Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನಾನು ನಿಮ್ಮ ಮೇಲೆ ಕೋಪಗೊಂಡವನಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟಾಗಿ ಶಿಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನಾನು ನಿಮಗೆ ವಿರುದ್ಧ ಕೋಪದಿಂದ ವರ್ತಿಸುವೆನು. ನಿಮ್ಮ ಪಾಪಗಳ ಕಾರಣ ಏಳ್ಮಡಿಯಾಗಿ ಶಿಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನಾನು ನಿಮಗೆ ವಿರೋಧವಾಗಿ ಕೋಪದಿಂದ ನಡೆಯುವವನಾಗಿ ನಿಮ್ಮ ಪಾಪಗಳ ನಿಮತ್ತ ಏಳರಷ್ಟಾಗಿ ಶಿಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನಾನು ನಿಜವಾಗಿ ನನ್ನ ಕೋಪವನ್ನು ತೋರಿಸುವೆನು. ಹೌದು, ನಾನೇ ನಿಮ್ಮ ಪಾಪಗಳಿಗಾಗಿ ನಿಮ್ಮನ್ನು ಏಳರಷ್ಟಾಗಿ ದಂಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು, ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:28
16 ತಿಳಿವುಗಳ ಹೋಲಿಕೆ  

ತನ್ನ ವಿರೋಧಿಗಳಲ್ಲಿಟ್ಟ ಕ್ರೋಧವನ್ನು ಈಡೇರಿಸಿ, ತನ್ನ ಶತ್ರುಗಳಿಗೆ ದಂಡನೆಯನ್ನು ವಿಧಿಸಿ, ಅವರವರ ಕೃತ್ಯಗಳಿಗೆ ತಕ್ಕಂತೆ ಮುಯ್ಯಿತೀರಿಸುವನು; ಕರಾವಳಿಯಲ್ಲಿರುವವರಿಗೂ ತಕ್ಕ ಪ್ರತಿಫಲವನ್ನು ನೀಡುವನು.


ಆದಕಾರಣ ನಾನು ಕೋಪೋದ್ರೇಕದಿಂದ ವರ್ತಿಸುವೆನು, ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ; ಅವರು ಕೂಗಿಕೊಳ್ಳುವ ಮಹಾ ಶಬ್ದವು ನನ್ನ ಕಿವಿಗೆ ಬಿದ್ದರೂ ಆಲಿಸುವುದಿಲ್ಲ.”


“ನಾನು ಕೋಪದಿಂದಲೂ, ರೋಷದಿಂದಲೂ, ಕಠಿಣವಾದ ಖಂಡನೆಯಿಂದಲೂ, ನಿನಗೆ ಮಾಡುವ ದಂಡನೆಗಳು ಸುತ್ತಲಿನ ಜನಾಂಗಗಳ ದೂಷಣೆಗೂ, ಪರಿಹಾಸ್ಯಗಳಿಗೂ, ಬುದ್ಧಿವಾದಗಳಿಗೂ ಆಸ್ಪದವಾಗುವವು; ಇದು ಯೆಹೋವನಾದ ನನ್ನ ನುಡಿ.


“ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಸುರಿದು ಶಾಂತನಾಗುವೆನು; ರೋಷದಿಂದ ಮಾತನಾಡಿದವನು ಯೆಹೋವನಾದ ನಾನೇ ಎಂಬುದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವುದು.


ನಾನೇ ಕೋಪ, ರೋಷ, ಮಹಾಕ್ರೋಧಭರಿತನಾಗಿ ಶಿಕ್ಷಾಹಸ್ತದಿಂದಲೂ ಮತ್ತು ಭುಜಪರಾಕ್ರಮದಿಂದಲೂ ನಿಮ್ಮ ವಿರುದ್ಧವಾಗಿ ಯುದ್ಧಮಾಡುವೆನು.


ಆಹಾ, ಯೆಹೋವನು ಬೆಂಕಿಯನ್ನು ಕಟ್ಟಿಕೊಂಡು ಬರುವನು; ಆತನ ರಥಗಳು ಬಿರುಗಾಳಿಯಂತಿರುವವು; ರೌದ್ರಾವೇಶದಿಂದ ತನ್ನ ಸಿಟ್ಟನ್ನು ತೀರಿಸುವನು, ಅಗ್ನಿ ಜ್ವಾಲೆಯಿಂದ ಖಂಡಿಸುವನು.


ನಾನೊಬ್ಬನೇ ದ್ರಾಕ್ಷಿಯನ್ನು ತೊಟ್ಟಿಯಲ್ಲಿ ತುಳಿದಿದ್ದೇನೆ, ಜನಾಂಗದವರಲ್ಲಿ ಯಾರೂ ನನ್ನೊಂದಿಗಿರಲಿಲ್ಲ. ನನ್ನ ಕೋಪದಿಂದ ಶತ್ರುಗಳನ್ನು ತುಳಿದೆನು, ರೋಷವೇರಿದವನಾಗಿ ಅವರನ್ನು ತುಳಿದುಹಾಕಿದೆನು; ಅವರ ಜೀವಸತ್ವ ನನ್ನ ವಸ್ತ್ರಗಳ ಮೇಲೆ ಸಿಡಿದಿದೆ, ನನ್ನ ಉಡುಪನ್ನೆಲ್ಲಾ ಮಲಿನ ಮಾಡಿಕೊಂಡೆನು.


