Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನೀವು ಸ್ಥಿರಸೊತ್ತನ್ನು ಸ್ವದೇಶದವರೊಡನೆ ಕ್ರಯ ಮತ್ತು ವಿಕ್ರಯ ಮಾಡುವಾಗ ಇದರ ವಿಷಯದಲ್ಲಿ ಅನ್ಯಾಯಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನೀವು ಸ್ಥಿರಸೊತ್ತನ್ನು ಸ್ವದೇಶದವರೊಡನೆ ಕ್ರಯ-ವಿಕ್ರಯ ಮಾಡುವಾಗ ಇದರ ವಿಷಯದಲ್ಲಿ ಅನ್ಯಾಯ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನೀವು [ಸ್ಥಿರಸೊತ್ತನ್ನು] ಸ್ವದೇಶದವರೊಡನೆ ಕ್ರಯವಿಕ್ರಯ ಮಾಡುವಾಗ ಇದರ ವಿಷಯದಲ್ಲಿ ಅನ್ಯಾಯಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 “ಭೂಮಿಯನ್ನು ನೆರೆಯವನಿಗೆ ಮಾರುವಾಗ ಅಥವಾ ಅವನಿಂದ ಭೂಮಿಯನ್ನು ಕೊಂಡುಕೊಳ್ಳುವಾಗ ಮೋಸ ಮಾಡಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ ‘ನೆರೆಯವನಿಗೆ ಏನಾದರೂ ಮಾರಾಟ ಮಾಡಿದ್ದರೆ, ಇಲ್ಲವೆ ನೆರೆಯವನಿಂದ ಕೊಂಡುಕೊಂಡಿದ್ದರೆ, ಒಬ್ಬರಿಗೊಬ್ಬರು ಅನ್ಯಾಯಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:14
33 ತಿಳಿವುಗಳ ಹೋಲಿಕೆ  

“‘ಮತ್ತೊಬ್ಬನನ್ನು ಬಲಾತ್ಕರಿಸಬಾರದು ಅಥವಾ ಅವನ ಸೊತ್ತನ್ನು ಅಪಹರಿಸಬಾರದು. ಅವನ ಕೂಲಿಯನ್ನು ಮರುದಿನದ ವರೆಗೆ ನಿಮ್ಮ ಬಳಿಯಲ್ಲಿ ಇಟ್ಟುಕೊಳ್ಳಬಾರದು.


ಆದುದರಿಂದ ನೀವು ಒಬ್ಬರಿಗೊಬ್ಬರು ಅನ್ಯಾಯಮಾಡಬಾರದು; ನಿಮ್ಮ ದೇವರಿಗೆ ಭಯಪಡುವವರಾಗಿರಬೇಕು; ನಾನು ನಿಮ್ಮ ದೇವರಾದ ಯೆಹೋವನು.


ನಿನ್ನವರು ತಾಯಿ ತಂದೆಗಳನ್ನು ತುಚ್ಛೀಕರಿಸಿದ್ದಾರೆ, ನಿನ್ನವರು ವಿದೇಶಿಗಳನ್ನು ಬಾಧಿಸಿದ್ದಾರೆ, ನಿನ್ನವರು ಅನಾಥರನ್ನೂ, ವಿಧವೆಯರನ್ನೂ ಹಿಂಸಿಸಿದ್ದಾರೆ.


ನೋಡಿರಿ, ಕೇಡಿನ ಬಂಧನಗಳನ್ನು ಬಿಚ್ಚುವುದು, ನೊಗಹೊರಿಸುವ ಹುರಿಯನ್ನು ಕಳಚುವುದು, ಜಜ್ಜಿ ಹೋದವರನ್ನು ಬಿಡುಗಡೆ ಮಾಡುವುದು, ನೊಗಗಳನ್ನೆಲ್ಲಾ ಮುರಿಯುವುದು,


ಆದರೆ ನೀವು ನಿಮ್ಮ ಸ್ವಂತ ಸಹೋದರರಿಗೆ ಅನ್ಯಾಯವನ್ನು ಮತ್ತು ಮೋಸವನ್ನು ಮಾಡಿದ್ದೀರಿ.


ಸಿಪಾಯಿಗಳು ಸಹ ಬಂದು, “ನಾವು ಏನು ಮಾಡಬೇಕು” ಎಂದು ಆತನನ್ನು ಕೇಳಿದಾಗ ಆತನು ಅವರಿಗೆ, “ಯಾರನ್ನಾದರೂ ಬೆದರಿಸಿ ದುಡ್ಡು ಕಸಿದುಕೊಳ್ಳಬೇಡಿರಿ; ಯಾರ ಮೇಲೆಯೂ ಸುಳ್ಳುದೂರು ಹೇಳಬೇಡಿರಿ. ನಿಮ್ಮ ಸಂಬಳದಲ್ಲಿ ತೃಪ್ತರಾಗಿರಿ” ಎಂದು ಹೇಳಿದನು.


ಎರಡು ಕೈಗಳನ್ನು ಹಾಕಿ ಕೆಟ್ಟ ಕೆಲಸವನ್ನು ಚೆನ್ನಾಗಿ ಮಾಡುತ್ತಾರೆ. ಪ್ರಭುವು ಧನವನ್ನು ಕೇಳುತ್ತಾನೆ. ನ್ಯಾಯಾಧಿಪತಿಯು ಲಂಚಕ್ಕೆ ಕೈಯೊಡ್ಡುತ್ತಾನೆ. ದೊಡ್ಡ ಮನುಷ್ಯನು ತನ್ನ ದುರಾಶೆಯನ್ನು ತಿಳಿಸುತ್ತಾನೆ. ಹೀಗೆ ಕುಯುಕ್ತಿಯನ್ನು ಹೆಣೆಯುತ್ತಾರೆ.


ಆದರೆ ನಿರ್ದೋಷಿಗಳ ರಕ್ತವನ್ನು ಸುರಿಸುವುದು, ದೋಚಿಕೊಳ್ಳುವುದು, ಹಿಂಸಿಸುವುದು, ಜಜ್ಜುವುದು, ಇವುಗಳನ್ನು ಮಾಡುವುದರಲ್ಲಿಯೇ ನಿನ್ನ ದೃಷ್ಟಿಯೂ, ನಿನ್ನ ಮನಸ್ಸೂ ನೆಲೆಗೊಂಡಿವೆ.


ಸನ್ಮಾರ್ಗದಲ್ಲಿ ನಡೆದು, ಯಥಾರ್ಥವಾಗಿ ನುಡಿದು, ದೋಚಿಕೊಂಡ ಲಾಭ ಬೇಡವೆಂದು, ಲಂಚಮುಟ್ಟದಂತೆ ಕೈ ಒದರಿ, ಕೊಲೆಯ ಮಾತಿಗೆ ಕಿವಿಗೊಡದೆ, ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತಸನ್ನಿಧಾನದಲ್ಲಿ ವಾಸಿಸುವನು.


ಸೇನಾಧೀಶ್ವರನಾದ ಯೆಹೋವನ ದ್ರಾಕ್ಷಿಯ ತೋಟವು ಇಸ್ರಾಯೇಲರ ಮನೆಯೇ, ಯೆಹೂದದ ಜನವೇ, ಆತನ ಇಷ್ಟದ ಗಿಡ. ಆತನು ನ್ಯಾಯವನ್ನು ನಿರೀಕ್ಷಿಸಲು ನರಹತ್ಯೆ, ನೀತಿಯನ್ನು ನಿರೀಕ್ಷಿಸಿಲು ಗೋಳಾಟವೂ ಸಿಕ್ಕಿತ್ತು.


ಸದಾಚಾರವನ್ನು ಅಭ್ಯಾಸ ಮಾಡಿಕೊಳ್ಳಲು ಕಲಿಯಿರಿ, ನ್ಯಾಯವನ್ನು ಅನುಸರಿಸಿ ನಡೆಯಿರಿ. ಹಿಂಸೆಗೆ ಒಳಗಾದವನಿಗೆ ಸಹಾಯಮಾಡಿರಿ. ಅನಾಥನಿಗೆ ನ್ಯಾಯತೀರಿಸಿರಿ. ವಿಧವೆಯ ಪಕ್ಷವಾಗಿ ವಾದಿಸಿರಿ.”


ಸಂಸ್ಥಾನದಲ್ಲಿ ಬಡವರ ಹಿಂಸೆಯನ್ನೂ, ನೀತಿನ್ಯಾಯಗಳ ನಾಶನವನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಹೆಚ್ಚಿನ ಅಧಿಕಾರವುಳ್ಳವನಿದ್ದಾನೆ.


ವಿವೇಕಶೂನ್ಯನಾದ ಒಡೆಯನು ಮಹಾ ಹಿಂಸಕನು, ದೋಚಿಕೊಳ್ಳದವನು ದೀರ್ಘಾಯುಷ್ಯನು.


ಬಡ್ಡಿ ಮತ್ತು ಅನ್ಯಾಯ ಲಾಭದಿಂದ ವೃದ್ಧಿಯಾದ ಆಸ್ತಿಯು ಬಡವರಲ್ಲಿ ಕನಿಕರಪಡುವವನ ಪಾಲಾಗುವುದು.


ಬಡವರನ್ನು ಹಿಂಸಿಸುವ ದರಿದ್ರನು, ಒಂದು ಕಾಳೂ ಉಳಿಯದಂತೆ ಪೈರನ್ನು ಬಡಿಯುವ ಮಳೆಯ ಹಾಗೆ.


ಸ್ವಂತ ಲಾಭಕ್ಕಾಗಿ ಬಡವರನ್ನು ಹಿಂಸಿಸುವವನಿಗೂ, ಸಿರಿವಂತರಿಗೆ ಲಂಚಕೊಡುವವನಿಗೂ ಕೊರತೆಯೇ ಗತಿ.


ಬಡವನ ಕೂಗಿಗೆ ಕಿವಿಮುಚ್ಚಿಕೊಳ್ಳುವವನು, ತಾನೇ ಮೊರೆಯಿಡುವಾಗ ಯಾರೂ ಉತ್ತರಕೊಡರು.


ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು, ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.


ನೀನು ದಿಕ್ಕಿಲ್ಲದವರ ಮತ್ತು ಕುಗ್ಗಿದವರ ನ್ಯಾಯವನ್ನು ವಿಚಾರಿಸುತ್ತಿ. ಹೀಗಿರುವಲ್ಲಿ ಇನ್ನು ಮುಂದೆ ಮಣ್ಣಿನಿಂದಾದ ಮನುಷ್ಯರಿಂದ ಅವರಿಗೆ ಹೆದರಿಕೆ ಉಂಟಾಗುವುದಿಲ್ಲ.


ಆಸನು ಈ ಮಾತುಗಳಿಂದ ಬೇಸರಗೊಂಡು, ದರ್ಶಕನ ಮೇಲೆ ಕೋಪಗೊಂಡು, ಅವನನ್ನು ಸೆರೆಮನೆಯಲ್ಲಿಡಿಸಿ ಕೋಳ ಹಾಕಿಸಿದನು. ಇದಲ್ಲದೆ, ಜನರಲ್ಲಿ ಕೆಲವರನ್ನು ಪೀಡಿಸಿದನು.


ಒಂಭೈನೂರು ಕಬ್ಬಿಣದ ರಥಗಳುಳ್ಳ ಇವನು ಇಸ್ರಾಯೇಲ್ಯರನ್ನು ಇಪ್ಪತ್ತು ವರ್ಷಗಳ ಕಾಲ ಕಠಿಣವಾಗಿ ಬಾಧಿಸುತ್ತಿರಲು ಅವರು ಯೆಹೋವನಿಗೆ ಮೊರೆಯಿಟ್ಟರು.


ಹಿಂದಿನ ಜೂಬಿಲಿ ಸಂವತ್ಸರದಿಂದ ಎಷ್ಟು ವರ್ಷವಾಯಿತೆಂದು ಲೆಕ್ಕಿಸಿ, ಸ್ವದೇಶದವನಿಂದ ಕ್ರಯಕ್ಕೆ ತೆಗೆದುಕೊಳ್ಳಬೇಕು; ಅದರಂತೆ ಮಾರುವವನು ಎಷ್ಟು ವರ್ಷಗಳ ಬೆಳೆಯಾಯಿತೆಂದು ಲೆಕ್ಕಿಸಿ ಕ್ರಯಕ್ಕೆ ಕೊಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು