Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆ ಸಬ್ಬತ್ ದಿನವು ಸಂಪೂರ್ಣವಿರಾಮವುಳ್ಳ ದಿನವಾಗಿರಬೇಕು. ಆ ದಿನದಲ್ಲಿ ಉಪವಾಸದಿಂದಿರಬೇಕು. ಆ ತಿಂಗಳಿನ ಒಂಭತ್ತನೆಯ ದಿನದ ಸಾಯಂಕಾಲದಲ್ಲಿ ಪ್ರಾರಂಭಿಸಿ ಮರುದಿನದ ಸಾಯಂಕಾಲದ ವರೆಗೆ ನೀವು ಆ ವಿರಾಮದಿನವನ್ನು ಆಚರಿಸಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಆ ದಿನವು ಸಂಪೂರ್ಣ ವಿರಾಮವುಳ್ಳ ವಿಶ್ರಾಂತಿದಿನವಾಗಿರಬೇಕು. ಅಂದು ಉಪವಾಸದಿಂದಿರಬೇಕು. ಆ ತಿಂಗಳಿನ ಒಂಬತ್ತನೆಯ ದಿನದ ಸಂಜೆ ಪ್ರಾರಂಭಿಸಿ ಮರುದಿನದ ಸಂಜೆಯವರೆಗೆ ನೀವು ಆ ವಿರಾಮ ದಿನವನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಆ ದಿನವು ಸಂಪೂರ್ಣ ವಿರಾಮವುಳ್ಳ ವಿಶ್ರಾಂತಿ ದಿನವಾಗಿರಬೇಕು. ಅದರಲ್ಲಿ ಉಪವಾಸದಿಂದಿರಬೇಕು. ಆ ತಿಂಗಳಿನ ಒಂಭತ್ತನೆಯ ದಿನದ ಸಾಯಂಕಾಲದಲ್ಲಿ ಪ್ರಾರಂಭಿಸಿ ಮರುದಿನದ ಸಾಯಂಕಾಲದವರೆಗೆ ನೀವು ಆ ವಿರಾಮದಿನವನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಅದು ನಿಮಗಾಗಿ ವಿಶ್ರಾಂತಿಯ ವಿಶೇಷ ದಿನವಾಗಿರುವುದು. ನೀವು ಆಹಾರವನ್ನು ತಿನ್ನಬಾರದು. ತಿಂಗಳಿನ ಒಂಭತ್ತನೆಯ ದಿನದ ನಂತರ ಸಾಯಂಕಾಲದಲ್ಲಿ ಈ ವಿಶ್ರಾಂತಿಯ ವಿಶೇಷ ದಿನವನ್ನು ಪ್ರಾರಂಭಿಸುವಿರಿ. ಈ ವಿಶ್ರಾಂತಿಯ ವಿಶೇಷ ದಿನವು ಆ ಸಾಯಂಕಾಲದಿಂದ ಹಿಡಿದು ಮರುದಿನ ಸಾಯಂಕಾಲದವರೆಗೆ ಮುಂದುವರಿಯುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಇದು ನಿಮಗೆ ಸಬ್ಬತ್ ದಿನವಾಗಿರುವುದು. ನೀವು ನಿಮ್ಮನ್ನು ಉಪವಾಸ ಇಡಬೇಕು. ಆ ತಿಂಗಳಿನ ಒಂಬತ್ತನೆಯ ದಿವಸದ ಸಾಯಂಕಾಲದಿಂದ ಹಿಡಿದು ಮರುದಿನದ ಸಂಜೆಯವರೆಗೆ ಸಬ್ಬತ್ ದಿನವನ್ನು ಆಚರಿಸಬೇಕು,” ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:32
19 ತಿಳಿವುಗಳ ಹೋಲಿಕೆ  

ಆದ್ದರಿಂದ ನಾವು ಈ ವಿಶ್ರಾಂತಿಯಲ್ಲಿ ಸೇರುವುದಕ್ಕೆ ಪ್ರಯತ್ನಿಸೋಣ. ನಮ್ಮಲ್ಲಿ ಒಬ್ಬರಾದರೂ ಅವರಂತೆ ಅವಿಧೇಯರಾಗಿ ಬಿದ್ದುಹೋಗದೆ ಇರೋಣ.


ಈಗ ನಂಬುವವರಾದ ನಾವುಗಳೇ ಆ ವಿಶ್ರಾಂತಿಯಲ್ಲಿ ಸೇರುವವರು. ಏಕೆಂದರೆ ಲೋಕಾದಿಯಿಂದ ತನ್ನ ಸೃಷ್ಟಿಯ ಕಾರ್ಯಗಳು ಮುಗಿದುಹೋದಾಗ್ಯೂ “ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ ಎಂದು ನಾನು ಕೋಪದಿಂದ ಪ್ರಮಾಣ ಮಾಡಿದೆನು” ಎಂದು ಹೇಳಿದೆಯಲ್ಲಾ.


