ಯಾಜಕಕಾಂಡ 25:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 “‘ಅದಲ್ಲದೆ ಏಳು ವರ್ಷಕ್ಕೊಂದರಂತೆ ಏಳು ಸಬ್ಬತ್ ವರ್ಷಗಳನ್ನು ಲೆಕ್ಕಿಸಬೇಕು. ಆ ಏಳು ಸಬ್ಬತ್ ಸಂವತ್ಸರಗಳ ಕಾಲವು ಅಂದರೆ ನಲ್ವತ್ತೊಂಭತ್ತು ವರ್ಷಗಳು ಕಳೆಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 “ಅದಲ್ಲದೆ, ಏಳು ವರ್ಷಕ್ಕೆ ಒಂದರಂತೆ ಏಳು ಸಬ್ಬತ್ ವರ್ಷಗಳನ್ನು ಎಣಿಸಬೇಕು. ಆ ಏಳು ಸಬ್ಬತ್ ಸಂವತ್ಸರಗಳ ಕಾಲ, ಅಂದರೆ ನಾಲ್ವತ್ತೊಂಬತ್ತು ವರ್ಷಗಳು ಕಳೆದ ಮೇಲೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅದಲ್ಲದೆ ಏಳು ವರುಷಕ್ಕೊಂದರಂತೆ ಏಳು ಸಬ್ಬತ್ ವರುಷಗಳನ್ನು ಲೆಕ್ಕಿಸಬೇಕು. ಆ ಏಳು ಸಬ್ಬತ್ ಸಂವತ್ಸರಗಳ ಕಾಲವು ಅಂದರೆ ನಾಲ್ವತ್ತೊಂಭತ್ತು ವರುಷಗಳು ಕಳೆದ ಮೇಲೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 “ಅದಲ್ಲದೆ, ಏಳು ವರ್ಷಗಳ ಏಳು ಗುಂಪುಗಳನ್ನು ಲೆಕ್ಕಿಸಬೇಕು. ಈ ಏಳು ಗುಂಪುಗಳು ಸೇರಿ ನಲವತ್ತೊಂಭತ್ತು ವರ್ಷಗಳಾಗಿರುವವು. ಆ ಸಮಯದಲ್ಲಿ ಭೂಮಿಗೆ ಏಳು ವರ್ಷಗಳ ವಿಶ್ರಾಂತಿಯಿರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 “ ‘ಇದಲ್ಲದೆ ಏಳು ವರ್ಷಕ್ಕೆ ಒಂದರಂತೆ ಏಳು ಸಬ್ಬತ್ ವರ್ಷಗಳನ್ನು ಎಣಿಸಬೇಕು. ಆ ಏಳು ಸಬ್ಬತ್ ವರ್ಷಗಳ ಕಾಲವು ಒಟ್ಟು ನಾಲ್ವತ್ತೊಂಬತ್ತು ವರ್ಷಗಳಾಗಿರುವುವು. ಅಧ್ಯಾಯವನ್ನು ನೋಡಿ |
ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.