ಆತನ ಸಿಟ್ಟಿಗೆ ಯಾರು ಎದುರು ನಿಲ್ಲಲು ಸಾಧ್ಯ? ಆತನ ರೋಷಾಗ್ನಿಯ ಎದುರು ಯಾರು ನಿಂತಾರು? ಆತನ ರೌದ್ರವು ಜ್ವಾಲಾಪ್ರವಾಹದಂತೆ ಹರಿಯುತ್ತದೆ. ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.


ಯೆಹೋವನು ಸ್ವಗೌರವವನ್ನು ಕಾಪಾಡಿಕೊಳ್ಳುವ ದೇವರು. ಆತನು ಮುಯ್ಯಿತೀರಿಸುವವನು; ಹೌದು ಯೆಹೋವನು ಮುಯ್ಯಿತೀರಿಸುವವನು, ಕೋಪಭರಿತನು; ಯೆಹೋವನು ತನ್ನ ವಿರೋಧಿಗಳಿಗೆ ಮುಯ್ಯಿತೀರಿಸುತ್ತಾನೆ. ತನ್ನ ಶತ್ರುಗಳ ಮೇಲೆ ದೀರ್ಘರೋಷವಿಡುತ್ತಾನೆ.


ರೌದ್ರವು ನನ್ನಲ್ಲಿಲ್ಲ; ದತ್ತೂರಿ ಮತ್ತು ಮುಳ್ಳು ನನಗೆ ಎದುರುಬಿದ್ದರೆ, ಅವುಗಳಿಗೆ ವಿರುದ್ಧವಾಗಿ ಯುದ್ಧಮಾಡಿ, ಒಟ್ಟಿಗೆ ಸುಟ್ಟುಬಿಡುವೆನು.


ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಬಾಧಿಸುವೆನು.


“ಇದನ್ನೆಲ್ಲಾ ನೀವು ಅನುಭವಿಸಿದ ಮೇಲೆಯೂ ಇನ್ನೂ ನನ್ನ ಮಾತನ್ನು ಕೇಳದೆ ನನಗೆ ವಿರೋಧವಾಗಿ ನಡೆದರೆ,


ನಾನು ಅವರಿಗೆ ವಿರೋಧವಾಗಿ ನಡೆದುಕೊಂಡು ಶತ್ರುದೇಶದಲ್ಲಿ ಸೆರೆಯವರನ್ನಾಗಿ ಮಾಡಬೇಕಾಯಿತೆಂದೂ ಒಪ್ಪಿ, ತಮ್ಮ ಮೊಂಡತನವನ್ನು ಬಿಟ್ಟು ನನ್ನ ಆಜ್ಞೆಗೆ ತಲೆ ಬಾಗಿ ತಮ್ಮ ಪಾಪದಿಂದುಂಟಾದ ಶಿಕ್ಷೆಯನ್ನು ಸ್ವೀಕರಿಸುವುದಾದರೆ,


ಸ್ವಾಮಿಯೇ, ನಿನ್ನನ್ನು ನಿಂದಿಸಿದ ಸುತ್ತಣ ಜನಾಂಗಗಳ ಉಡಿಲಲ್ಲಿ, ಏಳರಷ್ಟು ನಿಂದನೆ ತುಂಬಿರುವಂತೆ ಮಾಡು.


ಹೀಗಿರಲು ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ, “ಆಹಾ, ನನ್ನ ಕೋಪವೆಂಬ ರೋಷಾಗ್ನಿಯು ಈ ಸ್ಥಳದಲ್ಲಿ ಸುರಿಯಲ್ಪಡುವುದು; ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ, ಕಾಡುಮರಗಳ ಮೇಲೆಯೂ, ಭೂಮಿಯ ಬೆಳೆಯ ಮೇಲೆಯೂ ಅದನ್ನು ಸುರಿಯುವೆನು; ಅದು ಆರದೆ ದಹಿಸುವುದು.”


ಯೆಹೋವನು ತನ್ನ ರೋಷಾಗ್ನಿಯನ್ನು ಸುರಿಸಿ ತನ್ನ ಸಿಟ್ಟನ್ನು ತೀರಿಸಿದ್ದಾನೆ; ಚೀಯೋನಿನ ಅಸ್ತಿವಾರಗಳನ್ನು ನುಂಗಿಬಿಟ್ಟ ಬೆಂಕಿಯನ್ನು ಅಲ್ಲಿ ಹೊತ್ತಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು