Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 “‘ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿ ತನ್ನ ಭೂಮಿಯನ್ನು ಏನಾದರೂ ಮಾರಿಕೊಂಡರೆ ಅವನ ಸಮೀಪವಾದ ಬಂಧುವು ಅದನ್ನು ಬಿಡಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ನಿಮ್ಮ ಸ್ವಜನರಲ್ಲಿ ಒಬ್ಬನು ಬಡವನಾಗಿ ತನ್ನ ಭೂಮಿಯನ್ನು ಏನಾದರು ಮಾರಿಕೊಂಡರೆ ಅವನ ಸಮೀಪ ನೆಂಟನು ಇದನ್ನು ಬಿಡಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿ ತನ್ನ ಭೂಸ್ಥಿತಿಯಲ್ಲಿ ಏನಾದರೂ ಮಾರಿಕೊಂಡರೆ ಅವನ ಸಮೀಪವಾದ ಬಂಧುವು ಅದನ್ನು ಬಿಡಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನಿಮ್ಮ ದೇಶದಲ್ಲಿ ಒಬ್ಬನು ತನ್ನ ಆಸ್ತಿಯನ್ನು ಮಾರುವಷ್ಟು ಬಡವನಾದರೆ ಅವನ ಹತ್ತಿರದ ಸಂಬಂಧಿಯು ತನ್ನ ಸಂಬಂಧಿಯ ಆಸ್ತಿಯನ್ನು ಮರಳಿ ಕೊಂಡುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 “ ‘ನಿಮ್ಮ ಸಹೋದರನು ಬಡತನದ ನಿಮಿತ್ತವಾಗಿ ತನ್ನ ಸೊತ್ತಿನಲ್ಲಿ ಸ್ವಲ್ಪವನ್ನು ಮಾರಿದರೆ, ಅವನ ಬಂಧುವು ಅದನ್ನು ಬಿಡಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:25
14 ತಿಳಿವುಗಳ ಹೋಲಿಕೆ  

ಆಗ ನವೊಮಿಯು “ಸತ್ತವರಿಗೂ, ಬದುಕುವವರಿಗೂ ಮಾಡಿದ ವಾಗ್ದಾನಗಳನ್ನು ನೆರವೇರಿಸುವ ಯೆಹೋವನು ಆತನನ್ನು ಆಶೀರ್ವದಿಸಲಿ” ಎಂದು ಹರಸಿ, “ಆ ಮನುಷ್ಯನು ನಮಗೆ ಹತ್ತಿರದ ನೆಂಟ, ಪೋಷಿಸಬೇಕಾದವನು” ಎಂದು ರೂತಳಿಗೆ ತಿಳಿಸಿದಳು.


ನಾನು ಸಮೀಪಬಂಧುವೆಂಬುದು ನಿಜ; ಆದರೂ ನನಗಿಂತ ಸಮೀಪ ಬಂಧು ಒಬ್ಬನಿದ್ದಾನೆ.


ಹೆದರಿ ಆಕೆಯನ್ನು “ನೀನು ಯಾರು?” ಎಂದು ಕೇಳಲು ಆಕೆಯು “ನಾನು ನಿನ್ನ ದಾಸಿಯಾದ ರೂತಳು, ನೀನು ಸಮೀಪಬಂಧುವಾಗಿರುವುದರಿಂದ ನಿನ್ನ ಹೊದಿಕೆಯ ಅಂಚನ್ನು ನನ್ನ ಮೇಲೆ ಹಾಕು” ಅಂದಳು.


ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದರೂ ತನ್ನ ಬಡತನದ ಮುಖಾಂತರ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಆತನು ಬಡವನಾದನು.


ಈಗ ನೀನು ಯಾರ ಹೆಣ್ಣಾಳುಗಳ ಜೊತೆಯಲ್ಲಿರುತ್ತೀಯೋ ಆ ಬೋವಜನು ನಮ್ಮ ಸಂಬಂಧಿಕನಲ್ಲವೇ? ಅವನು ಈ ರಾತ್ರಿ ಕಣದಲ್ಲಿ ಜವೆಗೋದಿಯನ್ನು ತೂರುವನು.


ನಿಮ್ಮಲ್ಲಿ ಮತ್ತೊಬ್ಬನ ಸ್ವತ್ತಿನ ಭೂಮಿ ನಿಮ್ಮ ವಶಕ್ಕೆ ಬಂದರೆ ಅದನ್ನು ಈಡುಕೊಟ್ಟು ಬಿಡಿಸಿಕೊಳ್ಳುವ ಅಧಿಕಾರವು ಕೊಟ್ಟವನಿಗೆ ಇರಬೇಕು.


ಬಿಡಿಸುವ ಬಂಧುವು ಇಲ್ಲದೆಹೋದ ಪಕ್ಷಕ್ಕೆ ಮಾರಿದವನೇ ಸ್ಥಿತಿವಂತನಾಗಿ ಅದನ್ನು ಬಿಡಿಸಿಕೊಳ್ಳುವಷ್ಟು ಹಣವನ್ನು ಸಂಪಾದಿಸಿದರೆ,


ಆಗ ಅವನು ಆ ಸಮೀಪಬಂಧುವಿಗೆ, “ಮೋವಾಬ್ ದೇಶದಿಂದ ಹಿಂದಿರುಗಿ ಬಂದಿರುವ ನವೊಮಿಯು ನಮ್ಮ ಸಹೋದರನಾದ ಎಲೀಮೆಲೆಕನ ಪಾಲಿಗೆ ಬಂದ ಹೊಲವನ್ನು ಮಾರಬೇಕೆಂದಿದ್ದಾಳೆ.


“‘ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿದ್ದು ನಿಮ್ಮ ನಡುವೆ ಮನೆಮಾಡಿಕೊಂಡ ಧನವಂತನಾದ ಅನ್ಯದೇಶದವನಿಗಾಗಲಿ ಅಥವಾ ಅವನಿಗೆ ಸೇರಿದವನಿಗಾಗಲಿ ತನ್ನನ್ನು ಮಾರಿಕೊಂಡಿದ್ದರೂ ಅವನಿಗೆ ಬಿಡುಗಡೆಯಾಗಬಹುದು.


“‘ಯಾವನಾದರೂ ಕ್ರಯಕ್ಕೆ ತೆಗೆದುಕೊಂಡ ಹೊಲವನ್ನು ಅಂದರೆ ಪಿತ್ರಾರ್ಜಿತ ಭೂಮಿಗೆ ಸೇರದಿರುವ ಹೊಲವನ್ನು ಯೆಹೋವನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು