ಯಾಜಕಕಾಂಡ 26:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಶತ್ರುಗಳ ಕತ್ತಿಯ ಮೂಲಕವಾಗಿ ನಿಮ್ಮನ್ನು ಸಂಹರಿಸುವೆನು; ನೀವು ನನ್ನ ನಿಬಂಧನೆಯನ್ನು ಮೀರಿದ್ದರಿಂದ ಆ ಕತ್ತಿಯು ಪ್ರತಿದಂಡನೆಮಾಡುವುದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ನಿಮ್ಮಲ್ಲಿ ಅಂಟುರೋಗ ಉಂಟಾಗುವಂತೆ ಮಾಡುವೆನು; ಹೀಗೆ ನೀವು ಶತ್ರುಗಳ ಕೈಗೆ ಬೀಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಶತ್ರುಗಳ ಕತ್ತಿಯ ಮೂಲಕ ನಿಮ್ಮನ್ನು ಸಂಹರಿಸುವೆನು.ನೀವು ನನ್ನ ನಿಬಂಧನವನ್ನು ಮೀರಿದುದರಿಂದ ಆ ಕತ್ತಿ ಪ್ರತಿದಂಡನೆ ಮಾಡುವುದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ಅಂಟುರೋಗವುಂಟಾಗುವಂತೆ ಮಾಡುವೆನು. ಹೀಗೆ ನೀವು ಶತ್ರುಗಳಿಗೆ ಶರಣಾಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಶತ್ರುಗಳ ಕತ್ತಿಯ ಮೂಲಕವಾಗಿ ನಿಮ್ಮನ್ನು ಸಂಹರಿಸುವೆನು; ನೀವು ನನ್ನ ನಿಬಂಧನವನ್ನು ಮೀರಿದದರಿಂದ ಆ ಕತ್ತಿಯು ಪ್ರತಿದಂಡನೆಮಾಡುವದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ನಿಮ್ಮಲ್ಲಿ ಅಂಟುರೋಗವುಂಟಾಗುವಂತೆ ಮಾಡುವೆನು; ಹೀಗೆ ನೀವು ಶತ್ರುಗಳ ಕೈಗೆ ಬೀಳುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ನೀವು ನನ್ನ ಒಡಂಬಡಿಕೆಯನ್ನು ಮೀರಿದ್ದರಿಂದ ನಾನು ನಿಮ್ಮನ್ನು ದಂಡಿಸುವೆನು. ನಿಮಗೆ ವಿರೋಧವಾಗಿ ಸೈನ್ಯಗಳನ್ನು ಬರಮಾಡುವೆ. ನೀವು ಭದ್ರತೆಗಾಗಿ ನಿಮ್ಮ ಪಟ್ಟಣಗಳೊಳಗೆ ಹೋಗುವಿರಿ. ಆದರೆ ವ್ಯಾಧಿಯು ನಿಮ್ಮಲ್ಲಿ ಹಬ್ಬುವಂತೆ ಮಾಡುವೆ. ನಿಮ್ಮ ವೈರಿಗಳು ನಿಮ್ಮನ್ನು ಸೋಲಿಸುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಒಡಂಬಡಿಕೆಯನ್ನು ಮುರಿದದ್ದಕ್ಕಾಗಿ, ಮುಯ್ಯಿಗೆ ಮುಯ್ಯಿ ತೀರಿಸುವ ಖಡ್ಗವನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಸೇರಿದಾಗ, ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನಿಮ್ಮನ್ನು ಶತ್ರುವಿನ ಕೈಗೆ ಒಪ್ಪಿಸಲಾಗುವುದು. ಅಧ್ಯಾಯವನ್ನು ನೋಡಿ |