ಯಾಜಕಕಾಂಡ 24:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯೆಹೋವನ ಹೆಸರನ್ನು ನಿಂದಿಸಿದವನಿಗೆ ಮರಣ ಶಿಕ್ಷೆಯಾಗಬೇಕು; ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. ಅನ್ಯದೇಶಸ್ಥನೇ ಆಗಿರಲಿ ಅಥವಾ ಸ್ವದೇಶಸ್ಥನೇ ಆಗಿರಲಿ ಯೆಹೋವನ ಹೆಸರನ್ನು ನಿಂದಿಸಿದರೆ ಅವನಿಗೆ ಮರಣಶಿಕ್ಷೆಯಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಸರ್ವೇಶ್ವರನ ಹೆಸರನ್ನು ನಿಂದಿಸಿದವನಿಗೆ ಮರಣಶಿಕ್ಷೆಯಾಗಬೇಕು; ಸಮಾಜದವರೆಲ್ಲರು ಅವನನ್ನು ಕಲ್ಲೆಸೆದು ಕೊಲ್ಲಬೇಕು. ಅನ್ಯದೇಶೀಯನಾಗಿರಲಿ, ಸ್ವದೇಶೀಯನಾಗಿರಲಿ ಸರ್ವೇಶ್ವರನ ಹೆಸರನ್ನು ನಿಂದಿಸಿದರೆ ಅವನಿಗೆ ಮರಣಶಿಕ್ಷೆಯಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಯೆಹೋವನ ಹೆಸರನ್ನು ನಿಂದಿಸಿದವನಿಗೆ ಮರಣಶಿಕ್ಷೆಯಾಗಬೇಕು; ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು. ಅನ್ಯದೇಶಸ್ಥನೇಯಾಗಲಿ ಸ್ವದೇಶಸ್ಥನೇಯಾಗಲಿ ಯೆಹೋವನ ಹೆಸರನ್ನು ನಿಂದಿಸಿದರೆ ಅವನಿಗೆ ಮರಣಶಿಕ್ಷೆಯಾಗಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಯಾವನಾದರೂ ಯೆಹೋವನ ನಾಮದ ವಿರುದ್ಧ ಮಾತಾಡಿದರೆ, ಅವನಿಗೆ ಮರಣಶಿಕ್ಷೆಯಾಗಬೇಕು. ಜನರೆಲ್ಲರೂ ಅವನಿಗೆ ಕಲ್ಲೆಸೆದು ಕೊಲ್ಲಬೇಕು. ಯೆಹೋವನ ನಾಮವನ್ನು ನಿಂದಿಸುವ ಪರದೇಶಸ್ಥರಿಗೂ ಅದೇ ರೀತಿಯ ಶಿಕ್ಷೆಯಾಗಬೇಕು. ಯೆಹೋವನ ನಾಮವನ್ನು ನಿಂದಿಸುವವನಿಗೆ ಮರಣಶಿಕ್ಷೆಯಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಯೆಹೋವ ದೇವರ ನಾಮವನ್ನು ದೂಷಣೆ ಮಾಡುವವನಿಗೆ ನಿಶ್ಚಯವಾಗಿ ಮರಣವನ್ನು ವಿಧಿಸಬೇಕು. ಸಭೆಯವರೆಲ್ಲರೂ ನಿಶ್ಚಯವಾಗಿ ಅವನಿಗೆ ಕಲ್ಲೆಸೆಯಬೇಕು. ಇದಲ್ಲದೆ ಸ್ವದೇಶೀಯನಾಗಿರಲಿ, ಪರಕೀಯನಾಗಿರಲಿ ಯೆಹೋವ ದೇವರ ಹೆಸರನ್ನು ದೂಷಣೆ ಮಾಡಿದಾಗ, ಅವನನ್ನು ಮರಣ ಶಿಕ್ಷೆಗೆ ಒಳಪಡಿಸಬೇಕು. ಅಧ್ಯಾಯವನ್ನು ನೋಡಿ |