ನಮ್ಮನ್ನು ನಾವೇ ಪರೀಕ್ಷಿಸಿಕೊಂಡರೆ ನ್ಯಾಯ ವಿಚಾರಣೆಗೊಳಗಾಗುವುದಿಲ್ಲ.


ದುಃಖಪಡುವವರು ಧನ್ಯರು; ಅವರು ದೇವರಿಂದ ಸಮಾಧಾನ ಹೊಂದುವರು.


ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ಕುಗ್ಗಿದ ಮನಸ್ಸೇ ದೇವರಿಗೆ ಇಷ್ಟವಾದ ಯಜ್ಞ; ದೇವರೇ, ಪಶ್ಚಾತ್ತಾಪದಿಂದ ಜಜ್ಜಿಹೋದ ಮನಸ್ಸನ್ನು ನೀನು ತಿರಸ್ಕರಿಸುವುದಿಲ್ಲ.


ನಾನಾದರೋ ಅವರ ಅಸ್ವಸ್ಥಕಾಲದಲ್ಲಿ ಗೋಣಿ ತಟ್ಟನ್ನೇ ಕಟ್ಟಿಕೊಂಡಿದ್ದೆನು; ಉಪವಾಸದಿಂದ ನನ್ನ ಆತ್ಮವನ್ನು ನೋಯಿಸಿದೆನು. ನನ್ನ ಪ್ರಾರ್ಥನೆಯು ಕೇಳಲ್ಪಡಲಿಲ್ಲ.


“ಅದೇ ಏಳನೆಯ ತಿಂಗಳಿನ ಹತ್ತನೆಯ ದಿನ ದೋಷಪರಿಹಾರಕ ದಿನ. ಅದರಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು; ನೀವು ಪೂರ್ಣವಾಗಿ ಉಪವಾಸಮಾಡಬೇಕು ಮತ್ತು ಯೆಹೋವನ ಸನ್ನಿಧಿಯಲ್ಲಿ ಹೋಮವನ್ನು ಮಾಡಬೇಕು.


ಈ ದಿನ ನೀವು ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಬೇಕಾದ ಸಬ್ಬತ್ ದಿನವಾಗಿರಬೇಕು; ಇದರಲ್ಲಿ ನೀವು ಉಪವಾಸ ಮಾಡಬೇಕು; ಇದೇ ನಿಮಗೆ ಶಾಶ್ವತನಿಯಮ.


ಆ ದಿನದಲ್ಲಿ ಯಾವ ಕೆಲಸವನ್ನು ಮಾಡಬಾರದು. ಇದು ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ನಿವಾಸಗಳಲ್ಲಿ ಶಾಶ್ವತನಿಯಮ.


ಯೆಹೋವನು ಮೋಶೆಯೊಂದಿಗೆ ಮಾತನಾಡಿ,


ಇದಲ್ಲದೆ, ಸಬ್ಬತ್ ದಿನ ಪ್ರಾರಂಭವಾಗುವುದಕ್ಕಿಂತ ಮೊದಲು ಯೆರೂಸಲೇಮಿನ ಬಾಗಿಲುಗಳನ್ನು ಕತ್ತಲಾಗುವುದಕ್ಕೆ ಮೊದಲೇ ಮುಚ್ಚಿಸಿ, ಸಬ್ಬತ್ ದಿನವು ಮುಗಿಯುವವರೆಗೂ ಅವುಗಳನ್ನು ತೆರೆಯಬಾರದೆಂದು ಆಜ್ಞಾಪಿಸಿ, ಯಾವ ಹೊರೆಯೂ ಒಳಗೆ ಬಾರದಂತೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಿಲುಗಳ ಬಳಿಯಲ್ಲಿ ಕಾವಲಿರಿಸಿದೆನು.


“ಸ್ವದೇಶಸ್ಥರಾದ ನೀವೂ ಮತ್ತು ನಿಮ್ಮಲ್ಲಿ ವಾಸವಾಗಿರುವ ಅನ್ಯದೇಶದವರು, ಎಲ್ಲರೂ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸಕಲ ವಿಧವಾದ ಕೆಲಸಗಳನ್ನು ಬಿಟ್ಟು ಉಪವಾಸಮಾಡಿ ನಿಮ್ಮ ಆತ್ಮಗಳನ್ನು ಕುಂದಿಸಿಕೊಳ್ಳಬೇಕು. ಇದು ನಿಮಗೆ ಶಾಶ್ವತವಾದ ನಿಯಮ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು