Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 “‘ಏಳನೆಯ ವರ್ಷದಲ್ಲಿ ಬೀಜವನ್ನು ಬಿತ್ತುವುದಕ್ಕಾಗಲಿ, ಬೆಳೆದದ್ದನ್ನು ಕೂಡಿಸಿಟ್ಟುಕೊಳ್ಳುವುದಕ್ಕಾಗಲಿ ಅಪ್ಪಣೆ ಇಲ್ಲವಲ್ಲಾ; ಆ ವರ್ಷದಲ್ಲಿ ಏನು ತಿನ್ನಬೇಕು?’ ಎಂದು ವಿಚಾರಿಸುತ್ತೀರೋ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆದರೆ ಆ ಏಳನೆಯ ವರ್ಷದಲ್ಲಿ ಬಿತ್ತನೆ ಮಾಡುವುದಕ್ಕಾಗಲಿ, ಬೆಳೆದದ್ದನ್ನು ಕೂಡಿಸಿಟ್ಟುಕೊಳ್ಳುವುದಕ್ಕಾಗಲಿ ಅಪ್ಪಣೆಯಿರುವುದಿಲ್ಲ. ಹಾಗಾದರೆ ಆ ವರ್ಷ ಏನು ತಿನ್ನಬೇಕೆಂದು ವಿಚಾರಿಸುತ್ತೀರೋ? ನಾನು ಹೇಳುವುದನ್ನು ಕೇಳಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಏಳನೆಯ ವರುಷದಲ್ಲಿ ಬೀಜವನ್ನು ಬಿತ್ತುವದಕ್ಕಾಗಲಿ ಬೆಳೆದದ್ದನ್ನು ಕೂಡಿಸಿಟ್ಟುಕೊಳ್ಳುವದಕ್ಕಾಗಲಿ ಅಪ್ಪಣೆಯಿಲ್ಲವಲ್ಲಾ; ಆ ವರುಷದಲ್ಲಿ ಏನು ತಿನ್ನಬೇಕೆಂದು ವಿಚಾರಿಸುತ್ತೀರೋ? ಕೇಳಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಒಂದುವೇಳೆ ನೀವು, ‘ನಾವು ಬೀಜಗಳನ್ನು ಬಿತ್ತದಿದ್ದರೆ ಅಥವಾ ಪೈರುಗಳನ್ನು ಸಂಗ್ರಹಿಸದಿದ್ದರೆ ಏಳನೆಯ ವರ್ಷದಲ್ಲಿ ನಮಗೆ ತಿನ್ನಲು ಏನೂ ಇರುವುದಿಲ್ಲ’ ಎಂದು ಹೇಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನೀವು, “ನಾವು ಬಿತ್ತುವುದಿಲ್ಲ, ಇಲ್ಲವೆ ನಮ್ಮ ಹುಟ್ಟುವಳಿಯಲ್ಲಿ ಕೂಡಿಸಿಕೊಳ್ಳುವುದಿಲ್ಲ. ಏಳನೆಯ ವರ್ಷದಲ್ಲಿ ನಾವು ಏನು ತಿನ್ನೋಣ,” ಎನ್ನುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:20
15 ತಿಳಿವುಗಳ ಹೋಲಿಕೆ  

ಏನು ಊಟ ಮಾಡಬೇಕು? ಏನು ಕುಡಿಯಬೇಕು? ಎಂದು ತವಕಪಟ್ಟು ಚಿಂತಿಸಬೇಡಿರಿ.


ಆದರೆ ಏಳನೆಯ ವರ್ಷ ಯಾವ ವ್ಯವಸಾಯ ಮಾಡಬಾರದ ವಿಶ್ರಾಂತಿ ಕಾಲವಾಗಿಯೂ ಮತ್ತು ಯೆಹೋವನಿಗೆ ಆಚರಿಸಬೇಕಾದ ಸಬ್ಬತ್ ಕಾಲವಾಗಿಯೂ ಇರಬೇಕು. ಹೊಲದಲ್ಲಿ ಬೀಜವನ್ನು ಬಿತ್ತಬಾರದು, ದ್ರಾಕ್ಷಿತೋಟದ ಕೆಲಸವನ್ನು ಮಾಡಬಾರದು.


ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ.


ಆತನು ಅವರಿಗೆ, “ಅಲ್ಪ ವಿಶ್ವಾಸಿಗಳೇ, ಏಕೆ ಹೆದರುತ್ತೀರಿ?” ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಅಲ್ಲಿ ಸಂಪೂರ್ಣವಾಗಿ ಶಾಂತವಾಯಿತು.


ಆಕಾಶಮಂಡಲವೇ, ಆಲಿಸು! ಭೂಮಂಡಲವೇ ಕೇಳು! ಯೆಹೋವನು ಮಾತನಾಡುತ್ತಿದ್ದಾನೆ. ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹ ಮಾಡಿದ್ದಾರೆ.


ಅಮಚ್ಯನು ದೇವರ ಮನುಷ್ಯನನ್ನು, “ಹಾಗಾದರೆ ನಾನು ಇಸ್ರಾಯೇಲ್ ಸೈನ್ಯಕ್ಕೋಸ್ಕರ ನೂರು ತಲಾಂತುಗಳನ್ನು ಕೊಟ್ಟ ವಿಷಯದಲ್ಲಿ ನಾನೇನು ಮಾಡಬೇಕು?” ಎಂದು ಕೇಳಲು ಅವನು, “ಯೆಹೋವನು ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿನಗೆ ಕೊಡಬಲ್ಲನು” ಎಂದನು.


ಇವರು ನನ್ನ ಬಳಿಗೆ ಅಳುತ್ತಾ ಬಂದು, ‘ಮಾಂಸವನ್ನು ನಮಗೆ ತಿನ್ನಲಿಕ್ಕೆ ಕೊಡು’ ಎಂದು ಕೇಳುತ್ತಾರಲ್ಲಾ, ಇಷ್ಟು ಜನಕ್ಕೆ ಬೇಕಾದ ಮಾಂಸವು ನನಗೆ ಎಲ್ಲಿಂದ ದೊರಕೀತು?


ಅವರ ಮಧ್ಯದಲ್ಲಿದ್ದ ಇತರ ಜನರು ಮಾಂಸವನ್ನು ಆಶಿಸಿದರು. ಇಸ್ರಾಯೇಲರು ಪುನಃ ಕಣ್ಣೀರಿಡುತ್ತಾ ಅಯ್ಯೋ, “ಮಾಂಸವು ನಮಗೆ ಹೇಗೆ ಸಿಕ್ಕೀತು?


ಇದನ್ನು ಕೇಳಿ ಅರಸನ ಸಮೀಪವರ್ತಿಯಾದ ಸರದಾರನು ದೇವರ ಮನುಷ್ಯನಿಗೆ, “ಯೆಹೋವನು ಆಕಾಶದಲ್ಲಿ ಕಿಂಡಿಗಳನ್ನು ಕೊರೆದರೂ ಇದು ಸಂಭವಿಸಲಾರದು” ಎನ್ನಲು ಎಲೀಷನು ಅವನಿಗೆ, “ಅದು ಸಂಭವಿಸುವುದನ್ನು ನೀನು ಕಣ್ಣಾರೆ ಕಾಣುವಿ, ಆದರೆ ನೀನು ಅದನ್ನು ಅನುಭವಿಸುವುದಿಲ್ಲ” ಎಂದು ಹೇಳಿದನು.


ಆದರೆ ಅಂತಹ ಸಬ್ಬತ್ ಸಂವತ್ಸರದಲ್ಲಿ ತಾನಾಗಿ ಭೂಮಿಯಲ್ಲಿ ಹುಟ್ಟಿದ್ದು ನಿಮಗೂ, ನಿಮ್ಮ ದಾಸದಾಸಿಯರಿಗೂ, ಕೂಲಿಯವರಿಗೂ,


ನಿಮ್ಮ ಭೂಮಿಯು ಫಲವತ್ತಾಗುವುದು, ನೀವು ಸಮೃದ್ಧಿಯಾಗಿ ಊಟಮಾಡುವಿರಿ ಮತ್ತು ಆ ದೇಶದಲ್ಲಿ ನೀವು ನಿರ್ಭಯವಾಗಿ ವಾಸಮಾಡುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು