ಯಾಜಕಕಾಂಡ 23:40 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಮೊದಲನೆಯ ದಿನದಲ್ಲಿ ಶ್ರೇಷ್ಠವೃಕ್ಷದ ಹಣ್ಣುಗಳನ್ನು, ಖರ್ಜೂರ ಮರದ ಗರಿಗಳನ್ನು, ಎಲೆಗಳು ದಟ್ಟವಾಗಿರುವ ಮರಗಳ ಕೊಂಬೆಗಳನ್ನು ಮತ್ತು ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆಯುವ ನೀರವಂಜಿ ಚಿಗುರುಗಳನ್ನು ತೆಗೆದುಕೊಂಡು ಯೆಹೋವನ ಸನ್ನಿಧಿಯಲ್ಲಿ ಏಳು ದಿನಗಳ ವರೆಗೆ ಸಂಭ್ರಮವಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಮೊದಲನೆಯ ದಿನ ಮರಗಳಿಂದ ಒಳ್ಳೊಳ್ಳೆಯ ಹಣ್ಣುಗಳನ್ನು, ಖರ್ಜೂರ ಮರದ ಗರಿಗಳನ್ನು, ಎಲೆಗಳು ದಟ್ಟವಾಗಿರುವ ಮರಗಳ ಕೊಂಬೆಗಳನ್ನು ಮತ್ತು ನೀರಿನ ಕಾಲುವೆಗಳ ಬಳಿ ಬೆಳೆಯುವ ನೀರವಂಜಿ ಚಿಗುರುಗಳನ್ನು ತೆಗೆದುಕೊಂಡು ಬಂದು ಸರ್ವೇಶ್ವರನ ಸನ್ನಿಧಿಯಲ್ಲಿ ಏಳು ದಿನಗಳೂ ಸಂಭ್ರಮದಿಂದಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಮೊದಲನೆಯ ದಿನದಲ್ಲಿ ಶ್ರೇಷ್ಠ ವೃಕ್ಷದ ಹಣ್ಣುಗಳನ್ನೂ ಖರ್ಜೂರ ಮರದ ಗರಿಗಳನ್ನೂ ಎಲೆಗಳು ದಟ್ಟವಾಗಿರುವ ಮರಗಳ ಕೊಂಬೆಗಳನ್ನೂ ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆಯುವ ನೀರವಂಜಿ ಚಿಗುರುಗಳನ್ನೂ ತೆಗೆದುಕೊಂಡು ಯೆಹೋವನ ಸನ್ನಿಧಿಯಲ್ಲಿ ಏಳು ದಿನಗಳು ಸಂಭ್ರಮವಾಗಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ಪ್ರಥಮ ದಿನದಲ್ಲಿ ನೀವು ಮರಗಳಿಂದ ಉತ್ತಮ ಹಣ್ಣುಗಳನ್ನೂ ಖರ್ಜೂರಮರದ ಗರಿಗಳನ್ನೂ ಎಲೆತುಂಬಿದ ಕೊಂಬೆಗಳನ್ನೂ ವಿಲೋಸಸ್ಯಗಳನ್ನೂ ತೆಗೆದುಕೊಳ್ಳಬೇಕು. ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಈ ಹಬ್ಬದ ದಿನವನ್ನು ಏಳು ದಿನಗಳವರೆಗೆ ಆಚರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಮೊದಲನೆಯ ದಿವಸದಲ್ಲಿ ನೀವು ಸುಂದರವಾದ ಮರಗಳ ರೆಂಬೆಗಳನ್ನೂ, ಖರ್ಜೂರ ಮರಗಳ ರೆಂಬೆಗಳನ್ನೂ, ದಟ್ಟವಾದ ಮರಗಳ ರೆಂಬೆಗಳನ್ನೂ, ಹಳ್ಳದ ನೀರವಂಜಿ ಮರಗಳನ್ನೂ ತೆಗೆದುಕೊಂಡು ಏಳು ದಿನಗಳವರೆಗೆ ನಿಮ್ಮ ದೇವರಾಗಿರುವ ಯೆಹೋವ ದೇವರ ಎದುರಿನಲ್ಲಿ ಸಂತೋಷ ಪಡಬೇಕು. ಅಧ್ಯಾಯವನ್ನು ನೋಡಿ |