Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:41 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಹೀಗೆ ಪ್ರತಿ ವರ್ಷದಲ್ಲಿಯೂ ಏಳು ದಿನಗಳ ವರೆಗೆ ಈ ಹಬ್ಬವನ್ನು ಆಚರಿಸಬೇಕು; ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಇದು ಶಾಶ್ವತನಿಯಮ; ಏಳನೆಯ ತಿಂಗಳಿನಲ್ಲಿ ಇದನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಹೀಗೆ ಪ್ರತಿ ವರ್ಷ ಏಳುದಿನಗಳ ತನಕ ಈ ಉತ್ಸವವನ್ನು ಆಚರಿಸಬೇಕು. ನಿಮಗೂ ನಿಮ್ಮ ಸಂತತಿಯವರಿಗೂ ಇದು ಶಾಶ್ವತ ನಿಯಮ. ಏಳನೆಯ ತಿಂಗಳಲ್ಲಿ ಇದನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಹೀಗೆ ಪ್ರತಿ ವರುಷದಲ್ಲಿಯೂ ಏಳು ದಿನಗಳವರೆಗೆ ಈ ಉತ್ಸವವನ್ನು ಆಚರಿಸಬೇಕು; ನಿಮಗೂ ನಿಮ್ಮ ಸಂತತಿಯವರಿಗೂ ಇದು ಶಾಶ್ವತನಿಯಮ; ಏಳನೆಯ ತಿಂಗಳಿನಲ್ಲಿ ಇದನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ನೀವು ಪ್ರತಿ ವರ್ಷ ಏಳು ದಿನಗಳವರೆಗೆ ಈ ಹಬ್ಬದ ದಿನವನ್ನು ಆಚರಿಸಬೇಕು. ಈ ನಿಯಮ ಶಾಶ್ವತವಾಗಿದೆ. ಏಳನೆಯ ತಿಂಗಳಲ್ಲಿ ಈ ಹಬ್ಬದ ದಿನವನ್ನು ನೀವು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ವರ್ಷದಲ್ಲಿ ನೀವು ಏಳು ದಿವಸಗಳ ಹಬ್ಬವನ್ನು ಯೆಹೋವ ದೇವರಿಗಾಗಿ ಕೈಗೊಳ್ಳಬೇಕು. ಇದು ನಿಮ್ಮ ಸಂತತಿಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು. ನೀವು ಇದನ್ನು ಏಳನೆಯ ತಿಂಗಳಿನಲ್ಲಿ ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:41
5 ತಿಳಿವುಗಳ ಹೋಲಿಕೆ  

“‘ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ನೀವು ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು. ಆ ದಿನ ಮೊದಲುಗೊಂಡು ಏಳು ದಿನಗಳವರೆಗೆ ಯೆಹೋವನಿಗೆ ಉತ್ಸವವನ್ನು ಆಚರಿಸಬೇಕು.


ಎಜ್ರನು ಮೊದಲನೆಯ ದಿನದಿಂದ ಕೊನೆಯ ದಿನದವರೆಗೆ ಪ್ರತಿದಿನವೂ ದೇವರ ಧರ್ಮನಿಯಮಗಳನ್ನು ಜನರಿಗೋಸ್ಕರ ಪಾರಾಯಣ ಮಾಡುತ್ತಿದ್ದನು. ಏಳು ದಿನಗಳವರೆಗೂ ಉತ್ಸವದ ಜಾತ್ರೆ ನಡೆಯಿತು. ನಿಯಮದ ಪ್ರಕಾರ ಎಂಟನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆ ಸೇರಿತು.


ಮೊದಲನೆಯ ದಿನದಲ್ಲಿ ಶ್ರೇಷ್ಠವೃಕ್ಷದ ಹಣ್ಣುಗಳನ್ನು, ಖರ್ಜೂರ ಮರದ ಗರಿಗಳನ್ನು, ಎಲೆಗಳು ದಟ್ಟವಾಗಿರುವ ಮರಗಳ ಕೊಂಬೆಗಳನ್ನು ಮತ್ತು ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆಯುವ ನೀರವಂಜಿ ಚಿಗುರುಗಳನ್ನು ತೆಗೆದುಕೊಂಡು ಯೆಹೋವನ ಸನ್ನಿಧಿಯಲ್ಲಿ ಏಳು ದಿನಗಳ ವರೆಗೆ ಸಂಭ್ರಮವಾಗಿರಬೇಕು.


ಏಳು ದಿನಗಳು ನೀವು ಪರ್ಣಶಾಲೆಗಳಲ್ಲಿ ವಾಸವಾಗಿರಬೇಕು, ಸ್ವದೇಶಸ್ಥರಾದ ಇಸ್ರಾಯೇಲರೆಲ್ಲರೂ ಪರ್ಣಶಾಲೆಗಳಲ್ಲಿಯೇ ವಾಸವಾಗಿರಬೇಕು.


ನೀವು ನಿಮ್ಮ ದೇವರಿಗೆ ಸಲ್ಲಿಸಬೇಕಾದದ್ದನ್ನು ತಂದು ಕೊಡುವವರೆಗೂ ಆ ವರ್ಷದ ಬೆಳೆಯ ರೊಟ್ಟಿಯನ್ನಾಗಲಿ, ಸುಟ್ಟ ತೆನೆಗಳನ್ನಾಗಲಿ ಅಥವಾ ಹಸಿತೆನೆಗಳನ್ನಾಗಲಿ ತಿನ್ನಲೇಬಾರದು. ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ವಾಸಸ್ಥಾನಗಳಲ್ಲಿಯೂ ಇದು ಶಾಶ್ವತನಿಯಮ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು