್ರವ್ಯಗಳ ಬಳಿಗೆ ಬಂದರೆ ಅವನು ನನ್ನ ಸಾನ್ನಿಧ್ಯಸೇವೆಯಿಂದ ತೆಗೆಯಲ್ಪಡಬೇಕು; ನಾನು ಯೆಹೋವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಿಮ್ಮ ಸಂತತಿಯವರೆಲ್ಲರಲ್ಲಿ ಯಾವನಾದರೂ ಅಪವಿತ್ರನಾಗಿರುವಾಗ ಅವುಗಳನ್ನು ಮುಟ್ಟಿದರೆ, ಅವನನ್ನು ನನ್ನ ಸನ್ನಿಧಿ ಸೇವೆಯಿಂದ ತೆಗೆದುಹಾಕಬೇಕು! ಇಸ್ರೇಲರು ಅವುಗಳನ್ನು ನನಗೆ ಕೊಟ್ಟಿದ್ದಾರೆ. ನಾನೇ ಯೆಹೋವನು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 “ಅವರಿಗೆ ನೀನು ಹೀಗೆ ಹೇಳು: ‘ನಿಮ್ಮ ಎಲ್ಲಾ ಸಂತತಿಯ ವಂಶಾವಳಿಗಳಲ್ಲಿ ಅಶುದ್ಧತ್ವವಿರುವ ಇಸ್ರಾಯೇಲರು ಯೆಹೋವ ದೇವರಿಗೆ ಸಲ್ಲಿಸುವ ಪರಿಶುದ್ಧವಾದವುಗಳ ಬಳಿಗೆ ಯಾವನು ಬರುವನೋ, ಅವನನ್ನು ನನ್ನ ಸನ್ನಿಧಿಯಿಂದ ತೆಗೆದುಹಾಕಬೇಕು. ನಾನೇ ಯೆಹೋವ ದೇವರು. ಅಧ್ಯಾಯವನ್ನು ನೋಡಿ |