ಯಾಜಕಕಾಂಡ 25:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅವನು ಆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾರದೆ ಹೋದರೆ ಅದು ಜೂಬಿಲಿ ಸಂವತ್ಸರದ ತನಕ ಕೊಂಡುಕೊಂಡವನ ವಶದಲ್ಲೇ ಇರಬೇಕು. ಜೂಬಿಲಿ ವರ್ಷದಲ್ಲಿ ಅದು ಬಿಡುಗಡೆಯಾಗುವುದು; ಆಗ ಆ ಭೂಮಿ ಪುನಃ ಮಾರಿದವನ ವಶಕ್ಕೆ ಬರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಅವನು ಆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗದೆ ಹೋದರೆ ಅದು ಜೂಬಿಲಿ ಸಂವತ್ಸರದ ತನಕ ಕೊಂಡುಕೊಂಡವನ ವಶದಲ್ಲೇ ಇರಬೇಕು. ಜೂಬಿಲಿ ವರ್ಷದಲ್ಲಿ ಅದು ಬಿಡುಗಡೆಯಾಗುವುದು. ಆಗ ಆ ಭೂಮಿ ಮರಳಿ ಅವನ ವಶಕ್ಕೆ ಬರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅವನು ಆ ಭೂವಿುಯನ್ನು ಸ್ವಾಧೀನಪಡಿಸಿಕೊಳ್ಳಲಾರದೆ ಹೋದರೆ ಅದು ಜೂಬಿಲಿ ಸಂವತ್ಸರದ ತನಕ ಕೊಂಡುಕೊಂಡವನ ವಶದಲ್ಲೇ ಇರಬೇಕು. ಜೂಬಿಲಿ ವರುಷದಲ್ಲಿ ಅದು ಬಿಡುಗಡೆಯಾಗುವದು; ಆಗ ಆ ಭೂವಿು ತಿರಿಗಿ ಅವನ ವಶಕ್ಕೆ ಬರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಆದರೆ ಭೂಮಿಯನ್ನು ಮರಳಿ ಕೊಂಡುಕೊಳ್ಳಲು ಬೇಕಾದಷ್ಟು ಹಣ ಅವನಿಗೆ ದೊರಕದಿದ್ದರೆ, ಅವನು ಆ ಭೂಮಿಯನ್ನು ಯಾರಿಗೆ ಮಾರಿದ್ದಾನೋ ಅವನ ವಶದಲ್ಲಿ ಜ್ಯೂಬಿಲಿ ವರ್ಷದವರೆಗೆ ಇಡಬೇಕು. ಬಳಿಕ ಆ ವಿಶೇಷ ಬಿಡುಗಡೆಯ ಕಾಲದಲ್ಲಿ ಭೂಮಿಯು ಮೊದಲಿನ ಯಜಮಾನನ ಕುಟುಂಬಕ್ಕೆ ಮರಳಿ ಹೋಗುವುದು. ಹೀಗಾಗಿ ಆಸ್ತಿಯು ಮತ್ತೆ ಅದರ ಸರಿಯಾದ ಕುಟುಂಬಕ್ಕೆ ಸೇರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ತಿರುಗಿ ಸಲ್ಲಿಸುವುದಕ್ಕೆ ಅವನಿಗೆ ಆಗದಿದ್ದರೆ, ಅವನು ಮಾರಿದ್ದು ಜೂಬಿಲಿಯ ವರ್ಷದವರೆಗೆ ಕೊಂಡುಕೊಂಡವನ ಕೈಯಲ್ಲಿ ಇರಬೇಕು ಮತ್ತು ಸಂಭ್ರಮದ ವರ್ಷದಲ್ಲಿ ಅದು ಬಿಡುಗಡೆಯಾಗಬೇಕು, ಅವನು ತನ್ನ ಸೊತ್ತನ್ನು ಪಡೆಯಬೇಕು. ಅಧ್ಯಾಯವನ್ನು ನೋಡಿ |