Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “‘ಜೂಬಿಲಿ ವರ್ಷದಲ್ಲಿ ನಿಮ್ಮ ನಿಮ್ಮ ಸ್ವಂತ ಭೂಮಿಗಳು ತಿರುಗಿ ನಿಮ್ಮ ವಶಕ್ಕೆ ಬರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಜೂಬಿಲಿ ವರ್ಷದಲ್ಲಿ ನಿಮ್ಮ ನಿಮ್ಮ ಸ್ವಂತ ಭೂಮಿಗಳು ಮರಳಿ ನಿಮ್ಮ ವಶಕ್ಕೆ ಬರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಜೂಬಿಲಿ ವರುಷದಲ್ಲಿ ನಿಮ್ಮ ನಿಮ್ಮ ಸ್ವಂತ ಭೂವಿುಗಳು ತಿರಿಗಿ ನಿಮ್ಮ ವಶಕ್ಕೆ ಬರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಜ್ಯೂಬಿಲಿ ವರ್ಷದಲ್ಲಿ ಪ್ರತಿಯೊಬ್ಬನೂ ತನ್ನ ಸ್ವಂತ ಸ್ವಾಸ್ತ್ಯಕ್ಕೆ ಹೋಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ ‘ಜೂಬಿಲಿಯ ಈ ವರ್ಷದಲ್ಲಿ ಪ್ರತಿಯೊಬ್ಬನು ತನ್ನ ಆಸ್ತಿಗೆ ಹಿಂದಿರುಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:13
8 ತಿಳಿವುಗಳ ಹೋಲಿಕೆ  

ನೀವು ಐವತ್ತನೆಯ ವರ್ಷವನ್ನು ದೇವರಿಗೆ ಮೀಸಲಾದ ವರ್ಷವೆಂದು ಭಾವಿಸಿ, ಅದರಲ್ಲಿ ದೇಶದ ನಿವಾಸಿಗಳೆಲ್ಲರಿಗೂ ಬಿಡುಗಡೆಯಾಯಿತು ಎಂಬುದಾಗಿ ಸಾರಬೇಕು. ಅದು ಜೂಬಿಲಿ ಸಂವತ್ಸರವಾದುದರಿಂದ ನೀವೆಲ್ಲರು ನಿಮ್ಮ ನಿಮ್ಮ ಸ್ವಂತ ಭೂಮಿಗಳಿಗೂ ಮತ್ತು ಸ್ವಜನರ ಬಳಿಗೂ ಹೋಗಿ ಇರಬಹುದು.


ಇಸ್ರಾಯೇಲರ ಜೂಬಿಲಿ ಸಂವತ್ಸರವು ಬಂದಾಗ ಅವರ ಸ್ವತ್ತು ಅವರು ಸೇರಿಕೊಳ್ಳುವ ಕುಲದ ಸ್ವತ್ತಿಗೆ ಕೂಡಿಕೊಳ್ಳುವುದರಿಂದ ನಮ್ಮ ಕುಲದಿಂದ ತೆಗೆಯಲ್ಪಡುವುದು” ಎಂದು ಹೇಳಿದರು.


ಅದು ಜೂಬಿಲಿ ವರ್ಷವಾದುದರಿಂದ ನೀವು ಅದನ್ನು ಮೀಸಲಾದದ್ದೆಂದು ಭಾವಿಸಬೇಕು. ಹೊಲದಲ್ಲಿ ತಾನಾಗಿ ಬೆಳೆದದ್ದನ್ನು ಊಟಮಾಡಬೇಕು.


ಅವನು ಆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾರದೆ ಹೋದರೆ ಅದು ಜೂಬಿಲಿ ಸಂವತ್ಸರದ ತನಕ ಕೊಂಡುಕೊಂಡವನ ವಶದಲ್ಲೇ ಇರಬೇಕು. ಜೂಬಿಲಿ ವರ್ಷದಲ್ಲಿ ಅದು ಬಿಡುಗಡೆಯಾಗುವುದು; ಆಗ ಆ ಭೂಮಿ ಪುನಃ ಮಾರಿದವನ ವಶಕ್ಕೆ ಬರುವುದು.


ಮೇಲೆ ಹೇಳಿದ ರೀತಿಯಲ್ಲಿ ಅವನು ಬಿಡಿಸಿಕೊಳ್ಳದೆ ಹೋದರೆ ಜೂಬಿಲಿ ಸಂವತ್ಸರದಲ್ಲಿ ಅವನೂ ಮತ್ತು ಅವನ ಮಕ್ಕಳೂ ಬಿಡುಗಡೆಯಾಗಬೇಕು.


ಯೆಹೋವನು ನೇಮಿಸಿರುವ ಶುಭವರ್ಷ, ನಮ್ಮ ದೇವರು ಮುಯ್ಯಿತೀರಿಸುವ ದಿನ ಇವುಗಳನ್ನು ಪ್ರಚುರಗೊಳಿಸುವುದಕ್ಕೂ,


ಮಾರಿದವನು ಎಷ್ಟು ವರ್ಷ ಬದುಕಿದರೂ ಮಾರಿದ ಸೊತ್ತು ಅವನ ವಶಕ್ಕೆ ತಿರುಗಿಬಾರದು; ಉಂಟಾದ ದಿವ್ಯದರ್ಶನವು ಸಮೂಹದವರಿಗೆಲ್ಲಾ ಸಂಬಂಧಿಸಿದೆ, ಯಾರೂ ಹಿಂದಿರುಗುವುದಿಲ್ಲ. ಯಾರೂ ತಮ್ಮ ಅಧರ್ಮದಿಂದ ತಮ್ಮ ಜೀವವನ್ನು ಉಳಿಸಿಕೊಳ್ಳುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು