ಯಾಜಕಕಾಂಡ 25:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಮುಂದಣ ಜೂಬಿಲಿ ಸಂವತ್ಸರದ ತನಕ ಹೆಚ್ಚು ವರ್ಷಗಳಾದರೆ ಭೂಮಿಯ ಕ್ರಯವನ್ನು ಹೆಚ್ಚಿಸಬೇಕು, ಕಡಿಮೆಯಾದರೆ ಕಡಿಮೆ ಮಾಡಬೇಕು; ಏಕೆಂದರೆ ಅವನು ಮಾರುವುದು ಭೂಮಿಯನ್ನಲ್ಲ, ಲೆಕ್ಕದ ಪ್ರಕಾರ ಬೆಳೆಗಳನ್ನೇ ಮಾರುತ್ತಾನಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಮುಂದಣ ಜೂಬಿಲಿ ಸಂವತ್ಸರದ ತನಕ ಹೆಚ್ಚು ವರ್ಷಗಳಾದರೆ ಭೂಮಿಯ ಕ್ರಯವನ್ನು ಹೆಚ್ಚಿಸಬೇಕು; ಕಡಿಮೆಯಾದರೆ ತಗ್ಗಿಸಬೇಕು. ಏಕೆಂದರೆ ಮಾರುವವನು ಭೂಮಿಯನ್ನಲ್ಲ, ಬೆಳೆಗಳನ್ನು ಲೆಕ್ಕಿಸಿ ಮಾರುತ್ತಾನಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅದರಂತೆ ಮಾರುವವನು ಇಷ್ಟು ವರುಷಗಳ ಬೆಳೆಯಾಯಿತೆಂದು ಲೆಕ್ಕಿಸಿ ಕ್ರಯಕ್ಕೆ ಕೊಡಬೇಕು. [ಮುಂದಣ ಜೂಬಿಲಿ ಸಂವತ್ಸರದ ತನಕ] ಹೆಚ್ಚು ವರುಷಗಳಾದರೆ ಭೂವಿುಯ ಕ್ರಯವನ್ನು ಹೆಚ್ಚಿಸಬೇಕು; ಕಡಿಮೆಯಾದರೆ ತಗ್ಗಿಸಬೇಕು; ಭೂವಿುಯನ್ನಲ್ಲ, ಲೆಕ್ಕದ ಪ್ರಕಾರ ಬೆಳೆಗಳನ್ನೇ ಮಾರುತ್ತಾನಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಇನ್ನೂ ಅನೇಕ ವರ್ಷಗಳು ಇದ್ದರೆ, ಬೆಲೆ ಹೆಚ್ಚಾಗಿರುವುದು. ವರ್ಷಗಳು ಕಡಿಮೆಯಾಗಿದ್ದರೆ, ಬೆಲೆ ಕಡಿಮೆಯಾಗಿರುವುದು. ಯಾಕೆಂದರೆ ನಿಮ್ಮ ನೆರೆಯವನು ನಿಜವಾಗಿ ಕೇವಲ ಕೆಲವೇ ಪೈರುಗಳನ್ನು ನಿಮಗೆ ಮಾರುತ್ತಿದ್ದಾನೆ. ಮುಂದಿನ ಜ್ಯೂಬಿಲಿ ವರ್ಷದಲ್ಲಿ ಭೂಮಿಯು ತಿರುಗಿ ಅವನ ಕುಟುಂಬಕ್ಕೆ ಸೇರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ವರ್ಷಗಳು ಹೆಚ್ಚಿದಂತೆಯೇ ಫಲದ ಬೆಲೆಯನ್ನೂ ಹೆಚ್ಚಿಸಬೇಕು. ವರ್ಷಗಳು ಕಡಿಮೆಯಿರುವಂತೆಯೇ ಫಲದ ಬೆಲೆಯನ್ನು ಕಡಿಮೆ ಮಾಡಬೇಕು. ಫಲದ ವರ್ಷಗಳ ಸಂಖ್ಯೆಗನುಸಾರವಾಗಿಯೇ ಅವನು ನಿನಗೆ ಮಾರಾಟಮಾಡಬೇಕು. ಅಧ್ಯಾಯವನ್ನು ನೋಡಿ |