Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅದಲ್ಲದೆ ದೋಷಪರಿಹಾರಕ ಯಜ್ಞವಾಗಿ ಒಂದು ಹೋತವನ್ನು ಮತ್ತು ಸಮಾಧಾನ ಯಜ್ಞಕ್ಕಾಗಿ ಒಂದು ವರ್ಷದ ಎರಡು ಟಗರುಗಳನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅದಲ್ಲದೆ, ದೋಷಪರಿಹಾರಕ ಬಲಿಯಾಗಿ ಒಂದು ಹೋತವನ್ನೂ, ಶಾಂತಿಸಮಾಧನದ ಬಲಿಯಾಗಿ ಒಂದು ವರ್ಷದ ಎರಡು ಟಗರುಗಳನ್ನೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅದಲ್ಲದೆ ದೋಷಪರಿಹಾರಕ ಯಜ್ಞವಾಗಿ ಒಂದು ಹೋತವನ್ನೂ ಸಮಾಧಾನಯಜ್ಞಕ್ಕಾಗಿ ಒಂದು ವರುಷದ ಎರಡು ಟಗರುಗಳನ್ನೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನೀವು ಪಾಪಪರಿಹಾರಕ ಸಮರ್ಪಣೆಯಾಗಿ ಒಂದು ಹೋತವನ್ನೂ ಸಮಾಧಾನಯಜ್ಞವಾಗಿ ಒಂದು ವರ್ಷದ ಎರಡು ಟಗರುಗಳನ್ನೂ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ತರುವಾಯ ಹೋತವನ್ನು ಪಾಪ ಪರಿಹಾರದ ಬಲಿಯಾಗಿಯೂ ಮತ್ತು ಸಮಾಧಾನ ಬಲಿಯಾಗಿ ಒಂದು ವರ್ಷದ ಎರಡು ಕುರಿಮರಿಗಳನ್ನು ಬಲಿಯಾಗಿ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:19
10 ತಿಳಿವುಗಳ ಹೋಲಿಕೆ  

ದೋಷಪರಿಹಾರ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.


ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿಮಿತ್ತ ದುರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ, ಅದನ್ನು ದೇವರೇ ಮಾಡಿದನು. ಹೇಗೆಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ಶರೀರ ರೂಪದಲ್ಲಿ ಕಳುಹಿಸಿಕೊಟ್ಟು ಶರೀರದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.


ಯಾವಾಗಲಾದರೂ ಸಮೂಹದವರು ತಿಳಿಯದೆ ಮೀರಿ ದ್ರೋಹಿಗಳಾದರೆ, ಸರ್ವಸಮೂಹದವರೆಲ್ಲರು ಒಟ್ಟಾಗಿ ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವುದಕ್ಕಾಗಿ ಸರ್ವಾಂಗಹೋಮವಾಗಿ ಒಂದು ಹೋರಿಯನ್ನೂ, ನೈವೇದ್ಯಕ್ಕಾಗಿ ಅದಕ್ಕೆ ನೇಮಿತವಾದ ಧಾನ್ಯದ್ರವ್ಯಗಳನ್ನೂ ಮತ್ತು ಪಾನದ್ರವ್ಯಗಳನ್ನೂ, ದೋಷಪರಿಹಾರ ಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು.


“ತರುವಾಯ ಅವನು ಜನರಿಗಾಗಿ ಮಾಡಿದ ದೋಷಪರಿಹಾರಕ ಯಜ್ಞದ ಹೋತವನ್ನು ವಧಿಸಿ, ಅದರ ರಕ್ತವನ್ನು ತೆರೆಯೊಳಗೆ ತಂದು, ಹೋರಿಯ ರಕ್ತದಿಂದ ಮಾಡಿದಂತೆಯೇ ಇದರ ರಕ್ತದಿಂದಲೂ ಮಾಡಿ, ಕೃಪಾಸನದ ಮೇಲೆಯೂ ಮತ್ತು ಅದರ ಎದುರಾಗಿಯೂ ಚಿಮುಕಿಸಬೇಕು.


ಆ ರೊಟ್ಟಿಗಳೊಡನೆ ಒಂದು ವರ್ಷದ ಪೂರ್ಣಾಂಗವಾದ ಏಳು ಕುರಿಗಳನ್ನು, ಒಂದು ಹೋರಿಯನ್ನು ಮತ್ತು ಎರಡು ಟಗರುಗಳನ್ನು ಸಮರ್ಪಿಸಬೇಕು. ಇವು ಧಾನ್ಯದ್ರವ್ಯದೊಡನೆ ಮತ್ತು ಪಾನದ್ರವ್ಯದೊಡನೆ ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗುವವು.


ಯಾಜಕನು ಇವುಗಳನ್ನು, ಪ್ರಥಮಫಲದ ರೊಟ್ಟಿಗಳನ್ನು ಮತ್ತು ಎರಡು ಕುರಿಗಳನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು. ಅವು ಯೆಹೋವನಿಗೆ ಮೀಸಲಾಗಿ ಯಾಜಕನಿಗೆ ಸಲ್ಲಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು