Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಮೇಲೆ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ನಿಮ್ಮ ದೇಶದಲ್ಲೆಲ್ಲಾ ಗಟ್ಟಿಯಾಗಿ ಕೊಂಬನ್ನು ಊದಿಸಬೇಕು. ಸಕಲ ದೋಷಪರಿಹಾರಕವಾದ ಆ ದಿನದಲ್ಲೇ ನಿಮ್ಮ ದೇಶದಲ್ಲೆಲ್ಲಾ ಆ ಕೊಂಬನ್ನು ಊದಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಏಳನೆಯ ತಿಂಗಳಿನ ಹತ್ತನೆಯ ದಿವಸ ನಿಮ್ಮ ನಾಡಿನಲ್ಲೆಲ್ಲಾ ಕೊಂಬೂದಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಏಳನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ನಿಮ್ಮ ದೇಶದಲ್ಲೆಲ್ಲಾ ಕೊಂಬಿನ ಧ್ವನಿಯನ್ನು ಮಾಡಿಸಬೇಕು; ಸಕಲ ದೋಷಪರಿಹಾರಕವಾದ ಆ ದಿನದಲ್ಲೇ ನಿಮ್ಮ ದೇಶದಲ್ಲೆಲ್ಲಾ ಆ ಕೊಂಬಿನ ಧ್ವನಿಯನ್ನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದೋಷಪರಿಹಾರಕ ದಿನದಲ್ಲಿ ಅಂದರೆ ಐವತ್ತನೆಯ ವರ್ಷದ ಏಳನೆಯ ತಿಂಗಳ ಹತ್ತನೆಯ ದಿನದಲ್ಲಿ ದೇಶದಲ್ಲೆಲ್ಲಾ ಕೊಂಬನ್ನೂದಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇದಾದ ಮೇಲೆ ಏಳನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಐವತ್ತನೆಯ ವಾರ್ಷಿಕೋತ್ಸವಕ್ಕೆ ತುತೂರಿಯನ್ನು ಊದಿಸಬೇಕು. ಪ್ರಾಯಶ್ಚಿತ್ತದ ದಿನದಲ್ಲಿ ನಿಮ್ಮ ದೇಶದ ಎಲ್ಲಾ ಕಡೆಗಳಲ್ಲಿ ತುತೂರಿಯನ್ನು ಊದಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:9
20 ತಿಳಿವುಗಳ ಹೋಲಿಕೆ  

“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನಿಮಗೆ ಸಂಪೂರ್ಣ ವಿರಾಮವಿರಬೇಕು. ಅದನ್ನು ತುತ್ತೂರಿಗಳ ಧ್ವನಿಯಿಂದ ಪ್ರಕಟಪಡಿಸಬೇಕು. ದೇವಾರಾಧನೆಗಾಗಿ ಸಭೆಸೇರಬೇಕು.


“ಅದೇ ಏಳನೆಯ ತಿಂಗಳಿನ ಹತ್ತನೆಯ ದಿನ ದೋಷಪರಿಹಾರಕ ದಿನ. ಅದರಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು; ನೀವು ಪೂರ್ಣವಾಗಿ ಉಪವಾಸಮಾಡಬೇಕು ಮತ್ತು ಯೆಹೋವನ ಸನ್ನಿಧಿಯಲ್ಲಿ ಹೋಮವನ್ನು ಮಾಡಬೇಕು.


ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಘೋಷಿತವಾದದಲ್ಲದೆ, ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು. ಆದುದರಿಂದ ಆ ವಿಷಯದಲ್ಲಿ ನಾವು ಏನನ್ನೂ ಹೇಳಬೇಕಾಗಿಲ್ಲ.


ನಾನು ಯೆರೂಸಲೇಮ್ ಮೊದಲುಗೊಂಡು ಇಲ್ಲುರಿಕ ಸೀಮೆಯ ಸುತ್ತಮುತ್ತ ಪ್ರಯಾಣಿಸಿ ಕ್ರಿಸ್ತನ ಸುವಾರ್ತೆಯ ಸಾರೋಣವನ್ನು ಪೂರೈಸಿದ್ದೇನೆ.


ಆದರೂ “ಅವರಿಗೆ ಕೇಳಿಸಲಿಲ್ಲವೇನೋ?” ಎಂದು ಹೇಳುತ್ತೇನೆ. ಹೌದು ನಿಶ್ಚಯವಾಗಿ ಕೇಳಿಸಿಕೊಂಡಿದ್ದರು. “ಸಾರುವವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿದವು.”


ಉತ್ಸಾಹಧ್ವನಿಯನ್ನು ತಿಳಿದಿರುವ ಜನರು ಧನ್ಯರು; ಯೆಹೋವನೇ, ಅವರು ನಿನ್ನ ಮುಖಪ್ರಕಾಶದಲ್ಲಿ ಸಂಚರಿಸುತ್ತಾರೆ.


ಇಸ್ರಾಯೇಲರ ಜೂಬಿಲಿ ಸಂವತ್ಸರವು ಬಂದಾಗ ಅವರ ಸ್ವತ್ತು ಅವರು ಸೇರಿಕೊಳ್ಳುವ ಕುಲದ ಸ್ವತ್ತಿಗೆ ಕೂಡಿಕೊಳ್ಳುವುದರಿಂದ ನಮ್ಮ ಕುಲದಿಂದ ತೆಗೆಯಲ್ಪಡುವುದು” ಎಂದು ಹೇಳಿದರು.


ಇದಲ್ಲದೆ ನೀವು ಉತ್ಸವ ಕಾಲಗಳಲ್ಲಿಯು, ಹಬ್ಬಗಳಲ್ಲಿಯು, ಅಮಾವಾಸ್ಯೆಗಳಲ್ಲಿಯು ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಸಮರ್ಪಿಸುವಾಗ ಆ ತುತ್ತೂರಿಗಳನ್ನು ಊದಿಸಬೇಕು. ಆ ತುತ್ತೂರಿಯ ಧ್ವನಿಯು ನಿಮ್ಮನ್ನು ನಿಮ್ಮ ದೇವರ ಜ್ಞಾಪಕಕ್ಕೆ ತರುವುದು, ನಾನೇ ನಿಮ್ಮ ದೇವರಾದ ಯೆಹೋವನು.”


ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಮಾರಿದವನಿಗೆ ಅಂದರೆ ಯಾರ ಪಿತ್ರಾರ್ಜಿತ ಭೂಮಿಗೆ ಸೇರಿದೆಯೋ ಅವನಿಗೆ ಪುನಃ ಬರಬೇಕು.


ಅವನು ಜೂಬಿಲಿ ಸಂವತ್ಸರದಿಂದ ಆ ಹೊಲವನ್ನು ಪ್ರತಿಷ್ಠಿಸಿದರೆ ಈ ಕ್ರಯ ಸ್ಥಿರವಾಗಿರುವುದು.


ಏಕೆಂದರೆ ನೀವು ಪರಿಶುದ್ಧರಾಗುವುದಕ್ಕಾಗಿ ಈ ದಿನದಲ್ಲಿ ನಿಮಗೋಸ್ಕರ ದೋಷಪರಿಹಾರವಾಗುವುದು, ಯೆಹೋವನ ದೃಷ್ಟಿಯಲ್ಲಿ ನಿಮ್ಮ ಎಲ್ಲಾ ದೋಷಗಳು ನಿವಾರಣೆಯಾಗುವವು.


“ಆರೋನನು ಮಹಾಪವಿತ್ರಸ್ಥಾನ, ದೇವದರ್ಶನದ ಗುಡಾರ, ಯಜ್ಞವೇದಿ ಇವುಗಳಿಗೋಸ್ಕರ ದೋಷಪರಿಹಾರ ಮಾಡಿ ಮುಗಿಸಿದ ಮೇಲೆ ಆ ಸಜೀವವಾದ ಹೋತವನ್ನು ತರಿಸಬೇಕು.


“‘ಅದಲ್ಲದೆ ಏಳು ವರ್ಷಕ್ಕೊಂದರಂತೆ ಏಳು ಸಬ್ಬತ್ ವರ್ಷಗಳನ್ನು ಲೆಕ್ಕಿಸಬೇಕು. ಆ ಏಳು ಸಬ್ಬತ್ ಸಂವತ್ಸರಗಳ ಕಾಲವು ಅಂದರೆ ನಲ್ವತ್ತೊಂಭತ್ತು ವರ್ಷಗಳು ಕಳೆಯಬೇಕು.


ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಮಂಜೂಷದ ಮುಂದೆ ನಡೆಯಲಿ. ಏಳನೆಯ ದಿನ ನೀವು ಪಟ್ಟಣವನ್ನು ಏಳು ಸಾರಿ ಸುತ್ತಬೇಕು; ಯಾಜಕರು ಕೊಂಬುಗಳನ್ನು ಊದಬೇಕು.


ಆ ದಿನದಲ್ಲಿ ದೊಡ್ಡ ಕೊಂಬನ್ನೂದಲು ಅಶ್ಶೂರ ದೇಶದಲ್ಲಿ ಹಾಳಾದವರೂ, ಐಗುಪ್ತದಲ್ಲಿ ದೇಶಭ್ರಷ್ಟರಾದವರೂ ಬಂದು ಪರಿಶುದ್ಧ ಪರ್ವತವಾದ ಯೆರೂಸಲೇಮಿನಲ್ಲಿ ಯೆಹೋವನನ್ನು ಆರಾಧಿಸುವರು.


“ಸ್ವದೇಶಸ್ಥರಾದ ನೀವೂ ಮತ್ತು ನಿಮ್ಮಲ್ಲಿ ವಾಸವಾಗಿರುವ ಅನ್ಯದೇಶದವರು, ಎಲ್ಲರೂ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸಕಲ ವಿಧವಾದ ಕೆಲಸಗಳನ್ನು ಬಿಟ್ಟು ಉಪವಾಸಮಾಡಿ ನಿಮ್ಮ ಆತ್ಮಗಳನ್ನು ಕುಂದಿಸಿಕೊಳ್ಳಬೇಕು. ಇದು ನಿಮಗೆ ಶಾಶ್ವತವಾದ ನಿಯಮ.


ಯಾವಾಗಲೂ ನಿನ್ನ ನಾಮದಲ್ಲಿ ಆನಂದಿಸುತ್ತಾರೆ; ನಿನ್ನ ನೀತಿಯಿಂದ ಏಳಿಗೆ ಹೊಂದುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು