ಯಾಜಕಕಾಂಡ 23:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅದರೊಂದಿಗೆ ಮಾಡಬೇಕಾದ ಧಾನ್ಯನೈವೇದ್ಯವು ಯಾವುದೆಂದರೆ ಎಣ್ಣೆ ಬೆರೆತ ಆರು ಸೇರು ಗೋದಿಯ ಹಿಟ್ಟು. ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ ಇದನ್ನು ಬೆಂಕಿಯಲ್ಲಿ ಹೋಮಮಾಡಬೇಕು. ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯವು ಒಂದುವರೆ ಸೇರು ದ್ರಾಕ್ಷಾರಸ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅದರ ಸಮೇತ ಎಣ್ಣೆಬೆರೆತ ಎರಡು ಕಿಲೋಗ್ರಾಂ ಹಿಟ್ಟನ್ನು ಧಾನ್ಯನೈವೇದ್ಯವಾಗಿ ಅರ್ಪಿಸಬೇಕು. ಸರ್ವೇಶ್ವರನಿಗೆ ಪ್ರಿಯವಾದ ಸುವಾಸನೆಯುಂಟುಮಾಡುವುದಕ್ಕೆ ಅದನ್ನು ಬೆಂಕಿಯಲ್ಲಿ ಹೋಮಮಾಡಬೇಕು. ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯ ಒಂದು ಲೀಟರ್ ದ್ರಾಕ್ಷಾರಸ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅದರೊಂದಿಗೆ ಮಾಡಬೇಕಾದ ಧಾನ್ಯನೈವೇದ್ಯವು ಯಾವದಂದರೆ ಎಣ್ಣೆ ಬೆರೆತ ಆರು ಸೇರು ಗೋದಿಯ ಹಿಟ್ಟೇ. ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದಕ್ಕೆ ಇದನ್ನು ಬೆಂಕಿಯಲ್ಲಿ ಹೋಮಮಾಡಬೇಕು. ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯವು ಒಂದುವರೆ ಸೇರು ದ್ರಾಕ್ಷಾರಸ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನೀವು ಎಣ್ಣೆ ಬೆರೆಸಿದ ಹದಿನಾರು ಬಟ್ಟಲು ಶ್ರೇಷ್ಠ ಗೋಧಿಹಿಟ್ಟನ್ನು ಧಾನ್ಯಸಮರ್ಪಣೆಗಾಗಿ ಅರ್ಪಿಸಬೇಕು. ನೀವು ಕಾಲುಭಾಗ ದ್ರಾಕ್ಷಾರಸವನ್ನು ಅರ್ಪಿಸಬೇಕು. ಆ ಯಜ್ಞದ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯಾಗಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಇದರೊಂದಿಗೆ, ಧಾನ್ಯ ಸಮರ್ಪಣೆಯಲ್ಲಿ ಬೆರೆಸಿದ ಎಣ್ಣೆ ಮತ್ತು ಮೂರು ಕಿಲೋಗ್ರಾಂ ನಯವಾದ ಹಿಟ್ಟನ್ನು ಆಹ್ಲಾದಕರವಾದ ಪರಿಮಳದ ರೂಪದಲ್ಲಿ ಯೆಹೋವ ದೇವರಿಗೆ ಅರ್ಪಿಸಬೇಕು. ಇದಲ್ಲದೆ ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯವು ಸುಮಾರು ಒಂದು ಲೀಟರ್ ದ್ರಾಕ್ಷಾರಸ ಆಗಿರಬೇಕು. ಅಧ್ಯಾಯವನ್ನು ನೋಡಿ |