ಯಾಜಕಕಾಂಡ 23:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಏಳನೆಯ ತಿಂಗಳಿನ ಹದಿನೈದನೆಯ ದಿನ ಮೊದಲುಗೊಂಡು ಏಳು ದಿನಗಳ ವರೆಗೆ ಪರ್ಣಶಾಲೆಗಳ ಜಾತ್ರೆಯನ್ನು ಯೆಹೋವನಿಗೋಸ್ಕರ ಆಚರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 “ಏಳನೆಯ ತಿಂಗಳಿನ ಹದಿನೈದನೆಯ ದಿನ ಮೊದಲ್ಗೊಂಡು ಏಳು ದಿನದವರೆಗೆ ಪರ್ಣಕುಟೀರಗಳ ಜಾತ್ರೆಯನ್ನು ಸರ್ವೇಶ್ವರನ ಗೌರವಾರ್ಥ ಆಚರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸು - ಏಳನೆಯ ತಿಂಗಳಿನ ಹದಿನೈದನೆಯ ದಿನ ಮೊದಲುಗೊಂಡು ಏಳು ದಿನಗಳವರೆಗೆ ಪರ್ಣಶಾಲೆಗಳ ಜಾತ್ರೆಯನ್ನು ಯೆಹೋವನಿಗೋಸ್ಕರ ಆಚರಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 “ಇಸ್ರೇಲರಿಗೆ ಹೀಗೆ ಹೇಳು: ಏಳನೆಯ ತಿಂಗಳಿನ ಹದಿನೈದನೆಯ ದಿನವು ಪರ್ಣಶಾಲೆಗಳ ಹಬ್ಬವಾಗಿರುತ್ತದೆ. ಯೆಹೋವನ ಈ ಹಬ್ಬದ ಕಾಲವು ಏಳು ದಿನಗಳವರೆಗೆ ಮುಂದುವರಿಯುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 “ಇಸ್ರಾಯೇಲರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು: ‘ಈ ಏಳನೆಯ ತಿಂಗಳಿನ ಹದಿನೈದನೆಯ ದಿವಸವು ಏಳು ದಿವಸಗಳವರೆಗೆ ಯೆಹೋವ ದೇವರಿಗೆ ಗುಡಾರಗಳ ಹಬ್ಬವಾಗಿರುವುದು. ಅಧ್ಯಾಯವನ್ನು ನೋಡಿ |