Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಅವರು ತಮ್ಮ ಪಟ್ಟಣಗಳಿಗೆ ಸೇರಿರುವ ಹುಲ್ಲುಗಾವಲನ್ನು ಮಾರಲೇಬಾರದು. ಅವು ಅವರಿಗೆ ಶಾಶ್ವತವಾದ ಸ್ವತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಅವರು ತಮ್ಮ ಪೇಟೆಗಳಿಗೆ ಸೇರಿರುವ ಹುಲ್ಲುಗಾವಲನ್ನು ಮಾರಲೇಕೂಡದು. ಅದು ಅವರಿಗೆ ಶಾಶ್ವತವಾದ ಸೊತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಅವರು ತಮ್ಮ ಪಟ್ಟಣಗಳಿಗೆ ಸೇರಿರುವ ಹುಲ್ಲುಗಾವಲನ್ನು ಮಾರಲೇಕೂಡದು. ಅವು ಅವರಿಗೆ ಶಾಶ್ವತವಾದ ಸ್ವಾಸ್ತ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಅಲ್ಲದೆ ಲೇವಿಯರ ಪಟ್ಟಣಗಳ ಸುತ್ತಲಿರುವ ಹೊಲಗಳನ್ನು ಮತ್ತು ಹುಲ್ಲುಗಾವಲುಗಳನ್ನು ಮಾರಬಾರದು. ಆ ಹೊಲಗಳು ಎಂದೆಂದಿಗೂ ಲೇವಿಯರಿಗೆ ಸೇರಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆದರೆ ಅವರ ಪಟ್ಟಣಗಳ ಉಪನಗರಗಳ ಹೊಲವನ್ನು ಮಾರಬಾರದು. ಏಕೆಂದರೆ ಅದು ಅವರಿಗೆ ಶಾಶ್ವತವಾದ ಸೊತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:34
7 ತಿಳಿವುಗಳ ಹೋಲಿಕೆ  

“‘ಭೂಮಿಯನ್ನು ಶಾಶ್ವತವಾಗಿ ಮಾರಬಾರದು. ಏಕೆಂದರೆ ಆ ಭೂಮಿ ನನ್ನದು; ನೀವಾದರೋ ಪರದೇಶದವರು ಹಾಗೂ ಪ್ರವಾಸಿಗಳಾಗಿ ನನ್ನ ಆಶ್ರಯದಲ್ಲಿ ಇಳಿದುಕೊಂಡವರು.


ಲೇವಿಯರೊಳಗೆ ಯಾರೂ ಅದನ್ನು ಬಿಡಿಸದೆಹೋದರೆ, ಲೇವಿಯರ ಸ್ವಂತವಾಗಿರುವ ಅಂತಹ ಪಟ್ಟಣಗಳಲ್ಲಿ ಮಾರಲ್ಪಟ್ಟ ಮನೆ ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗುವುದು. ಲೇವಿಯರ ಪಟ್ಟಣಗಳಲ್ಲಿನ ಮನೆಗಳು ಇಸ್ರಾಯೇಲರ ಮಧ್ಯದಲ್ಲಿರುವ ಅವರ ಸ್ವಾಸ್ತ್ಯವಷ್ಡೆ.


ಇದಲ್ಲದೆ, ಆರೋನನ ಸಂತಾನದವರಾದ ಯಾಜಕರು ಆಯಾ ಪಟ್ಟಣಗಳಿಗೆ ಸೇರಿದ ಹುಲ್ಲುಗಾವಲುಗಳಲ್ಲಿದ್ದವರಿಗೆ ಪಾಲುಕೊಡುತ್ತಿದ್ದರು. ಇವರು ಯಾಜಕ ಸಂತಾನದ ಎಲ್ಲಾ ಗಂಡಸರಿಗೂ, ಪಟ್ಟಿಯಲ್ಲಿ ಲಿಖಿತರಾದ ಎಲ್ಲಾ ಲೇವಿಯರಿಗೂ, ಸಿಕ್ಕತಕ್ಕ ಭಾಗಗಳನ್ನು ಹಂಚಿಕೊಡುವುದಕ್ಕೆ ಹೆಸರೆಸರಾಗಿ ನೇಮಿಸಲ್ಪಟ್ಟರೂ ಪುರುಷರಿದ್ದರು.


ಮತ್ತು ಇಪ್ಪತ್ತೈದು ಸಾವಿರ ಮೊಳ ಉದ್ದದ ಮತ್ತು ಹತ್ತು ಸಾವಿರ ಮೊಳ ಅಗಲದ ಒಂದು ಪಾಲು ಯಾಜಕರ ಪಾಲಿನ ಮೇರೆಯ ಪಕ್ಕದಲ್ಲಿ ಲೇವಿಯರಿಗೆ ಸಲ್ಲತಕ್ಕದ್ದು. ಈ ಎರಡು ಪಾಲುಗಳ ಒಟ್ಟು ಅಳತೆ ಎಷ್ಟೆಂದರೆ ಉದ್ದವು ಇಪ್ಪತ್ತೈದು ಸಾವಿರ ಮೊಳ ಮತ್ತು ಅಗಲವು ಇಪ್ಪತ್ತು ಸಾವಿರ ಮೊಳವಾಗಿದೆ.


ಆ ಕ್ಷೇತ್ರವು ಯೆಹೋವನಿಗೆ ಮೀಸಲಾದುದರಿಂದ ಅದರಲ್ಲಿ ಯಾವ ಭಾಗವನ್ನೂ ಮಾರಬಾರದು ಮತ್ತು ಬದಲಾಯಿಸಲೂಬಾರದು. ದೇಶದ ಆ ಪ್ರಥಮ ಫಲವನ್ನು ಯಾರಿಗೂ ಕೊಡಬಾರದು. ಏಕೆಂದರೆ ಅದು ಯೆಹೋವನಿಗೆ ಪರಿಶುದ್ಧವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು