ಯಾಜಕಕಾಂಡ 22:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯಾಜಕರು ಈ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯಬೇಕು. ಇವುಗಳನ್ನು ಮೀರಿ ನನ್ನ ನೈವೇದ್ಯವನ್ನು ಅಪವಿತ್ರಪಡಿಸಿದರೆ ಆ ದೋಷದ ಫಲವನ್ನು ಅನುಭವಿಸಿ ಸತ್ತಾರು. ಅವರನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ಈ ನನ್ನ ಆಜ್ಞೆಗಳನ್ನು ಅವರು ಅನುಸರಿಸಿ ನಡೆಯಬೇಕು. ಇವುಗಳನ್ನು ಮೀರಿ ನನ್ನ ನೈವೇದ್ಯವನ್ನು ಅಪವಿತ್ರಪಡಿಸಿದರೆ ಆ ದೋಷದ ಫಲವನ್ನು ಅನುಭವಿಸಿ ಸಾಯುವರು. ಅವರನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಸರ್ವೇಶ್ವರ ನಾನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಈ ನನ್ನ ಆಜ್ಞೆಗಳನ್ನು ಅವರು ಅನುಸರಿಸಿ ನಡೆಯಬೇಕು. ಇವುಗಳನ್ನು ಮೀರಿ ನನ್ನ ನೈವೇದ್ಯವನ್ನು ಅಪವಿತ್ರಪಡಿಸಿದರೆ ಆ ದೋಷದ ಫಲವನ್ನು ಅನುಭವಿಸಿ ಸತ್ತಾರು. ಅವರನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 “ಯಾಜಕರು ನನ್ನ ಅಗತ್ಯತೆಗಳನ್ನು ಎಚ್ಚರಿಕೆಯಿಂದ ಪೂರೈಸಿದರೆ ಅಪರಾಧಕ್ಕೆ ಒಳಗಾಗುವುದಿಲ್ಲ. ಅವರು ಪವಿತ್ರವಾದವುಗಳನ್ನು ಅಪವಿತ್ರಗೊಳಿಸಿದರೆ ಸಾಯುವರು. ಯೆಹೋವನಾದ ನಾನೇ ಅವರನ್ನು ಪರಿಶುದ್ಧರನ್ನಾಗಿ ಮಾಡಿದ್ದೇನೆ ಮತ್ತು ಈ ವಿಶೇಷ ಸೇವೆಗಾಗಿ ಪ್ರತ್ಯೇಕಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ ‘ಯಾಜಕರು ಅದನ್ನು ಅಪವಿತ್ರ ಪಡಿಸಿದರೆ, ಅದರ ನಿಮಿತ್ತ ಅಪರಾಧಿಯಾಗಿ ಸಾಯದಂತೆ ನನ್ನ ವಿಧಿಗಳನ್ನು ಕೈಗೊಳ್ಳಬೇಕು. ಅವರನ್ನು ಶುದ್ಧೀಕರಿಸುವ ಯೆಹೋವ ದೇವರು ನಾನೇ. ಅಧ್ಯಾಯವನ್ನು ನೋಡಿ |