Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಯೆಹೋವನಿಂದ ನೇಮಕವಾದ ಹಬ್ಬಗಳ ದಿನಗಳು ಇವೇ; ಈ ದಿನಗಳಲ್ಲಿ ದೇವಾರಾಧನೆಗಾಗಿ ಜನರು ಸಭೆಸೇರಿಬರಬೇಕೆಂದು ಸಾರಬೇಕು. ನಾನು ನೇಮಿಸಿರುವ ಹಬ್ಬದ ದಿನಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಸರ್ವೇಶ್ವರನಿಂದ ನೇಮಕಾವಾದ ಹಬ್ಬದಿನಗಳಲ್ಲಿ ದೇವಾರಾಧನೆಗಾಗಿ ಜನರು ಸಭೆಸೇರಬೇಕು. ಹಾಗೆ ನೇಮಕವಾದ ಹಬ್ಬದ ದಿನಗಳು ಇವು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸಬೇಕು - ಯೆಹೋವನಿಂದ ನೇಮಕವಾದ ಹಬ್ಬಗಳ ದಿನಗಳು ಇವೇ; ಈ ದಿನಗಳಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕೆಂಬದಾಗಿ ಸಾರಬೇಕು. ನಾನು ನೇವಿುಸಿರುವ ಹಬ್ಬದದಿನಗಳು ಯಾವವಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಇಸ್ರೇಲರಿಗೆ ಹೀಗೆ ಆಜ್ಞಾಪಿಸು: ಯೆಹೋವನಿಂದ ಆರಿಸಲ್ಪಟ್ಟ ಹಬ್ಬದದಿನಗಳಲ್ಲಿ ಪವಿತ್ರಸಭೆ ಕೂಡಬೇಕೆಂಬುದಾಗಿ ಪ್ರಕಟಿಸಬೇಕು. ಇವು ನನ್ನ ವಿಶೇಷ ಹಬ್ಬದ ದಿನಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಇಸ್ರಾಯೇಲರೊಂದಿಗೆ ನೀನು ಮಾತನಾಡಿ ಅವರಿಗೆ ಹೀಗೆ ಹೇಳು, ‘ನೀವು ಪರಿಶುದ್ಧ ಸಭೆಗಳಾಗಿ ಸೇರಿ ಯೆಹೋವ ದೇವರಾಗಿರುವ ನನಗೋಸ್ಕರ ನೇಮಕವಾದ ಈ ಹಬ್ಬಗಳನ್ನು ಪ್ರಕಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:2
28 ತಿಳಿವುಗಳ ಹೋಲಿಕೆ  

“‘ಯೆಹೋವನು ನೇಮಿಸಿರುವ ಸಬ್ಬತ್ ದಿನಗಳ ಹೊರತಾಗಿ ಮೇಲೆ ಹೇಳಿದ ದಿನಗಳೇ ಯೆಹೋವನ ಹಬ್ಬದ ದಿನಗಳು. ಆ ದಿನಗಳಲ್ಲಿ ದೇವಾರಾಧನೆಗಾಗಿ ಸಭೆಸೇರುವಂತೆ ನೀವು ಪ್ರಕಟಿಸಬೇಕು. ಆಯಾ ದಿನಕ್ಕೆ ನೇಮಿಸಿರುವ ಪ್ರಕಾರ ಸರ್ವಾಂಗಹೋಮ, ಧಾನ್ಯನೈವೇದ್ಯ, ಸಮಾಧಾನಯಜ್ಞ, ಪಾನದ್ರವ್ಯ ಇವುಗಳನ್ನು ತಂದು ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು.


“‘ಯೆಹೋವನಿಂದ ನೇಮಕವಾದ ಹಬ್ಬದ ಕಾಲಗಳು ಇವೇ; ಈ ಕಾಲಗಳಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ನೇಮಕವಾದ ದಿನಗಳಲ್ಲಿ ಇವುಗಳನ್ನು ಪ್ರಕಟಪಡಿಸಬೇಕು.


ಚೀಯೋನ್ ಪರ್ವತದ ಮೇಲೆ ನಿಂತು ಕೊಂಬೂದಿರಿ, ಉಪವಾಸ ದಿನವನ್ನು ಗೊತ್ತುಮಾಡಿರಿ, ಪವಿತ್ರ ಸಭೆಯನ್ನು ಕರೆಯಿರಿ.


ನಾನು ಅವಳ ಉಲ್ಲಾಸ, ಹಬ್ಬ, ಹುಣ್ಣಿಮೆ, ಅಮಾವಾಸ್ಯೆ, ಸಬ್ಬತ್ತು, ಮಹೋತ್ಸವ, ಇವುಗಳನ್ನೆಲ್ಲಾ ನಿಲ್ಲಿಸಿಬಿಡುವೆನು.


ಅಮಾವಾಸ್ಯೆಯಲ್ಲಿಯೂ, ನಮ್ಮ ಉತ್ಸವದಿನವಾಗಿರುವ ಹುಣ್ಣಿಮೆಯಲ್ಲಿಯೂ ಕೊಂಬನ್ನು ಊದಿರಿ.


“‘ನೀವು ಯೆಹೋವನಿಗೆ ಕಾಣಿಕೆಯಾಗಿ ಹರಕೆಯನ್ನು ತೀರಿಸುವುದಕ್ಕಾಗಲಿ ಮಾಡುವ ಸರ್ವಾಂಗಹೋಮ, ಧಾನ್ಯದ್ರವ್ಯ ನೈವೇದ್ಯ, ಪಾನದ್ರವ್ಯ, ಸಮಾಧಾನಯಜ್ಞ ಇವುಗಳನ್ನಲ್ಲದೆ ಹಬ್ಬಗಳ ದಿನಗಳಲ್ಲಿ ಮೇಲೆ ಸೂಚಿಸಿರುವ ಯಜ್ಞಗಳನ್ನೂ ಹೆಚ್ಚಾಗಿ ಮಾಡಬೇಕು.’”


ಇದಲ್ಲದೆ ನೀವು ಉತ್ಸವ ಕಾಲಗಳಲ್ಲಿಯು, ಹಬ್ಬಗಳಲ್ಲಿಯು, ಅಮಾವಾಸ್ಯೆಗಳಲ್ಲಿಯು ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಸಮರ್ಪಿಸುವಾಗ ಆ ತುತ್ತೂರಿಗಳನ್ನು ಊದಿಸಬೇಕು. ಆ ತುತ್ತೂರಿಯ ಧ್ವನಿಯು ನಿಮ್ಮನ್ನು ನಿಮ್ಮ ದೇವರ ಜ್ಞಾಪಕಕ್ಕೆ ತರುವುದು, ನಾನೇ ನಿಮ್ಮ ದೇವರಾದ ಯೆಹೋವನು.”


ಇದಾದ ಮೇಲೆ ಯೆಹೂದ್ಯರ ಒಂದು ಜಾತ್ರೆ ಇದ್ದುದರಿಂದ ಯೇಸು ಯೆರೂಸಲೇಮಿಗೆ ಹೋದನು.


ನೋಡಿರಿ ಆ ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪರ್ವತಗಳ ಮೇಲೆ ಸಾರುವ ದೂತನ ಪಾದಗಳು ಮೇಲೆ ತ್ವರೆಪಡುತ್ತವೆ! ಯೆಹೂದವೇ, ನಿನ್ನ ಹಬ್ಬಗಳನ್ನು ಆಚರಿಸಿಕೋ, ನಿನ್ನ ಹರಕೆಗಳನ್ನು ಸಲ್ಲಿಸು; ಆ ದುಷ್ಟರು ಇನ್ನು ಮುಂದೆ ನಿನ್ನನ್ನು ಮುತ್ತಿಗೆ ಹಾಕಿ ಸೋಲಿಸಲು ಸಾಧ್ಯವಿಲ್ಲ, ಏಕೆಂದರೆ ಅವನು ಸಂಪೂರ್ಣ ನಾಶವಾಗಿದ್ದಾನೆ.


ಉಪವಾಸ ಪ್ರಾರ್ಥನೆಯ ದಿನವನ್ನು ಏರ್ಪಡಿಸಿರಿ, ಪವಿತ್ರ ಸಭೆಯನ್ನು ಸೇರಿಸಿರಿ. ಹಿರಿಯರನ್ನೂ ಮತ್ತು ಸಮಸ್ತ ದೇಶದ ನಿವಾಸಿಗಳನ್ನೂ ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಬರಮಾಡಿ, ಯೆಹೋವನಿಗೆ ಮೊರೆಯಿಡಿರಿ.


ಯಾರೂ ಮಹೋತ್ಸವಗಳಿಗೆ ಬಾರದೆ ಇರುವುದರಿಂದ ಚೀಯೋನಿಗೆ ಹೋಗುವ ದಾರಿಗಳು ಬಿಕೋ ಎನ್ನುತ್ತಿವೆ; ಅದರ ಬಾಗಿಲುಗಳೆಲ್ಲಾ ಹಾಳು ಬಿದ್ದಿವೆ, ಅಲ್ಲಿನ ಯಾಜಕರು ನರಳಾಡುತ್ತಾರೆ; ಅಲ್ಲಿನ ಕನ್ಯೆಯರು ವ್ಯಥೆಪಡುತ್ತಾರೆ, ನಗರಿಗೆ ನಗರಿಯೇ ಶೋಕದಿಂದ ತುಂಬಿದೆ.


ನಮ್ಮ ಉತ್ಸವಗಳು ನಡೆಯುವ ಚೀಯೋನ್ ಪಟ್ಟಣವನ್ನು ದೃಷ್ಟಿಸಿರಿ, ಯೆರೂಸಲೇಮ್ ನೆಮ್ಮದಿಯ ನಿವಾಸವಾಗಿಯೂ, ಗೂಟಕೀಳದ, ಹಗ್ಗಹರಿಯದ ಒಂದೇ ಕಡೆ ಇರುವ ಗುಡಾರವಾಗಿಯೂ ಇರುವುದನ್ನು ನೀವು ಕಣ್ಣಾರೆ ಕಾಣುವಿರಿ.


ಅವರು, “ಸರ್ವಜನರು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿಗೆ ಬರಬೇಕು” ಎಂಬುದಾಗಿ ಬೇರ್ಷೆಬದಿಂದ ದಾನ್ ವರೆಗೂ ವಾಸಮಾಡುತ್ತಿದ್ದ ಇಸ್ರಾಯೇಲರೊಳಗೆ ಡಂಗುರ ಹೊಡಿಸಬೇಕೆಂದು ನಿರ್ಣಯಿಸಿದರು. ಜನರಲ್ಲಿ ಹೆಚ್ಚು ಮಂದಿ ಆ ವರೆಗೂ ಧರ್ಮಶಾಸ್ತ್ರವಿಧಿಯ ಪ್ರಕಾರ ಪಸ್ಕಹಬ್ಬವನ್ನು ಆಚರಿಸಿರಲಿಲ್ಲ.


ಇದಲ್ಲದೆ, ಯೇಹುವು ದೂತರ ಮುಖಾಂತರವಾಗಿ, “ಬಾಳ್ ದೇವತೆಯನ್ನು ಆರಾಧಿಸುವ ಎಲ್ಲಾ ಭಕ್ತರೂ ತಮ್ಮನ್ನು ಶುದ್ಧಿಮಾಡಿಕೊಂಡು ಉತ್ಸವಕ್ಕೆ ಬರಬೇಕು” ಎಂದು ಹೇಳಿದನು.


ಯೆಹೋವನಿಂದ ನೇಮಕವಾದ ಹಬ್ಬಗಳ ದಿನಗಳ ವಿಷಯವಾಗಿ ಮೋಶೆಯು ಅದೇ ಮೇರೆಗೆ ಇಸ್ರಾಯೇಲರಿಗೆ ತಿಳಿಸಿದನು.


ಆ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕೆಂಬುದಾಗಿ ಪ್ರಕಟಪಡಿಸಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು. ಇದು ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ನಿವಾಸಗಳಲ್ಲಿ ಶಾಶ್ವತನಿಯಮ.


ಆರೋನನು ಅದನ್ನು ನೋಡಿದಾಗ ಹೋರಿಕರುವಿಗೆ ಎದುರಾಗಿ ಒಂದು ಯಜ್ಞವೇದಿಯನ್ನು ಕಟ್ಟಿಸಿ, “ನಾಳೆ ಯೆಹೋವನಿಗೆ ಹಬ್ಬವಾಗಬೇಕು” ಎಂದು ಪ್ರಕಟಿಸಿದನು.


ನಿಮಗಾಗಿಯೂ, ಲವೊದಿಕೀಯದವರಿಗಾಗಿಯೂ ಹಾಗೂ ನನ್ನನ್ನು ಮುಖಾಮುಖಿಯಾಗಿ ನೋಡದಿರುವವರೆಲ್ಲರಿಗಾಗಿಯೂ,


ಹೀಗಿರುವುದರಿಂದ, ಅನ್ನಪಾನಗಳ ವಿಷಯದಲ್ಲಿಯೂ ಅಥವಾ ಹಬ್ಬ ಅಮಾವಾಸ್ಯೆ ಹಾಗೂ ಸಬ್ಬತ್ತು ಎಂಬಿವುಗಳ ವಿಷಯದಲ್ಲಿಯೂ ನಿಮ್ಮನ್ನು ದೋಷಿಗಳೆಂದು ಯಾರೂ ನಿರ್ಣಯಿಸದಿರಲಿ.


ಯೆಹೋವನು ಮೋಶೆಯೊಂದಿಗೆ ಮಾತನಾಡಿ,


ಸಬ್ಬತ್ ದಿನ, ಅಮಾವಾಸ್ಯೆ, ಜಾತ್ರೆ ಇವುಗಳಲ್ಲಿ ಯೆಹೋವನ ಮುಂದೆ ತಪ್ಪದೆ ನಡೆಯುವ ಸರ್ವಾಂಗಹೋಮ, ಸಮರ್ಪಣೆಯ ಹೊತ್ತಿನಲ್ಲಿ ಯೆಹೋವನಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸುವುದೂ ಇವೇ.


ವ್ಯಾಜ್ಯವಾಡುವಾಗ ಅವರ ನ್ಯಾಯಕ್ಕಾಗಿ ನಿಂತು, ನನ್ನ ನ್ಯಾಯವಿಧಿಗಳಿಗೆ ಅನುಸಾರವಾಗಿ ತೀರಿಸಬೇಕು. ನಾನು ಏರ್ಪಡಿಸಿದ ಹಬ್ಬಗಳಲ್ಲಿ ನನ್ನ ನಿಯಮನಿಷ್ಠೆಗಳನ್ನು ಕೈಕೊಂಡು ನನ್ನ ಸಬ್ಬತ್ತುಗಳನ್ನು ಪರಿಶುದ್ಧ ದಿನವೆಂದು ಆಚರಿಸಬೇಕು.


ಇದಲ್ಲದೆ, ಸೊಲೊಮೋನನು ದೂತರ ಮುಖಾಂತರವಾಗಿ ತೂರಿನ ಅರಸನಾದ ಹೀರಾಮನಿಗೆ, “ನನ್ನ ತಂದೆಯಾದ ದಾವೀದನಿಗೆ ವಾಸಮಾಡುವುದಕ್ಕಾಗಿ ಅರಮನೆಯನ್ನು ಕಟ್ಟಿಸಲು ದೇವದಾರು ಮರಗಳನ್ನು ಕಳುಹಿಸಿ, ಅವನಿಗೋಸ್ಕರ ಹೇಗೆ ಸಹಾಯ ಮಾಡಿದೆಯೋ ಹಾಗೆಯೇ ನನಗೂ ಮಾಡು.


ಅಂದಿನಿಂದ ನಿತ್ಯ ಸರ್ವಾಂಗಹೋಮ, ಅಮಾವಾಸ್ಯೆ, ಯೆಹೋವನ ಎಲ್ಲಾ ಉತ್ಸವದಿನ ಇವುಗಳಲ್ಲಿ ನೇಮಕವಾದ ಸರ್ವಾಂಗಹೋಮಗಳೂ, ಜನರು ಸ್ವ ಇಚ್ಛೆಯಿಂದ ತಂದುಕೊಟ್ಟ ಯಜ್ಞಗಳೂ ಯೆಹೋವನಿಗೆ ಸಮರ್ಪಣೆಯಾಗುತ್ತಾ ಬಂದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು