Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾನು ನಿಮ್ಮ ಮೇಲೆ ಉಗ್ರಕೋಪಗೊಳ್ಳುವುದರಿಂದ ನೀವು ನಿಮ್ಮ ಶತ್ರುಗಳ ಮುಂದೆ ಸೋತು ಹೋಗುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು; ಯಾರೂ ಬೆನ್ನಟ್ಟಿ ಬರದಿದ್ದರು ನೀವು ಹೆದರಿ ಓಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಾನು ನಿಮ್ಮ ಮೇಲೆ ಕಡುಕೋಪಗೊಳ್ಳುವೆನು; ನೀವು ನಿಮ್ಮ ಶತ್ರುಗಳ ಮುಂದೆಯೇ ಸೋತುಬೀಳುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು. ಯಾರೂ ಬೆನ್ನಟ್ಟಿ ಬರದಿದ್ದರೂ ನೀವು ಹೆದರಿ ಓಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಾನು ನಿಮ್ಮ ಮೇಲೆ ಉಗ್ರಕೋಪವನ್ನು ಮಾಡುವದರಿಂದ ನೀವು ನಿಮ್ಮ ಶತ್ರುಗಳ ಎದುರಿನಿಂದ ಸೋತು ಬೀಳುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು; ಯಾರೂ ಹಿಂದಟ್ಟದೆ ಇರುವಾಗಲೂ ನೀವು ಹೆದರಿ ಓಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಾನು ನಿಮಗೆ ವಿಮುಖನಾಗಿರುವುದರಿಂದ ಆ ವೈರಿಗಳು ನಿಮ್ಮನ್ನು ಸೋಲಿಸುವರು. ಆ ವೈರಿಗಳು ನಿಮ್ಮನ್ನು ದ್ವೇಷಿಸುವರು ಮತ್ತು ನಿಮ್ಮನ್ನು ಆಳುವರು. ಯಾರೂ ನಿಮ್ಮನ್ನು ಬೆನ್ನಟ್ಟದಿದ್ದರೂ ಹೆದರಿಕೊಂಡು ಓಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಾನು ನಿಮಗೆ ವಿಮುಖನಾಗಿರುವೆನು. ಆದ್ದರಿಂದ ನೀವು ನಿಮ್ಮ ವೈರಿಗಳಿಂದ ಸೋತುಹೋಗುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗಲೂ ಓಡಿಹೋಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:17
30 ತಿಳಿವುಗಳ ಹೋಲಿಕೆ  

ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು, ಶಿಷ್ಟನು ಸಿಂಹದಂತೆ ಧೈರ್ಯದಿಂದಿರುವನು.


“‘ಇದಲ್ಲದೆ ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಾಗಲಿ ಯಾವನಾದರೂ ರಕ್ತಭೋಜನಮಾಡಿದರೆ ನಾನು ಆತನ ಮೇಲೆ ಉಗ್ರವಾದ ಕೋಪವನ್ನು ಮಾಡಿ ಅವನನ್ನು ಕುಲದಿಂದ ತೆಗೆದುಹಾಕುವೆನು.


ಭಯಪಡುವುದಕ್ಕೆ ಕಾರಣವಿಲ್ಲದಿದ್ದರೂ, ಅವರು ಪಕ್ಕನೆ ಭಯಭ್ರಾಂತರಾದರು; ದುಷ್ಟರನ್ನು ದೇವರು ಸಂಹರಿಸಿ ಅವರ ಎಲುಬುಗಳನ್ನು ಚದರಿಸಿಬಿಟ್ಟನಲ್ಲಾ. ದೇವರು ಅವರನ್ನು ಕೈಬಿಟ್ಟದ್ದರಿಂದ ಅವರು ಅವಮಾನಕ್ಕೊಳಗಾಗುವರು.


ನೀವು ಶತ್ರುಗಳಿಂದ ಸೋಲನ್ನು ಅನುಭವಿಸುವಂತೆ ಯೆಹೋವನು ಮಾಡುವನು; ನೀವು ಒಂದೇ ದಾರಿಯಿಂದ ಅವರೆದುರಿಗೆ ಹೋಗಿ ಏಳು ದಾರಿಗಳಿಂದ ಓಡಿಹೋಗುವಿರಿ. ಲೋಕದ ಎಲ್ಲಾ ರಾಜ್ಯಗಳವರೂ ಇದನ್ನು ಕಂಡು ಬೆರಗಾಗುವರು.


ನಾನು ಈ ಸ್ಥಳದಲ್ಲಿ ಯೆಹೂದ್ಯರ ಮತ್ತು ಯೆರೂಸಲೇಮಿನವರ ಆಲೋಚನೆಯನ್ನು ಮಣ್ಣುಪಾಲುಮಾಡಿ, ಅವರ ಪ್ರಾಣವನ್ನು ಹುಡುಕುವ ಶತ್ರುಗಳ ಖಡ್ಗದಿಂದ ಅವರನ್ನು ಬೀಳಿಸಿ, ಆ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಮತ್ತು ಭೂಜಂತುಗಳಿಗೂ ಆಹಾರವನ್ನಾಗಿ ಮಾಡುವೆನು.


ಆಗ ಯೆಹೋವನ ಕೋಪವು ಅವರ ಮೇಲೆ ಹೆಚ್ಚಾಯಿತು. ಆತನು ಅವರನ್ನು ಸೂರೆಮಾಡುವವರ ಕೈಗೆ ಒಪ್ಪಿಸಲು ಅವರು ಅವರನ್ನು ಸೂರೆಮಾಡಿದರು. ಆತನು ಅವರನ್ನು ಸುತ್ತಣ ವೈರಿಗಳಿಗೆ ಮಾರಿಬಿಟ್ಟನು. ಅವರು ಆ ಶತ್ರುಗಳ ಮುಂದೆ ನಿಲ್ಲಲಾರದವರಾದರು.


ಅದರ ಲೆಕ್ಕವಿಲ್ಲದ ದ್ರೋಹಗಳಿಗಾಗಿ ಯೆಹೋವನು ಅದನ್ನು ವ್ಯಥೆಗೊಳಿಸಿದ್ದಾನೆ; ಅದರ ವಿರೋಧಿಗಳು ಅದಕ್ಕೆ ಅಧಿಪತಿಗಳಾಗಿದ್ದಾರೆ, ಅದರ ಶತ್ರುಗಳು ನೆಮ್ಮದಿಯಲ್ಲಿದ್ದಾರೆ; ಅದರ ಎಳೆಕೂಸುಗಳು ವಿರೋಧಿಗಳ ವಶದಲ್ಲಿ ಸೆರೆಹೋಗಿವೆ.


ಫಿಲಿಷ್ಟಿಯರು ಇಸ್ರಾಯೇಲರೊಡನೆ ಯುದ್ಧಮಾಡಿದರು. ಇಸ್ರಾಯೇಲರು ಅವರಿಂದ ಅಪಜಯಹೊಂದಿ ಗಿಲ್ಬೋವ ಬೆಟ್ಟದಲ್ಲಿ ಹತರಾದರು.


ಫಿಲಿಷ್ಟಿಯರು ಯುದ್ಧಮಾಡಲು ಇಸ್ರಾಯೇಲರು ಸೋತು ತಮ್ಮ ತಮ್ಮ ಮನೆಗಳಿಗೆ ಓಡಿಹೋದರು. ಮಹಾ ಸಂಹಾರವಾಯಿತು; ಇಸ್ರಾಯೇಲರಲ್ಲಿ ಮೂವತ್ತು ಸಾವಿರ ಕಾಲಾಳುಗಳು ಮಡಿದರು.


ನೀನು ಭೂಮಿಯನ್ನು ವ್ಯವಸಾಯ ಮಾಡಿದರೂ, ಅದು ಇನ್ನು ಮುಂದೆ ನಿನಗೆ ಫಲಕೊಡುವುದಿಲ್ಲ. ನೀನು ಭೂಲೋಕದಲ್ಲಿ ಅಲೆದಾಡುವವನು ದೇಶ ಭ್ರಷ್ಟನೂ ಆಗಿರುವಿ” ಎಂದನು.


ಅದರಂತೆ ಸುಮಾರು ಮೂರು ಸಾವಿರ ಮಂದಿ ಯುದ್ಧಕ್ಕೆ ಹೋದರು. ಆದರೆ ಅವರು ಆಯಿ ಊರಿನವರ ಎದುರಿನಿಂದ ಓಡಿ ಹೋಗಬೇಕಾಯಿತು.


“ತಮ್ಮ ಪಾಪಗಳ ಫಲವಾಗಿ ಶತ್ರುಗಳಿಂದ ತಗ್ಗಿಸಲ್ಪಟ್ಟ ನಿನ್ನ ಪ್ರಜೆಗಳಾದ ಇಸ್ರಾಯೇಲರು ನಿನ್ನ ಕಡೆಗೆ ತಿರುಗಿಕೊಂಡು ನಿನ್ನ ನಾಮವನ್ನು ಸ್ತುತಿಸಿ ಈ ಆಲಯದಲ್ಲಿ ನಿನಗೆ ವಿಜ್ಞಾಪನೆಯನ್ನು ಮತ್ತು ಪ್ರಾರ್ಥನೆಯನ್ನೂ ಮಾಡುವುದಾದರೆ,


ನಾವು ಹಗೆಗಳಿಗೆ ಬೆನ್ನುಕೊಟ್ಟು ಓಡಿಹೋಗುವಂತೆ ಮಾಡಿದಿ; ನಮ್ಮ ವೈರಿಗಳು ತಮಗೋಸ್ಕರ ಬೇಕಾದ ಹಾಗೆ ಕೊಳ್ಳೆಹೊಡೆಯುತ್ತಾರೆ.


“ಆದಕಾರಣ ಇಸ್ರಾಯೇಲಿನ ದೇವರೂ, ಸೇನಾಧೀಶ್ವರನು ಆದ ಯೆಹೋವನು ಹೀಗೆನ್ನುತ್ತಾನೆ, ಆಹಾ, ಯೆಹೂದವನ್ನೆಲ್ಲಾ ನಿರ್ಮೂಲಮಾಡುವೆನು, ಕೇಡಿಗಾಗಿಯೇ ನಿಮ್ಮ ಮೇಲೆ ದೃಷ್ಟಿಯಿಡುವೆನು.


ಅವರ ಮೇಲೆ ಕೋಪ ದೃಷ್ಟಿಯನ್ನಿಡುವೆನು; ಅವರು ಬೆಂಕಿಯೊಳಗಿಂದ ತಪ್ಪಿಸಿಕೊಂಡರೂ, ಬೆಂಕಿಯು ಅವರನ್ನು ನುಂಗಿಬಿಡುವುದು; ನಾನು ಅವರ ಮೇಲೆ ಕೋಪ ದೃಷ್ಟಿಯನ್ನಿಡುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.


ಆದ್ದರಿಂದ ಆತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು, ಅವರನ್ನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ನಹರಾಯಿಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮ್ ಎಂಬುವವನಿಗೆ ಮಾರಿಬಿಟ್ಟನು. ಅವರು ಎಂಟು ವರ್ಷಗಳ ವರೆಗೆ ಅವನಿಗೆ ದಾಸರಾಗಿದ್ದರು.


ಇಸ್ರಾಯೇಲರು ಅವನಿಗೆ ಹದಿನೆಂಟು ವರ್ಷ ದಾಸರಾಗಿದ್ದರು.


ಮಿದ್ಯಾನ್ಯರ ಹಸ್ತವು ಬಲಗೊಂಡಿದ್ದರಿಂದ ಇಸ್ರಾಯೇಲರು ಅವರಿಗೆ ಹೆದರಿ ಪರ್ವತಗಳಲ್ಲಿ ಗುಹೆಗಳನ್ನು, ಕಂದರಗಳನ್ನು ಮಾಡಿಕೊಂಡು ಅದರಲ್ಲಿ ವಾಸಿಸುತ್ತಿದ್ದರು.


ನೀವು ಯೆಹೋವನ ಮಾತನ್ನು ಕೇಳದೆಯೂ, ಆತನ ಆಜ್ಞೆಗಳನ್ನು ಕೈಕೊಳ್ಳದೆಯೂ ಹೋದರೆ, ಆತನ ಹಸ್ತವು ನಿಮ್ಮ ಹಿರಿಯರಿಗೆ ವಿರೋಧವಾಗಿದ್ದಂತೆ ನಿಮಗೂ ವಿರೋಧವಾಗಿಯೇ ಇರುವುದು.


ಆದುದರಿಂದ ಯೆಹೋವನು ಇಸ್ರಾಯೇಲರ ಮೇಲೆ ಕೋಪಗೊಂಡು ಅವರನ್ನು ಅರಾಮ್ಯರ ಅರಸನಾದ ಹಜಾಯೇಲನ ಕೈಗೂ ಅವನ ಮಗನಾದ ಬೆನ್ಹದದನ ಕೈಗೂ ಒಪ್ಪಿಸಿದನು. ಅವರು ಯೆಹೋವಾಹಾಜನ ಜೀವಮಾನದಲ್ಲೆಲ್ಲಾ ಅವರ ಅಧೀನದಲ್ಲಿದ್ದರು.


ಯೆಹೋವಾಹಾಜನಿಗೆ ಐವತ್ತು ಮಂದಿ ರಾಹುತರು, ಹತ್ತು ರಥಗಳು, ಹತ್ತು ಸಾವಿರ ಮಂದಿ ಕಾಲಾಳುಗಳು ಮಾತ್ರ ಉಳಿದರು. ಅರಾಮ್ಯರ ಅರಸನು ಬೇರೆ ಎಲ್ಲರನ್ನೂ ಸಂಹರಿಸಿ ಕಣದ ಧೂಳಿನಂತೆ ಮಾಡಿದನು.


ಚೀಯೋನಿನಿಂದ ಇಸ್ರಾಯೇಲ್ಯರಿಗೆ ರಕ್ಷಣೆಯು ಬೇಗನೆ ಬರಲಿ. ದೇವರು ತನ್ನ ಭಾಗ್ಯವನ್ನು ಜನರಿಗೆ ಹಿಂದಿರುಗಿಸುವಾಗ, ಆತನ ಪ್ರಜೆಗಳಾಗಿರುವ ಯಾಕೋಬ ವಂಶದವರು ಉಲ್ಲಾಸಗೊಳ್ಳುವರು; ಇಸ್ರಾಯೇಲರು ಹರ್ಷಿಸುವರು.


ಒಬ್ಬನ ಬೆದರಿಕೆಗೆ ಒಂದು ಸಾವಿರ ಜನರು ಓಡುವರು; ಐವರು ಬೆದರಿಸುವುದರಿಂದ ನೀವು ಓಡಿಹೋಗುವಿರಿ; ಕಟ್ಟಕಡೆಗೆ ಬೆಟ್ಟದ ಶಿಖರದಲ್ಲಿನ ಸ್ತಂಭದ ಹಾಗೂ ಗುಡ್ಡದ ಮೇಲಿನ ಕಂಬದಂತೆಯೂ ಒಂಟಿಯಾಗಿ ಉಳಿಯುವಿರಿ.”


ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮವನ್ನು ದುಃಖಪಡಿಸಿದರು; ಆದುದರಿಂದ ಆತನು ಮಾರ್ಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು.


ವೈರಿಯ ಹಾಗೆ ಬಿಲ್ಲನ್ನು ಬೊಗ್ಗಿಸಿ, ವಿರೋಧಿಯಂತೆ ಬಲಗೈಯೆತ್ತಿ ನಿಂತು, ಸುಂದರ ಪ್ರಜೆಯನ್ನೆಲ್ಲಾ ಸಂಹರಿಸಿದ್ದಾನೆ; ಚೀಯೋನ್ ಗುಡಾರದ ಮೇಲೆ ತನ್ನ ರೋಷಾಗ್ನಿಯನ್ನು ಸುರಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು