Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ನೀವು ಅವನಿಗೆ ಹಣವನ್ನು ಸಾಲವಾಗಿ ಕೊಟ್ಟರೆ ಬಡ್ಡಿಯನ್ನು ಕೇಳಬಾರದು, ದವಸಕೊಟ್ಟರೆ ಲಾಭವನ್ನು ಕೇಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ನೀವು ಅವನಿಗೆ ಸಾಲಕೊಟ್ಟರೆ ಬಡ್ಡಿಯನ್ನು ಕೇಳಬೇಡಿ, ದವಸಧಾನ್ಯ ಕೊಟ್ಟರೆ ಲಾಭ ಕೇಳಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ನೀವು ಅವನಿಗೆ ಸಾಲಕೊಟ್ಟರೆ ಬಡ್ಡಿಯನ್ನು ಕೇಳಬಾರದು, ದವಸಕೊಟ್ಟರೆ ಲಾಭವನ್ನು ಕೇಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ನೀವು ಅವನಿಗೆ ಸಾಲಕೊಡುವ ಹಣದ ಮೇಲೆ ಬಡ್ಡಿಯನ್ನು ಹೊರಿಸಬಾರದು. ನೀವು ಅವನಿಗೆ ಮಾರುವ ಆಹಾರಪದಾರ್ಥಗಳಿಂದ ಲಾಭವನ್ನು ಗಳಿಸಲು ಪ್ರಯತ್ನಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ನೀನು ಅವನಿಗೆ ಹಣವನ್ನು ಸಾಲವಾಗಿ ಕೊಟ್ಟರೆ ಬಡ್ಡಿಯನ್ನು ಕೇಳಬಾರದು, ನಿನ್ನ ಆಹಾರವನ್ನು ಲಾಭಕ್ಕಾಗಿ ಸಾಲವಾಗಿ ಕೊಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:37
5 ತಿಳಿವುಗಳ ಹೋಲಿಕೆ  

ನೀವು ಅವನಿಂದ ಬಡ್ಡಿಯನ್ನಾಗಲಿ ಅಥವಾ ಲಾಭವನ್ನಾಗಲಿ ತೆಗೆದುಕೊಳ್ಳಬಾರದು; ಅವನು ನಿಮ್ಮ ಬಳಿಯಲ್ಲಿ ಬದುಕುವಂತೆ ನೀವು ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕು.


ನಾನು ನಿಮ್ಮ ದೇವರಾದ ಯೆಹೋವನು; ನಿಮಗೆ ದೇವರಾಗುವುದಕ್ಕೂ ಮತ್ತು ನಿಮಗೆ ಕಾನಾನ್ ದೇಶವನ್ನು ಕೊಡುವುದಕ್ಕೂ ನಿಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿದವನು ನಾನೇ.


ಪ್ರಜೆಗಳು ಯಾಜಕ, ದಾಸ ಯಜಮಾನ, ದಾಸಿ, ಯಜಮಾನಿ, ಕೊಳ್ಳುವವನು, ಮಾರುವವನು, ಸಾಲ ಕೊಡುವವನು ಸಾಲ ಪಡೆಯುವವನು, ಬಡ್ಡಿ ಪಡೆಯುವವನು ಬಡ್ಡಿ ತೆರುವವನು, ಇವರೆಲ್ಲರಿಗೂ ಒಂದೇ ಗತಿಯಾಗುವುದು.


ನನ್ನ ತಾಯೀ, ನನ್ನ ಗತಿಯನ್ನು ಏನು ಹೇಳಲಿ! ನಿನ್ನ ಗರ್ಭದಿಂದ ಬಂದ ನಾನು ಲೋಕದವರೆಲ್ಲರಿಗೆ ಜಗಳಗಂಟಿಗನೂ, ವ್ಯಾಜ್ಯಗಾರನೂ ಆಗಿದ್ದೇನಲ್ಲಾ. ನಾನು ಹಣವನ್ನು ಬಡ್ಡಿಗೆ ಕೊಟ್ಟವನಲ್ಲ, ತೆಗೆದುಕೊಂಡವನಲ್ಲ, ಆದರೂ ನನ್ನನ್ನು ಎಲ್ಲರೂ ನಿಂದಿಸುತ್ತಾರೆ.


ನಿನ್ನವರು ರಕ್ತ ಸುರಿಸುವುದಕ್ಕೆ ಲಂಚ ತೆಗೆದುಕೊಂಡಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ, ದೋಚಿಕೊಂಡು ನನ್ನನ್ನು ಮರೆತೇ ಬಿಟ್ಟಿದ್ದಾರೆ ಇದು ಕರ್ತನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು