Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಪೌಳಿಗೋಡೆಯುಳ್ಳ ಪಟ್ಟಣದಲ್ಲಿರುವ ಆ ಮನೆ ಒಂದು ವರ್ಷದೊಳಗಾಗಿ ಬಿಡಿಸಿಕೊಳ್ಳಲು ಸಾಧ್ಯವಾಗದೆ ಹೋದರೆ, ಅದು ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗಿ ಮಾರಿದವನಿಗೆ ಮತ್ತು ಅವನ ಸಂತತಿಯವರಿಗೂ ಶಾಶ್ವತವಾಗಿ ನಿಲ್ಲುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಕೋಟೆಯಿರುವ ಪಟ್ಟಣದ ಆ ಮನೆಯನ್ನು ಒಂದು ವರ್ಷದೊಳಗೆ ಬಿಡಿಸಲಾಗದೆ ಹೋದರೆ ಅದು ಜೂಬಿಲಿ ಸಂವತ್ಸರದಲ್ಲೂ ಬಿಡುಗಡೆ ಆಗದೆ ಕ್ರಯಕೊಟ್ಟವನಿಗೂ ಅವನ ಸಂತತಿಯವರಿಗೂ ಶಾಶ್ವತವಾಗಿ ಉಳಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಪೌಳಿ ಗೋಡೆಯುಳ್ಳ ಪಟ್ಟಣದಲ್ಲಿರುವ ಆ ಮನೆ ಒಂದು ವರುಷದೊಳಗಾಗಿ ಬಿಡಿಸಲ್ಪಡದೆ ಹೋದರೆ ಅದು ಜೂಬಿಲಿ ಸಂವತ್ಸರದಲ್ಲಿಯೂ ಬಿಡುಗಡೆಯಾಗದೆ ಕ್ರಯಕೊಟ್ಟವನಿಗೂ ಅವನ ಸಂತತಿಯವರಿಗೂ ಶಾಶ್ವತವಾಗಿ ನಿಲ್ಲುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆದರೆ ಮಾಲಿಕನು ಒಂದು ವರ್ಷ ಪೂರ್ಣಗೊಳ್ಳುವ ಮೊದಲು ಮನೆಯನ್ನು ಮರಳಿ ಕೊಂಡುಕೊಳ್ಳದಿದ್ದರೆ, ಆಗ ಪೌಳಿಗೋಡೆಯುಳ್ಳ ಪಟ್ಟಣದಲ್ಲಿರುವ ಮನೆಯು ಅದನ್ನು ಕೊಂಡುಕೊಂಡವನಿಗೂ ಅವನ ಸಂತತಿಯವರಿಗೂ ಸೇರುವುದು. ಮನೆಯು ಜ್ಯೂಬಿಲಿ ವರ್ಷದಲ್ಲಿ ಅದರ ಮೊದಲಿನ ಯಜಮಾನನಿಗೆ ಸೇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆದರೆ ವರ್ಷವು ಪೂರ್ಣವಾಗುವುದರೊಳಗಾಗಿ ಅದು ಬಿಡುಗಡೆಯಾಗದಿದ್ದರೆ, ಗೋಡೆಯ ಪಟ್ಟಣದೊಳಗಿರುವ ಆ ಮನೆಯು ಅದನ್ನು ಕೊಂಡುಕೊಂಡವನಿಗೂ ಅವನ ಸಂತತಿಯವರಿಗೂ ಶಾಶ್ವತವಾಗಿ ನಿಲ್ಲುವುದು. ಜೂಬಿಲಿಯ ವರ್ಷದಲ್ಲಿ ಅದು ಬಿಡುಗಡೆಯಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:30
3 ತಿಳಿವುಗಳ ಹೋಲಿಕೆ  

ಅವನು ಆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾರದೆ ಹೋದರೆ ಅದು ಜೂಬಿಲಿ ಸಂವತ್ಸರದ ತನಕ ಕೊಂಡುಕೊಂಡವನ ವಶದಲ್ಲೇ ಇರಬೇಕು. ಜೂಬಿಲಿ ವರ್ಷದಲ್ಲಿ ಅದು ಬಿಡುಗಡೆಯಾಗುವುದು; ಆಗ ಆ ಭೂಮಿ ಪುನಃ ಮಾರಿದವನ ವಶಕ್ಕೆ ಬರುವುದು.


“‘ಯಾವನಾದರೂ ಪೌಳಿ ಗೋಡೆಯುಳ್ಳ ಪಟ್ಟಣದಲ್ಲಿರುವ ಮನೆಯನ್ನು ಮಾರಿದರೆ ಅದನ್ನು ಮಾರಿದ ದಿನ ಮೊದಲುಗೊಂಡು ಒಂದು ವರ್ಷ ಪೂರ್ತಿಯಾಗುವುದರೊಳಗೆ ಈಡುಕೊಟ್ಟು ಬಿಡಿಸಬಹುದು; ಪೂರಾ ಒಂದು ವರ್ಷದ ತನಕ ಅದನ್ನು ಬಿಡಿಸುವ ಅಧಿಕಾರವು ಅವನಿಗಿರುವುದು.


ಪೌಳಿಗೋಡೆಯಿಲ್ಲದ ಊರುಗಳಲ್ಲಿರುವ ಮನೆಗಳು ಬಯಲಿನ ಹೊಲಗಳಂತೆ ಎಣಿಸಲ್ಪಡಬೇಕು; ಅವುಗಳನ್ನು ಬಿಡಿಸುವ ಅಧಿಕಾರವಿದ್ದು, ಜೂಬಿಲಿ ಸಂವತ್ಸರದಲ್ಲಿ ಅವು ಬಿಡುಗಡೆಯಾಗುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು