Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಯೆಹೋವನಿಗೆ ಒಪ್ಪಿಸಬೇಕಾದ ಕಪ್ಪ, ಕಾಣಿಕೆ, ಹರಕೆ ಇವುಗಳನ್ನು ನೀವು ಯೆಹೋವನು ನೇಮಿಸಿರುವ ಸಬ್ಬತ್ ದಿನದಲ್ಲಿ ಮಾತ್ರವಲ್ಲದೆ ಮೇಲೆ ಸೂಚಿಸಿರುವ ಹಬ್ಬದ ದಿನಗಳಲ್ಲಿಯೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಸರ್ವೇಶ್ವರನಿಗೆ ಒಪ್ಪಿಸಬೇಕಾದ ಕಪ್ಪಕಾಣಿಕೆಗಳನ್ನೂ ಹರಕೆಗಳನ್ನೂ ಸಲ್ಲಿಸಬೇಕಲ್ಲದೆ, ಮೇಲೆ ಸೂಚಿಸಿರುವ ಹಬ್ಬಗಳಲ್ಲಿ ಆಯಾ ದಿನಕ್ಕೆ ನೇಮಿಸಿರುವ ಪ್ರಕಾರ ದಹನಬಲಿ, ನೈವೇದ್ಯದ್ರವ್ಯ, ಶಾಂತಿಸಮಾಧಾನದ ಬಲಿ, ಪಾನದ್ರವ್ಯ ಇವುಗಳನ್ನು ತಂದು ಸರ್ವೇಶ್ವರನ ಸನ್ನಿಧಿಯಲ್ಲಿ ಹೋಮಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಯೆಹೋವನಿಗೆ ಒಪ್ಪಿಸಬೇಕಾದ ಕಪ್ಪ, ಕಾಣಿಕೆ, ಹರಕೆ ಇವುಗಳನ್ನು ನೀವು ಸಮರ್ಪಿಸಬೇಕಲ್ಲದೆ ಮೇಲೆ ಸೂಚಿಸಿರುವ ಹಬ್ಬದ ದಿನಗಳಲ್ಲಿಯೂ ಆಯಾ ದಿನಕ್ಕೆ ನೇವಿುಸಿರುವ ಪ್ರಕಾರ ಸರ್ವಾಂಗಹೋಮ, ನೈವೇದ್ಯದ್ರವ್ಯ, ಸಮಾಧಾನಯಜ್ಞ, ಪಾನದ್ರವ್ಯ ಇವುಗಳನ್ನೂ ತಂದು ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಯೆಹೋವನನ್ನು ಜ್ಞಾಪಕಮಾಡುವ ಸಬ್ಬತ್ ದಿನಗಳ ಜೊತೆಗೆ ನೀವು ಆ ಹಬ್ಬದ ದಿನಗಳನ್ನು ಆಚರಿಸಬೇಕು. ನೀವು ಆ ಕಾಣಿಕೆಗಳನ್ನು ನಿಮ್ಮ ಇತರ ಕಾಣಿಕೆಗಳ ಜೊತೆಗೆ ಅರ್ಪಿಸಬೇಕು. ನೀವು ಮಾಡಿದ ಹರಕೆಗಳನ್ನು ನೆರವೇರಿಸುವುದಕ್ಕಾಗಿ ಯೆಹೋವನಿಗೆ ಅರ್ಪಿಸುವ ಕಾಣಿಕೆಗಳ ಜೊತೆಗೆ ಅವುಗಳನ್ನು ಅರ್ಪಿಸಬೇಕು. ನೀವು ಯೆಹೋವನಿಗೆ ಅರ್ಪಿಸುವ ಯಾವುದೇ ವಿಶೇಷ ಸಮರ್ಪಣೆಗಳೊಂದಿಗೆ ಅವುಗಳನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಯೆಹೋವ ದೇವರ ವಿಶ್ರಾಂತಿಯ ದಿನಗಳ ಹೊರತಾಗಿಯೂ, ನೀವು ಯೆಹೋವ ದೇವರಿಗೆ ಸಮರ್ಪಿಸುವ ನಿಮ್ಮ ದಾನಗಳ ಹೊರತಾಗಿಯೂ, ನಿಮ್ಮ ಎಲ್ಲಾ ಹರಕೆಗಳ ಹೊರತಾಗಿಯೂ, ನಿಮ್ಮ ಎಲ್ಲಾ ಸ್ವಯಿಚ್ಛೆಯ ಕಾಣಿಕೆಗಳ ಹೊರತಾಗಿಯೂ ಸಲ್ಲಿಸಬೇಕಾದ ಅರ್ಪಣೆಗಳಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:38
15 ತಿಳಿವುಗಳ ಹೋಲಿಕೆ  

“‘ನೀವು ಯೆಹೋವನಿಗೆ ಕಾಣಿಕೆಯಾಗಿ ಹರಕೆಯನ್ನು ತೀರಿಸುವುದಕ್ಕಾಗಲಿ ಮಾಡುವ ಸರ್ವಾಂಗಹೋಮ, ಧಾನ್ಯದ್ರವ್ಯ ನೈವೇದ್ಯ, ಪಾನದ್ರವ್ಯ, ಸಮಾಧಾನಯಜ್ಞ ಇವುಗಳನ್ನಲ್ಲದೆ ಹಬ್ಬಗಳ ದಿನಗಳಲ್ಲಿ ಮೇಲೆ ಸೂಚಿಸಿರುವ ಯಜ್ಞಗಳನ್ನೂ ಹೆಚ್ಚಾಗಿ ಮಾಡಬೇಕು.’”


ನೀವು ಸಮರ್ಪಿಸುವ ಸರ್ವಾಂಗಹೋಮ, ಯಜ್ಞಪಶುಗಳನ್ನೂ, ನಿಮ್ಮ ಬೆಳೆಯಲ್ಲಿ ದಶಮಾಂಶವನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆ ಕಾಣಿಕೆಗಳನ್ನೂ, ದನ ಮತ್ತು ಕುರಿಗಳ ಚೊಚ್ಚಲ ಮರಿಗಳನ್ನೂ ಆ ಸ್ಥಳಕ್ಕೆ ಮಾತ್ರ ತರಬೇಕು.


“‘ಆರು ದಿನಗಳಲ್ಲಿ ನೀವು ಕೆಲಸವನ್ನು ಮಾಡಬೇಕು; ಏಳನೆಯ ದಿನ ಯಾವ ಕೆಲಸವನ್ನು ಮಾಡಬಾರದು, ಅದು ಸಬ್ಬತ್ ದಿನವಾಗಿದೆ. ಅದರಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ಆ ದಿನದಲ್ಲಿ ಯಾವ ವಿಧವಾದ ಕೆಲಸವನ್ನು ಮಾಡಬಾರದು. ನಿಮ್ಮ ಎಲ್ಲಾ ವಾಸಮಾಡುವ ಸ್ಥಳಗಳಲ್ಲಿ ಅದು ಯೆಹೋವನಿಗೆ ಮೀಸಲಾದ ವಿಶ್ರಾಂತಿ ದಿನವಾಗಿದೆ.


“‘ಪ್ರತಿಯೊಬ್ಬನು ತನ್ನ ತಾಯಿತಂದೆಗಳ ವಿಷಯದಲ್ಲಿ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ಆಚರಿಸಬೇಕು. ನಾನು ನಿಮ್ಮ ದೇವರಾದ ಯೆಹೋವನು.


“‘ಯೆಹೋವನು ನೇಮಿಸಿರುವ ಸಬ್ಬತ್ ದಿನಗಳ ಹೊರತಾಗಿ ಮೇಲೆ ಹೇಳಿದ ದಿನಗಳೇ ಯೆಹೋವನ ಹಬ್ಬದ ದಿನಗಳು. ಆ ದಿನಗಳಲ್ಲಿ ದೇವಾರಾಧನೆಗಾಗಿ ಸಭೆಸೇರುವಂತೆ ನೀವು ಪ್ರಕಟಿಸಬೇಕು. ಆಯಾ ದಿನಕ್ಕೆ ನೇಮಿಸಿರುವ ಪ್ರಕಾರ ಸರ್ವಾಂಗಹೋಮ, ಧಾನ್ಯನೈವೇದ್ಯ, ಸಮಾಧಾನಯಜ್ಞ, ಪಾನದ್ರವ್ಯ ಇವುಗಳನ್ನು ತಂದು ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು.


“‘ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ತೋಟ ಮತ್ತು ತೋಪುಗಳ ಬೆಳೆಯನ್ನು ಕೂಡಿಸಿದ ನಂತರ ಯೆಹೋವನು ನೇಮಿಸಿದ ಪರ್ಣಶಾಲೆಗಳ ಜಾತ್ರೆಯನ್ನು ಏಳು ದಿನಗಳ ವರೆಗೂ ಆಚರಿಸಬೇಕು. ಮೊದಲನೆಯ ದಿನದಲ್ಲಿಯೂ ಮತ್ತು ಎಂಟನೆಯ ದಿನದಲ್ಲಿಯೂ ಯಾವ ಕೆಲಸವನ್ನು ಮಾಡದೆ ಸಂಪೂರ್ಣ ವಿರಾಮದಿಂದಿರಬೇಕು.


ಅರಸನು ಸ್ವಂತ ಇಚ್ಛೆಯಿಂದ ಕಾಣಿಕೆಯನ್ನಾಗಲಿ, ಸರ್ವಾಂಗಹೋಮವನ್ನಾಗಲಿ, ಸಮಾಧಾನ ಯಜ್ಞಗಳನ್ನಾಗಲಿ ಯೆಹೋವನಿಗೆ ಸಮರ್ಪಿಸುವಾಗ ಅವನಿಗಾಗಿ ಪೂರ್ವದಿಕ್ಕಿನ ಹೆಬ್ಬಾಗಿಲನ್ನು ತೆರೆಯಬೇಕು. ಅವನು ಸಬ್ಬತ್ ದಿನದಲ್ಲಿ ಸಮರ್ಪಿಸುವಂತೆ ಸರ್ವಾಂಗಹೋಮ ಪಶುವನ್ನೂ, ಸಮಾಧಾನ ಯಜ್ಞಪಶುಗಳನ್ನೂ ಸಮರ್ಪಿಸಿ ಹೊರಡಲಿ. ಹೊರಟ ಮೇಲೆ ಬಾಗಿಲನ್ನು ಮುಚ್ಚಬೇಕು.


ಮೂಡಣದಿಕ್ಕಿನ ದ್ವಾರಪಾಲಕನಾಗಿದ್ದ ಇಮ್ನನ ಮಗನಾದ ಕೋರೆ ಎಂಬ ಲೇವಿಯನು, ಜನರು ಸ್ವಂತ ಇಚ್ಛೆಯಿಂದ ದೇವರಿಗೆ ಕಾಣಿಕೆಯಾಗಿ ಸಮರ್ಪಿಸುತ್ತಿದ್ದ ವಸ್ತುಗಳ ಮೇಲ್ವಿಚಾರಕನಾಗಿದ್ದನು. ಅಲ್ಲದೆ ಯೆಹೋವನ ನೈವೇದ್ಯಕ್ಕಾಗಿ ಪ್ರತ್ಯೇಕಿಸಲ್ಪಟ್ಟ ದ್ರವ್ಯ, ಮಹಾಪರಿಶುದ್ಧ ವಸ್ತು, ಇವುಗಳನ್ನು ಹಂಚಿಕೊಡುವವನೂ ಆಗಿದ್ದನು.


ಏಕೆಂದರೆ, ನಾನು ಜೀವದಿಂದ ಬೆಳಕಿನಲ್ಲಿದ್ದು ನಿನಗೆ ನಡೆದುಕೊಳ್ಳಬೇಕೆಂದು ನೀನು ನನ್ನ ಪ್ರಾಣವನ್ನು ಮರಣಕ್ಕೆ ತಪ್ಪಿಸಿ, ನನ್ನ ಪಾದಗಳನ್ನು ಎಡವಿಬೀಳದಂತೆ ಕಾಪಾಡಿದ್ದಿ.


ಆತನು ಭೂಪತಿಗಳಿಗೆ ಭಯಪ್ರದರಾಗಿದ್ದ ಪ್ರಭುಗಳ ಅಹಂಭಾವವನ್ನು ಮುರಿದುಬಿಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು