Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನಾನು ನಿಮಗೆ ಕೊಡುವ ದೇಶದಲ್ಲಿ ನೀವು ಸೇರಿದ ನಂತರ ಅಲ್ಲಿನ ಜವೆಗೋದಿಯ ಪೈರನ್ನು ಕೊಯ್ಯುವಾಗ, ಪ್ರಥಮಫಲದ ಸಿವುಡನ್ನು ಯಾಜಕನ ಬಳಿಗೆ ತಂದು ಒಪ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ನಾನು ನಿಮಗೆ ಕೊಡುವ ನಾಡನ್ನು ನೀವು ಸೇರಿದ ನಂತರ ಅಲ್ಲಿನ (ಜವೆಗೋದಿ) ಪೈರನ್ನು ಕೊಯ್ಯುವಾಗ ಪ್ರಥಮ ಫಲದ ಸಿವುಡನ್ನು ಯಾಜಕನ ಬಳಿಗೆ ತಂದೊಪ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸಬೇಕು - ನಾನು ನಿಮಗೆ ಕೊಡುವ ದೇಶದಲ್ಲಿ ನೀವು ಸೇರಿದ ನಂತರ ಅಲ್ಲಿನ [ಜವೆಗೋದಿಯ] ಪೈರನ್ನು ಕೊಯ್ಯುವಾಗ ಪ್ರಥಮಫಲದ ಸಿವುಡನ್ನು ಯಾಜಕನ ಬಳಿಗೆ ತಂದು ಒಪ್ಪಿಸಬೇಕು. ನೀವು ಅಂಗೀಕಾರವಾಗುವಂತೆ ಅವನು ಅದನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಇಸ್ರೇಲರಿಗೆ ಹೀಗೆ ಹೇಳು: ನಾನು ನಿಮಗೆ ಕೊಡುವ ದೇಶದಲ್ಲಿ ನೀವು ನೆಲೆಸಿದ ನಂತರ ಅಲ್ಲಿ ಬೆಳೆಯನ್ನು ಕೊಯ್ಯುವಿರಿ. ಆ ಸಮಯದಲ್ಲಿ ನಿಮ್ಮ ಬೆಳೆಯ ಪ್ರಥಮ ಸಿವುಡನ್ನು ಯಾಜಕನ ಬಳಿಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಇಸ್ರಾಯೇಲರೊಂದಿಗೆ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ: ‘ನಾನು ನಿಮಗೆ ಕೊಡುವ ದೇಶದೊಳಕ್ಕೆ ನೀವು ಬಂದಾಗ ಮತ್ತು ಅಲ್ಲಿಯ ಸುಗ್ಗಿಯನ್ನು ಕೊಯ್ದರೆ, ನಿಮ್ಮ ಸುಗ್ಗಿಯ ಪ್ರಥಮ ಫಲಗಳ ಸಿವುಡನ್ನು ಯಾಜಕನ ಬಳಿಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:10
22 ತಿಳಿವುಗಳ ಹೋಲಿಕೆ  

ಭೂಮಿಯ ಪ್ರಥಮ ಫಲಗಳಲ್ಲಿ ಶ್ರೇಷ್ಠವಾದುದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.”


ನಿಮ್ಮ ಬೆಳೆಯ ಪ್ರಥಮಫಲದಲ್ಲಿ ಅತಿ ಶ್ರೇಷ್ಠವಾದದ್ದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಹೋತ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.


ಇವರು ಕನ್ಯೆಯರಂತೆ ಕಳಂಕರಹಿತರು, ಸ್ತ್ರೀ ಸಹವಾಸದಿಂದ ಮಲಿನರಾಗದವರು. ಯಜ್ಞದ ಕುರಿಮರಿಯಾದಾತನು ಎಲ್ಲಿ ಹೋದರೂ ಇವರು ಆತನನ್ನು ಹಿಂಬಾಲಿಸುವರು. ಇವರು ಮನುಷ್ಯರೊಳಗಿಂದ ಸ್ವಕೀಯ ಜನರಾಗಿ ಕೊಂಡುಕೊಳ್ಳಲ್ಪಟ್ಟು ದೇವರಿಗೂ ಯಜ್ಞದ ಕುರಿಯಾದಾತನಿಗೂ ಪ್ರಥಮಫಲದಂತಾದರು.


ದೇವರು ತನ್ನ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ಜೀವಕೊಟ್ಟಿವುದರಿಂದ ನಾವು ಆತನ ಸರ್ವ ಸೃಷ್ಟಿಯಲ್ಲಿ ಪ್ರಥಮ ಫಲವಾದೆವು.


ಬೆಳೆ ಕೊಯ್ಯುವುದಕ್ಕೆ ಕುಡುಗೋಲು ಹಾಕುವ ಕಾಲ ಮೊದಲುಗೊಂಡು ಏಳು ವಾರಗಳನ್ನು ಎಣಿಸಿ,


“‘ಪಸ್ಕವಾದ ಏಳು ವಾರಗಳ ಮೇಲೆ ನೀವು ಹೊಸ ಬೆಳೆಯ ಗೋದಿಯನ್ನು ಯೆಹೋವನಿಗೆ ನೈವೇದ್ಯಮಾಡುವಾಗ ಪ್ರಥಮಫಲಾರ್ಪಣೆಯ ದಿನದಲ್ಲಿ ನೀವು ಯಾವ ಉದ್ಯೋಗವನ್ನು ನಡೆಸದೆ ದೇವಾರಾಧನೆಗಾಗಿ ಸಭೆಕೂಡಬೇಕು.


“ಎಲ್ಲಾ ಪ್ರಥಮಫಲಗಳಲ್ಲಿ ಉತ್ಕೃಷ್ಟವಾದದ್ದನ್ನು ನೀವು ನನಗೆ ಪ್ರತ್ಯೇಕಿಸಿ ಸಮರ್ಪಿಸುವ ಎಲ್ಲಾ ಪದಾರ್ಥಗಳೂ ಅವರಿಗಾಗಬೇಕು. ನಿಮ್ಮ ಮನೆಯು ಆಶೀರ್ವಾದಕ್ಕೆ ನೆಲೆಯಾಗುವಂತೆ ನೀವು ಮೊದಲನೆಯ ಹಿಟ್ಟನ್ನು ಯಾಜಕರಿಗೆ ಕೊಡತಕ್ಕದ್ದು.


“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನಾನು ನಿಮ್ಮ ವಾಸಕ್ಕಾಗಿ ಕೊಡುವ ದೇಶಕ್ಕೆ ನೀವು ಸೇರಿದ ನಂತರ,


ನಿಮ್ಮ ನಿವಾಸಗಳಿಂದ ತಂದ ಹಿಟ್ಟಿನಲ್ಲಿ ಆರು ಸೇರು ಹಿಟ್ಟಿನಿಂದ ಎರಡು ನೈವೇದ್ಯದ ರೊಟ್ಟಿಗಳನ್ನು ಮಾಡಬೇಕು. ಇವುಗಳನ್ನು ಹುಳಿಹಾಕಿದ ಗೋದಿಯ ಹಿಟ್ಟಿನಿಂದ ಮಾಡಿ ಪ್ರಥಮಫಲವಾಗಿ ಯೆಹೋವನಿಗೆ ಸಮರ್ಪಿಸಬೇಕು.


“ಗೋದಿ ಬೆಳೆಯ ಪ್ರಥಮ ಫಲದ ಸಮರ್ಪಣೆಯನ್ನು ಪಸ್ಕಹಬ್ಬವಾಗಿ ಏಳು ವಾರಗಳ ನಂತರ ಸುಗ್ಗಿ ಹಬ್ಬವನ್ನು ಆಚರಿಸುವಾಗ ಸಮರ್ಪಿಸಬೇಕು. ವರ್ಷದ ಅಂತ್ಯದಲ್ಲಿ ಫಲಸಂಗ್ರಹದ ಹಬ್ಬವನ್ನೂ ಆಚರಿಸಬೇಕು.


ಅದಲ್ಲದೆ ನೀವು ಬಿತ್ತಿದ ಹೊಲದಲ್ಲಿ ಪ್ರಥಮಫಲವು ದೊರೆತಾಗ ಸುಗ್ಗಿಯ ಹಬ್ಬವನ್ನು ಆಚರಿಸಬೇಕು. ಹೊಲ ತೋಟಗಳ ಬೆಳೆಯನ್ನೂ ಕೂಡಿಸುವಾಗ ಅಂದರೆ ವರ್ಷದ ಕೊನೆಯಲ್ಲಿ ಸುಗ್ಗಿ ಹಬ್ಬವನ್ನು ಆಚರಿಸಬೇಕು.


ನಿಮ್ಮ ಕಣದಿಂದ ಹಾಗೂ ದ್ರಾಕ್ಷಾಲತೆಯಿಂದ ನನಗೆ ಸಲ್ಲಿಸತಕ್ಕದ್ದನ್ನು ಸಮರ್ಪಿಸುವುದಕ್ಕೆ ತಡಮಾಡಬಾರದು. ನಿಮ್ಮ ಚೊಚ್ಚಲು ಗಂಡು ಮಕ್ಕಳನ್ನು ನನಗೆ ಸಮರ್ಪಿಸಬೇಕು.


ಕಣಕದಲ್ಲಿ ಪ್ರಥಮಫಲವನ್ನು ದೇವರಿಗರ್ಪಿಸಿದ ಮೇಲೆ ಕಣಕವೆಲ್ಲಾ ಪವಿತ್ರವಾಯಿತು. ಬೇರು ಶುದ್ಧವಾಗಿದ್ದ ಮೇಲೆ ಕೊಂಬೆಗಳೂ ಹಾಗೆಯೇ.


ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು, ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಸುಗ್ಗೀ ಕಾಲದಲ್ಲೆಲ್ಲಾ ದಡಮೀರಿ ಹರಿಯುತ್ತಿದ್ದ ಯೊರ್ದನ್ ನದಿಯ ನೀರು ನಿಂತುಹೋಯಿತು.


“ನಾನು ನಿಮಗೆ ಸ್ವದೇಶವಾಗಿ ಕೊಡುವ ಕಾನಾನ್ ದೇಶಕ್ಕೆ ನೀವು ಬಂದ ನಂತರ ಆ ದೇಶದ ಯಾವ ಮನೆಯ ಗೋಡೆಗಳಲ್ಲಿ ನಾನು ಕುಷ್ಠದ ಗುರುತನ್ನು ಉಂಟುಮಾಡುವೆನೋ,


ಯೆಹೋವನು ಮೋಶೆಯೊಂದಿಗೆ ಮಾತನಾಡಿ,


ನೀವು ದೇವರಿಗೆ ಅಂಗೀಕಾರವಾಗುವಂತೆ ಯಾಜಕನು ಅದನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಿ ಸಮರ್ಪಿಸುವನು. ಸಬ್ಬತ್ ದಿನದ ಮರು ದಿನದಲ್ಲಿಯೇ ಅದನ್ನು ನಿವಾಳಿಸಬೇಕು.


ಹೀಗೆ, ನವೊಮಿಯು ಮೋವಾಬ್ಯಳಾದ ತನ್ನ ಸೊಸೆ ರೂತಳೊಡನೆ ಬೇತ್ಲೆಹೇಮಿಗೆ ಬಂದಳು. ಆಗ ಜವೆಗೋದಿಯ ಸುಗ್ಗಿಯು ಪ್ರಾರಂಭವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು